Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WPL 2023: ಮಹಿಳಾ ಪ್ರೀಮಿಯರ್ ಲೀಗ್‌ಗಾಗಿ ತಂಡದ ಜೆರ್ಸಿಯನ್ನು ಅನಾವರಣಗೊಳಿಸಿದ ಮುಂಬೈ ಇಂಡಿಯನ್ಸ್

WPL 2023: Mumbai Indians Unveil The Womens Team Jersey For The Wpl Inaugural Season

ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್‌ಗಾಗಿ ಮುಂಬೈ ಇಂಡಿಯನ್ಸ್ ತಂಡ ಜೆರ್ಸಿಯನ್ನು ಅನಾವರಣಗೊಳಿಸಿದೆ. ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ನೀಲಿ ಬಣ್ಣದ ಜೆರ್ಸಿಯನ್ನು ಹೊಂದಿರುವ ಮುಂಬೈ ಇಂಡಿಯನ್ಸ್ ಮಹಿಳಾ ಲೀಗ್‌ನಲ್ಲೂ ನೀಲಿ ಬಣ್ಣದ ಜೆರ್ಸಿಯನ್ನು ವಿನ್ಯಾಸಗೊಳಿಸಿದೆ.

ಪುರುಷರ ತಂಡದ ಜೆರ್ಸಿಗಿಂತ ವಿಭಿನ್ನವಾಗಿ ಕಾಣಲು ನೀಲಿ ಬಣ್ಣದ ಜೊತೆ ಕಿತ್ತಳೆ ಬಣ್ಣವನ್ನು ಸೇರಿಸಿದೆ. ಮಹಿಳಾ ಪ್ರೀಮಿಯರ್ ಲೀಗ್ ಮಾರ್ಚ್‌ 4ರಂದು ಆರಂಭವಾಗಲಿದ್ದು, ಆರಂಭಿಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಜೈಂಟ್ಸ್ ಮುಖಾಮುಖಿಯಾಗಲಿವೆ.

ಮೊದಲ ಪಂದ್ಯಕ್ಕೆ ಸಿದ್ಧತೆ ನಡೆಸಲು ಮುಂಬೈ ಇಂಡಿಯನ್ಸ್ ತಂಡದ ಕೆಲವು ಸದಸ್ಯರು ಈಗಾಗಲೇ ತರಬೇತಿಗಾಗಿ ಮುಂಬೈನಲ್ಲಿ ಒಟ್ಟುಗೂಡುತ್ತಿದ್ದಾರೆ. ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್‌ಗಾಗಿ ಮುಂಬೈ ಇಂಡಿಯನ್ಸ್‌ ತಂಡದ ಮಾಲೀಕರು ಮಹಿಳಾ ತಂಡದ ಜೆರ್ಸಿಯನ್ನು ಅನಾವರಣಗೊಳಿಸದರು.

ಮಹಿಳಾ ತಂಡದ ಜೆರ್ಸಿಯ ಚಿತ್ರವನ್ನು ಮುಂಬೈ ಇಂಡಿಯನ್ಸ್ ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದೆ. "ಇಲ್ಲಿ ಸೂರ್ಯ, ಸಮುದ್ರ, ಮುಂಬೈನ ನೀಲಿ-ಚಿನ್ನ. ಮೊದಲ ಮಹಿಳಾ ಪ್ರೀಮಿಯರ್ ಲೀಗ್‌ನ ಜೆರ್ಸಿ" ಎಂದು ಶಿರ್ಷಿಕೆಯೊಂದಿಗೆ ಟ್ವೀಟ್ ಮಾಡಿದೆ.

ಬಲಿಷ್ಠವಾಗಿದೆ ಮುಂಬೈ ಇಂಡಿಯನ್ಸ್ ತಂಡ

ಮೊದಲ ಮಹಿಳಾ ಪ್ರೀಮಿಯರ್ ಲೀಗ್ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್ ಬಲಿಷ್ಠ ತಂಡವನ್ನು ಕಟ್ಟಿದೆ. ಭಾರತ ಮಹಿಳಾ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಮುಂಬೈ ಇಂಡಿಯನ್ಸ್‌ ಮಹಿಳಾ ತಂಡದ ಪ್ರಮುಖ ಆಕರ್ಷಣೆಯಾಗಿದ್ದಾರೆ.

