WPL 2023: ಹರ್ಮನ್‌ಪ್ರೀತ್ ಕೌರ್ ಅರ್ಧಶತಕ: ಜಯದ ಓಟ ಮುಂದುವರೆಸಿದ ಮುಂಬೈ ಇಂಡಿಯನ್ಸ್

ಮಹಿಳಾ ಪ್ರೀಮಿಯರ್ ಲೀಗ್ 2023ರ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತನ್ನ ಜಯದ ಓಟವನ್ನು ಮುಂದುವರೆಸಿದೆ. ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.
160 ರನ್‌ಗಳ ಸವಾಲಿನ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ಕೇವಲ 17.3 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು 164 ರನ್ ಗಳಿಸುವ ಮೂಲಕ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಹೇಲಿ ಮ್ಯಾಥ್ಯೂಸ್ 12 ರನ್ ಗಳಿಸಿ ಔಟಾದರೂ, ಯಾಸ್ತಿಕಾ ಭಾಟಿಯಾ, ನಾಟ್ ಸಿವರ್ ಬ್ರಂಟ್ ಮತ್ತು ಹರ್ಮನ್‌ಪ್ರೀತ್ ಕೌರ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರು.
ಯಾಸ್ತಿಕಾ ಭಾಟಿಯಾ 27 ಎಸೆತಗಳಲ್ಲಿ 8 ಬೌಂಡರಿ ಮತ್ತು ಒಂದು ಭರ್ಜರಿ ಸಿಕ್ಸರ್ ಸಹಿತ 42 ರನ್ಗಳಿಸಿದರೆ, ನಾಟ್ ಸಿವರ್ ಬ್ರಂಟ್ 31 ಎಸೆತಗಳಲ್ಲಿ 6 ಬೌಂಡರಿ ಒಂದು ಸಿಕ್ಸರ್ ಸಹಿತ ಅಜೇಯ 45 ರನ್ ಗಳಿಸಿದರು. ನಾಯಕಿ ಹರ್ಮನ್‌ಪ್ರೀತ್ ಕೌರ್ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದರು. 33 ಎಸೆತಗಳಲ್ಲಿ 9 ಬೌಂಡರಿ, 1 ಭರ್ಜರಿ ಸಿಕ್ಸರ್ ಸಹಿತ ಅಜೇಯ 53 ರನ್ ಗಳಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು.

ಸಾಧಾರಣ ಮೊತ್ತ ದಾಖಲಿಸಿದ ಯುಪಿ ವಾರಿಯರ್ಸ್
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಯುಪಿ ವಾರಿಯರ್ಸ್ ಉತ್ತಮ ಆರಂಭ ಪಡೆದರು, ಅಂತಿಮ ಓವರ್ ಗಳಲ್ಲಿ ಎಡವಿತು. ನಾಯಕಿ ಅಲಿಸ್ಸಾ ಹೀಲಿ ಮತ್ತು ಆಲ್‌ರೌಂಡರ್ ತಹಿಲಾ ಮೆಕ್‌ಗ್ರಾತ್ ಅರ್ಧಶತಕ ಗಳಿಸಿದರೆ, ಉಳಿದ ಬ್ಯಾಟರ್ ಗಳು ಉತ್ತಮ ರನ್ ಗಳಿಸುವಲ್ಲಿ ಎಡವಿದರು. ನಾಯಕಿ ಅಲಿಸ್ಸಾ ಹೀಲಿ 46 ಎಸೆತಗಳಲ್ಲಿ 7 ಬೌಂಡರಿ ಒಂದು ಸಿಕ್ಸರ್ ನೆರವಿನಿಂದ 58 ರನ್ ಗಳಿಸಿದರು. ತಹಿಲಾ ಮೆಕ್‌ಗ್ರಾತ್ 37 ಎಸೆತಗಳಲ್ಲಿ 9 ಬೌಂಡರಿ ನೆರವಿನಿಂದ 50 ರನ್ ಗಳಿಸಿ ಔಟಾದರು.
ಯುಪಿ ವಾರಿಯರ್ಸ್ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 159 ರನ್ ಗಳಿಸಿತು. ಸೈಕಾ ಇಶಾಕ್ 4 ಓವರ್ ಗಳಲ್ಲಿ 33 ರನ್ ನೀಡಿ 3 ವಿಕೆಟ್ ಪಡೆದುಕೊಂಡರು. ಅಮೆಲಿಯಾ ಕೆರ್ 2 ವಿಕೆಟ್ ಪಡೆದರೆ, ಹೈಲಿ ಮ್ಯಾಥ್ಯೂಸ್ ಒಂದು ವಿಕೆಟ್ ಪಡೆದರು.

ಉಭಯ ತಂಡಗಳ ಆಡುವ ಬಳಗ
ಮುಂಬೈ ಇಂಡಿಯನ್ಸ್: ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಹೇಲಿ ಮ್ಯಾಥ್ಯೂಸ್, ನ್ಯಾಟ್ ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಧಾರಾ ಗುಜ್ಜರ್, ಅಮೆಲಿಯಾ ಕೆರ್, ಇಸ್ಸಿ ವಾಂಗ್, ಅಮಾನ್ಜೋತ್ ಕೌರ್, ಹುಮೈರಾ ಕಾಜಿ, ಜಿಂಟಿಮಣಿ ಕಲಿತಾ, ಸೈಕಾ ಇಶಾಕ್.
ಯುಪಿ ವಾರಿಯರ್ಸ್ : ದೇವಿಕಾ ವೈದ್ಯ, ಅಲಿಸ್ಸಾ ಹೀಲಿ (ನಾಯಕಿ), ಶ್ವೇತಾ ಸೆಹ್ರಾವತ್, ಕಿರಣ್ ನವಗಿರೆ, ತಹ್ಲಿಯಾ ಮೆಗ್ರಾತ್, ದೀಪ್ತಿ ಶರ್ಮಾ, ಸಿಮ್ರಾನ್ ಶೇಖ್, ಸೋಫಿ ಎಕ್ಲೆಸ್ಟೋನ್, ಶಬ್ನಿಮ್ ಇಸ್ಮಾಯಿಲ್, ಅಂಜಲಿ ಸರ್ವಾಣಿ, ರಾಜೇಶ್ವರಿ ಗಾಯಕ್ವಾಡ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications