Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WPL 2023: ಮುಂಬೈ ಇಂಡಿಯನ್ಸ್ ಆಲ್‌ರೌಂಡ್ ಪ್ರದರ್ಶನ; RCB ವಿರುದ್ಧ ಗೆದ್ದು ಪ್ಲೇಆಫ್ ಪ್ರವೇಶಿಸಿದ ಕೌರ್ ಪಡೆ

WPL 2023: Mumbai Indians Beat Royal Chellengers Bangalore By 4 Wickets In WPL

ಮಂಗಳವಾರ, ಮಾರ್ಚ್ 21ರಂದು ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ 2023ರ ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್‌ನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿರುದ್ಧ ಮುಂಬೈ ಇಂಡಿಯನ್ಸ್ ತಂಡವು 4 ವಿಕೆಟ್‌ಗಳ ಅಮೋಘ ಗೆಲುವು ದಾಖಲಿಸಿದೆ.

ಸ್ಮೃತಿ ಮಂಧಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ನೀಡಿದ್ದ 126 ರನ್‌ಗಳ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ 16.3 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 129 ರನ್ ಬಾರಿಸಿ ಪಂದ್ಯಾವಳಿಯ 6ನೇ ಜಯ ಸಾಧಿಸಿತು. ಈ ಮೂಲಕ ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಮುಂಬೈ ಇಂಡಿಯನ್ಸ್ ಪ್ಲೇಆಫ್ ಪ್ರವೇಶಿಸಿದೆ.

ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಆರಂಭಿಸಿದ ಹೇಲಿ ಮ್ಯಾಥ್ಯೂಸ್ ಮತ್ತು ಯಾಸ್ತಿಕಾ ಭಾಟಿಯಾ ಉತ್ತಮ ಆರಂಭ ನೀಡಿದರು. ಮೊದಲ ವಿಕೆಟ್‌ಗೆ 6 ಓವರ್‌ಗಳಲ್ಲಿ 53 ರನ್‌ಗಳ ಜೊತೆಯಾಟ ನೀಡಿದರು.

ಯಾಸ್ತಿಕಾ ಭಾಟಿಯಾ 26 ಎಸೆತಗಳಲ್ಲಿ 6 ಬೌಂಡರಿಗಳ ನೆರವಿನಿಂದ 30 ರನ್ ಗಳಿಸಿದರೆ, ಹೇಲಿ ಮ್ಯಾಥ್ಯೂಸ್ 17 ಎಸೆತಗಳಲ್ಲಿ 2 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ 24 ರನ್ ಬಾರಿಸಿದರು.

WPL 2023: Mumbai Indians Beat Royal Chellengers Bangalore By 4 Wickets In WPL

ನಂತರ, ನ್ಯಾಟ್ ಸೀವರ್-ಬ್ರಂಟ್ 13 ರನ್, ಅಮೇಲಿಯಾ ಕೆರ್ 27 ಎಸೆತಗಳಲ್ಲಿ 31 ರನ್, ಪೂಜಾ ವಸ್ತ್ರಾಕರ್ 18 ಎಸೆತಗಳಲ್ಲಿ 19 ರನ್ ಗಳಿಸಿ ತಂಡವನ್ನು ಗೆಲ್ಲಿಸಿದರು.

ಬೌಲಿಂಗ್‌ನಲ್ಲಿ ಆರ್‌ಸಿಬಿ ಪರ ಕನಿಕಾ ಅಹುಜಾ 1 ಓವರ್‌ನಲ್ಲಿ 5 ರನ್ ನೀಡಿ 2 ವಿಕೆಟ್ ಪಡೆದರೆ, ಮೇಗನ್ ಶುಟ್, ಶ್ರೇಯಾಂಕ ಪಾಟೀಲ್, ಎಲ್ಲಿಸ್ ಪೆರ್ರಿ, ಆಶಾ ಶೋಬನಾ ತಲಾ ಒಂದೊಂದು ವಿಕೆಟ್ ಪಡೆದರು.

ಇದಕ್ಕೂ ಮುನ್ನ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸ್ಮೃತಿ ಮಂಧಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 125 ರನ್ ಗಳಿಸಿದ್ದು, ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡಕ್ಕೆ 126 ರನ್‌ಗಳ ಗುರಿ ನೀಡಿದೆ.

WPL 2023: Mumbai Indians Beat Royal Chellengers Bangalore By 4 Wickets In WPL

ಆರ್‌ಸಿಬಿ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಸ್ಮೃತಿ ಮಂಧಾನ ಮತ್ತು ಸೋಫಿ ಡಿವೈನ್ ಉತ್ತಮ ಆರಂಭ ನೀಡುವಲ್ಲಿ ವಿಫಲರಾದರು. ಮೊದಲ ಓವರ್‌ನ ಮೂರನೇ ಎಸೆತದಲ್ಲಿ ಇಲ್ಲದ ರನ್ ಕದಿಯಲು ಹೋಗಿ ಸೋಫಿ ಡಿವೈನ್ ರನೌಟ್ ಆದರು.

ನಂತರ ಬಂದ ಎಲ್ಲಿಸ್ ಪೆರ್ರಿ 38 ಎಸೆತಗಳಲ್ಲಿ 29 ರನ್ ಗಳಿಸಿದರೆ, ನಾಯಕಿ ಸ್ಮೃತಿ ಮಂಧಾನ 25 ಎಸೆತಗಳಲ್ಲಿ 24 ರನ್ ಬಾರಿಸಿ ಔಟಾದರು. ಹೀದರ್ ನೈಟ್ 12 ರನ್, ಕನಿಕಾ ಅಹುಜಾ 12 ರನ್ ಮತ್ತು ಕೊನೆಯಲ್ಲಿ ರಿಚಾ ಘೋಷ್ 13 ಎಸೆತಗಳಲ್ಲಿ 29 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

ಬೌಲಿಂಗ್‌ನಲ್ಲಿ ಅಮೆಲಿಯಾ ಕೆರ್ 4 ಓವರ್‌ಗಳಲ್ಲಿ 22 ರನ್ ನೀಡಿ 3 ವಿಕೆಟ್ ಪಡೆದರೆ, ನ್ಯಾಟ್ ಸೀವರ್-ಬ್ರಂಟ್ 4 ಓವರ್‌ಗಳಲ್ಲಿ 24 ರನ್ ನೀಡಿ 2 ವಿಕೆಟ್ ಕಬಳಿಸಿದರು. ಇಸ್ಸಿ ವಾಂಗ್ 4 ಓವರ್‌ಗಳಲ್ಲಿ 26 ರನ್ ನೀಡಿ 2 ವಿಕೆಟ್ ಪಡೆದರೆ, ಉಳಿದಂತೆ ಸೈಕ್ ಇಶಾಕ್ ಒಂದು ವಿಕೆಟ್ ಉರುಳಿಸಿದರು.

Story first published: Tuesday, March 21, 2023, 18:54 [IST]
Other articles published on Mar 21, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+