ಮುಂಬೈ ಇಂಡಿಯನ್ಸ್ ತಂಡದ ಕೆಲವು ಆಟಗಾರರು ಈಗಾಗಲೇ ಮುಂಬೈಗೆ ತೆರಳಿದ್ದು, ಸಿದ್ಧತೆ ಆರಂಭಿಸಿದ್ದಾರೆ. ಮಹಿಳಾ ಟಿ20 ವಿಶ್ವಕಪ್‌ ಫೈನಲ್ ಪಂದ್ಯ ಮುಕ್ತಾಯವಾದ ಬಳಿಕ, ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಆಡಲಿರುವ ಎಲ್ಲಾ ಆಟಗಾರರು ಮುಂಬೈಗೆ ಆಗಮಿಸಲಿದ್ದಾರೆ.

ಪ್ರಮುಖ ಆಲ್‌ರೌಂಡರ್ ಗಳಾದ ಅಮೆಲಿಯಾ ಕೆರ್, ಪೂಜಾ ವಸ್ತ್ರಾಕರ್ ತಂಡದಲ್ಲಿದ್ದು ಬಲವನ್ನು ಹೆಚ್ಚಿಸಿದ್ದಾರೆ. ಹರ್ಮನ್‌ಪ್ರೀತ್ ಕೌರ್ ತಂಡವನ್ನು ಮುನ್ನಡೆಸಲಿದ್ದಾರೆ. ಚೊಚ್ಚಲ ಆವೃತ್ತಿಯ ಎಲ್ಲಾ ಪಂದ್ಯಗಳು ಮುಂಬೈನ ಡಿವೈ ಪಾಟಿಲ್ ಮತ್ತು ಬಾರ್ಬೌರ್ನೆ ಕ್ರೀಡಾಂಗಣದಲ್ಲಿ ನಡೆಯಲಿವೆ. ಮಾರ್ಚ್ 4ರಂದು ಪಂದ್ಯಾವಳಿ ಆರಂಭವಾಗಲಿದ್ದು, ಮಾರ್ಚ್ 26ರಂದು ಫೈನಲ್ ಪಂದ್ಯ ನಡೆಯಲಿದೆ.

WPL 2023: Mumbai Indians Unveil The Womens Team Jersey For The Wpl Inaugural Season

ಮುಂಬೈ ಇಂಡಿಯನ್ಸ್: ಹರ್ಮನ್‌ಪ್ರೀತ್ ಕೌರ್, ನಟಾಲಿ ಸಿವರ್, ಅಮೆಲಿಯಾ ಕೆರ್, ಪೂಜಾ ವಸ್ತ್ರಾಕರ್, ಯಾಸ್ತಿಕಾ ಭಾಟಿಯಾ, ಹೀದರ್ ಗ್ರಹಾಂ, ಇಸಾಬೆಲ್ಲೆ ವಾಂಗ್, ಅಮನ್‌ಜೋತ್ ಕೌರ್, ಧಾರಾ ಗುಜ್ಜರ್, ಸೈಕಾ ಇಶಾಕ್, ಹೇಯ್ಲಿ ಮ್ಯಾಥ್ಯೂಸ್, ಕ್ಲೋಯ್ ಟ್ರಯಾನ್, ಹುಮೈರಾ ಕಾಜಿ, ಪ್ರಿಯಾಂಕಾ ಬಾಲಾ, ಸೋನಮ್ ಯಾದವ್, ಜಿಂತಾಮಣಿ ಕಲಿತ, ನೀಲಮ್ ಬಿಶ್ತ್.

Story first published: Saturday, February 25, 2023, 20:12 [IST]
Other articles published on Feb 25, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+