WPL 2023: ಮತ್ತೊಮ್ಮೆ ಬ್ಯಾಟಿಂಗ್ ವೈಫಲ್ಯ; ಮುಂಬೈ ಇಂಡಿಯನ್ಸ್‌ಗೆ ಸಾಧಾರಣ ಗುರಿ ನೀಡಿದ ಆರ್‌ಸಿಬಿ

ಮಂಗಳವಾರ, ಮಾರ್ಚ್ 21ರಂದು ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023ರ ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್‌ನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಸಾಧಾರಣ ಮೊತ್ತ ಕಲೆಹಾಕಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸ್ಮೃತಿ ಮಂಧಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 125 ರನ್ ಗಳಿಸಿದ್ದು, ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡಕ್ಕೆ 126 ರನ್‌ಗಳ ಗುರಿ ನೀಡಿದೆ.
ಆರ್‌ಸಿಬಿ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಸ್ಮೃತಿ ಮಂಧಾನ ಮತ್ತು ಸೋಫಿ ಡಿವೈನ್ ಉತ್ತಮ ಆರಂಭ ನೀಡುವಲ್ಲಿ ವಿಫಲರಾದರು. ಮೊದಲ ಓವರ್‌ನ ಮೂರನೇ ಎಸೆತದಲ್ಲಿ ಇಲ್ಲದ ರನ್ ಕದಿಯಲು ಹೋಗಿ ಸೋಫಿ ಡಿವೈನ್ ರನೌಟ್ ಆದರು.

ನಂತರ ಬಂದ ಎಲ್ಲಿಸ್ ಪೆರ್ರಿ 38 ಎಸೆತಗಳಲ್ಲಿ 29 ರನ್ ಗಳಿಸಿದರೆ, ನಾಯಕಿ ಸ್ಮೃತಿ ಮಂಧಾನ 25 ಎಸೆತಗಳಲ್ಲಿ 24 ರನ್ ಬಾರಿಸಿ ಔಟಾದರು. ಹೀದರ್ ನೈಟ್ 12 ರನ್, ಕನಿಕಾ ಅಹುಜಾ 12 ರನ್ ಮತ್ತು ಕೊನೆಯಲ್ಲಿ ರಿಚಾ ಘೋಷ್ 13 ಎಸೆತಗಳಲ್ಲಿ 29 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.
ಬೌಲಿಂಗ್‌ನಲ್ಲಿ ಅಮೆಲಿಯಾ ಕೆರ್ 4 ಓವರ್‌ಗಳಲ್ಲಿ 22 ರನ್ ನೀಡಿ 3 ವಿಕೆಟ್ ಪಡೆದರೆ, ನ್ಯಾಟ್ ಸೀವರ್-ಬ್ರಂಟ್ 4 ಓವರ್‌ಗಳಲ್ಲಿ 24 ರನ್ ನೀಡಿ 2 ವಿಕೆಟ್ ಕಬಳಿಸಿದರು. ಇಸ್ಸಿ ವಾಂಗ್ 4 ಓವರ್‌ಗಳಲ್ಲಿ 26 ರನ್ ನೀಡಿ 2 ವಿಕೆಟ್ ಪಡೆದರೆ, ಉಳಿದಂತೆ ಸೈಕ್ ಇಶಾಕ್ ಒಂದು ವಿಕೆಟ್ ಉರುಳಿಸಿದರು.
ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಭಾನುವಾರ, ಮಾರ್ಚ್ 26ರಂದು ನಡೆಯುವ ಫೈನಲ್ ಪಂದ್ಯದಲ್ಲಿ ಆಡುವ ಭರವಸೆ ಹೊಂದಿದ್ದರೆ ಇಂದಿನ ತಮ್ಮ ಕೊನೆಯ ಲೀಗ್ ಪಂದ್ಯದಲ್ಲಿ ಆರ್‌ಸಿಬಿ ತಂಡವನ್ನು ಸೋಲಿಸಲೇಬೇಕಾದ ಒತ್ತಡದಲ್ಲಿದೆ.

ಮತ್ತೊಂದೆಡೆ, ಸ್ಮೃತಿ ಮಂಧಾನ ನಾಯಕತ್ವದ ಆರ್‌ಸಿಬಿ ತಂಡ ತಮ್ಮ ಚೊಚ್ಚಲ ಋತುವನ್ನು ಕಳಪೆಯಾಗಿ ಆರಂಭಿಸಿತು. ಸತತ ಐದು ಪಂದ್ಯಗಳ ಸೋಲಿನ ಬಳಿಕ ಸತತ ಎರಡು ಪಂದ್ಯಗಳನ್ನು ಗೆದ್ದು ಬೀಗಿದೆ. ತಮ್ಮ ಕೊನೆಯ ಲೀಗ್ ಪಂದ್ಯದಲ್ಲಿ ಗೆಲುವಿಗಾಗಿ ಹವಣಿಸುತ್ತಿದೆ.
ಆರ್‌ಸಿಬಿ vs ಮುಂಬೈ ಇಂಡಿಯನ್ಸ್ ಆಡುವ 11ರ ಬಳಗ
ಆರ್‌ಸಿಬಿ ತಂಡ: ಸೋಫಿ ಡಿವೈನ್, ಸ್ಮೃತಿ ಮಂಧಾನ (ನಾಯಕಿ), ಎಲ್ಲಿಸ್ ಪೆರ್ರಿ, ಹೀದರ್ ನೈಟ್, ಕನಿಕಾ ಅಹುಜಾ, ರಿಚಾ ಘೋಷ್ (ವಿಕೆಟ್ ಕೀಪರ್), ಶ್ರೇಯಾಂಕಾ ಪಾಟೀಲ್, ದಿಶಾ ಕಸತ್, ಸೋಭನಾ ಆಶಾ, ಮೇಗನ್ ಶುಟ್, ಪ್ರೀತಿ ಬೋಸ್.
ಮುಂಬೈ ಇಂಡಿಯನ್ಸ್ ತಂಡ: ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ನ್ಯಾಟ್ ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಅಮೆಲಿಯಾ ಕೆರ್, ಇಸ್ಸಿ ವಾಂಗ್, ಹುಮೈರಾ ಕಾಜಿ, ಪೂಜಾ ವಸ್ತ್ರಾಕರ್, ಅಮನ್‌ಜೋತ್ ಕೌರ್, ಜಿಂತಿಮಣಿ ಕಲಿತಾ, ಸೈಕಾ ಇಶಾಕ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications