Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WPL 2023: ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಮುಂಬೈ ಇಂಡಿಯನ್ಸ್ ಸವಾಲು ಟಾಸ್ ರಿಪೋರ್ಟ್, Live ಸ್ಕೋರ್

WPL 2023: MI vs RCB, 4th match Toss report, Playing XI and Live score

ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಇಂದು ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಣಕ್ಕಿಳಿದಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಮುಂಬೈ ಇಂಡಿಯನ್ಸ್ ತಂಡ ಆರಂಭದಲ್ಲಿ ಬೌಲಿಂಗ್ ದಾಳಿ ನಡೆಸುವ ಸವಾಲು ಸ್ವೀಕರಿಸಿದೆ

ಮುಂಬೈ ಇಂಡಿಯನ್ಸ್ ತಂಡ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವಿನಿಂದಿಗೆ ಟೂರ್ನಿಯಲ್ಲಿ ಶುಭಾರಂಭ ಮಾಡಿದರೆ ಸ್ಮೃತಿ ಮಂಧಾನ ನೇತೃತ್ವದ ಆರ್‌ಸಿಬಿ ತಂಡ ಮೊದಲ ಪಂದ್ಯದಲ್ಲಿ ಸೋಲು ಅನುಭವಿಸಿ ಹಿನ್ನಡೆ ಕಂಡಿತ್ತು. ಟೂರ್ನಿಯ ಆರಂಭಿಕ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಬೃಹತ್ ಅಂತರದಿಂದ ಮುಂಬೈ ಇಂಡಿಯನ್ಸ್ ಗೆದ್ದು ಬೀಗಿತ್ತು.

ಆದರೆ ಆರ್‌ಸಿಬಿ ತನ್ನ ಆರಂಭಿಕ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಿದ್ದು ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ವಿಭಾಗದಲ್ಲಿಯೂ ಹಿನ್ನಡೆ ಅನುಭವಿಸಿ ದೊಡ್ಡ ಅಂತರದ ಸೋಲು ಕಂಡಿದೆ. ಹೀಗಾಗಿ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಗೆಲುವಿನ ರುಚಿ ಕಾಣುವ ಹಂಬಲದಲ್ಲಿದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ.

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಪಂದ್ಯದಲ್ಲಿ ಒಂದು ಬದಲಾವಣೆ ಮಾಡಿಕೊಂಡು ಕಣಕ್ಕಿಳಿದಿದ್ದು ಮುಂಬೈ ಇಂಡಿಯನ್ಸ್ ಯಾವುದೇ ಬದಲಾವಣೆಯಿಲ್ಲದೆ ಗೆಲುವಿನ ಸಂಯೋಜನೆಯೊಂದಿಗೆ ಕಣಕ್ಕಿಳಿದಿದೆ.

ಮುಂಬೈ ಇಂಡಿಯನ್ಸ್ ಆಡುವ ಬಳಗ: ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಹೇಲಿ ಮ್ಯಾಥ್ಯೂಸ್, ನ್ಯಾಟ್ ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಅಮೆಲಿಯಾ ಕೆರ್, ಪೂಜಾ ವಸ್ತ್ರಾಕರ್, ಇಸ್ಸಿ ವಾಂಗ್, ಅಮನ್ಜೋತ್ ಕೌರ್, ಹುಮೈರಾ ಕಾಜಿ, ಜಿಂತಿಮನಿ ಕಲಿತಾ, ಸೈಕಾ ಇಶಾಕ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ದಿಶಾ ಕಸತ್, ರಿಚಾ ಘೋಷ್(ವಿಕೆಟ್ ಕೀಪರ್), ಹೀದರ್ ನೈಟ್, ಕನಿಕಾ ಅಹುಜಾ, ಮೇಗನ್ ಶುಟ್, ಶ್ರೇಯಾಂಕಾ ಪಾಟೀಲ್, ಪ್ರೀತಿ ಬೋಸ್, ರೇಣುಕಾ ಠಾಕೂರ್ ಸಿಂಗ್

Story first published: Monday, March 6, 2023, 19:11 [IST]
Other articles published on Mar 6, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+