WPL 2023: ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ, ಲೈವ್ ಸ್ಟ್ರೀಮಿಂಗ್

ಸೋಮವಾರ, ಮಾರ್ಚ್ 20ರಂದು ಮುಂಬೈನ ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ನಡೆಯುತ್ತಿರುವ 2023ರ ಮಹಿಳಾ ಪ್ರೀಮಿಯರ್ ಲೀಗ್‌ನ 18ನೇ ಪಂದ್ಯದಲ್ಲಿ ಟೇಬಲ್ ಟಾಪರ್ ಮುಂಬೈ ಇಂಡಿಯನ್ಸ್ ಮತ್ತು ಎರಡನೇ ಸ್ಥಾನಿ ಡೆಲ್ಲಿ ಕ್ಯಾಪಿಟಲ್ಸ್ ಸೆಣಸಾಡಲಿವೆ.
ಮುಂಬೈ ಇಂಡಿಯನ್ಸ್ ಮಹಿಳಾ ತಂಡ ಚೊಚ್ಚಲ ಪಂದ್ಯಾವಳಿಯಲ್ಲಿ ಈವರೆಗೆ ಅದ್ಭುತ ಪ್ರದರ್ಶನ ನೀಡಿದ್ದು, ಆಡಿದ ಆರು ಪಂದ್ಯಗಳಲ್ಲಿ 5 ಮತ್ತು 1 ಸೋಲು ಕಂಡು ಈಗಾಗಲೇ ಪ್ಲೇಆಫ್ ಸ್ಥಾನವನ್ನು ಖಚಿತಪಡಿಸಿಕೊಂಡಿದೆ.
ಮುಂಬೈ ಇಂಡಿಯನ್ಸ್ ತನ್ನ ಕೊನೆಯ ಪಂದ್ಯದಲ್ಲಿ ಯುಪಿ ವಾರಿಯರ್ಜ್ ವಿರುದ್ಧ ಅತ್ಯುತ್ತಮ ಪ್ರದರ್ಶನ ನೀಡಲು ವಿಫಲವಾಗಿ 5 ವಿಕೆಟ್‌ಗಳಿಂದ ಸೋತಿದೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಹಣಾಹಣಿಯಲ್ಲಿ ಗೆಲುವಿನ ಹಾದಿಗೆ ಮರಳಲು ಎದುರು ನೋಡುತ್ತಿದ್ದಾರೆ.

ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಕೂಡ ಅತ್ಯುತ್ತಮ ಆಟವನ್ನು ಆಡುತ್ತಿದ್ದು, ಆಡಿದ ಆರು ಪಂದ್ಯಗಳಲ್ಲಿ ನಾಲ್ಕು ಗೆಲುವುಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಡೆಲ್ಲಿ ಕ್ಯಾಪಿಟಲ್ಸ್ ಕೂಡ ಈಗಾಗಲೇ ಪ್ಲೇಆಫ್ ಹಂತಕ್ಕೆ ಅರ್ಹತೆ ಪಡೆದಿದ್ದರೂ, ಪಾಯಿಂಟ್‌ಗಳ ಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಪಡೆಯುವ ಗುರಿ ಹೊಂದಿದ್ದಾರೆ.
ಮೆಗ್ ಲ್ಯಾನಿಂಗ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಆಡಬೇಕಾದರೆ, ಸಮಗ್ರ ಪ್ರದರ್ಶನದ ಅವಶ್ಯಕತೆ ಇದೆ. ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್ ವಿಭಾಗ ಕೈಕೊಟ್ಟಿತ್ತು. ಹೀಗಾಗಿ 148 ರನ್‌ಗಳ ಗುರಿಯನ್ನು ಬೆನ್ನಟ್ಟಲು ವಿಫಲವಾಗಿತ್ತು.

ಡಿವೈ ಪಾಟೀಲ್ ಪಿಚ್ ವರದಿ
ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿಯು ಬ್ಯಾಟರ್‌ಗಳು ಮತ್ತು ಬೌಲರ್‌ಗಳಿಗೆ ಸಹಕಾರಿಯಾದ ಪಿಚ್ ಆಗಿದೆ. ಮೈದಾನದಲ್ಲಿ ಆಡಿದ ಕೊನೆಯ ಐದು ಪಂದ್ಯಗಳನ್ನು ಚೇಸಿಂಗ್ ಮಾಡಿದ ತಂಡವು ಗೆದ್ದಿದೆ. ಆದ್ದರಿಂದ, ಟಾಸ್ ಗೆದ್ದ ತಂಡವು ಮೊದಲು ಬೌಲಿಂಗ್ ಮಾಡಲು ಬಯಸುತ್ತದೆ.
ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಸಂಭಾವ್ಯ ಆಡುವ 11ರ ಬಳಗ
ಮುಂಬೈ ಇಂಡಿಯನ್ಸ್ ಆಯ್ಕೆ ಮತ್ತು ಪ್ರದರ್ಶನದಲ್ಲಿ ಸ್ಥಿರತೆಯನ್ನು ತೋರಿಸಿದೆ. ಹೀಗಾಗಿ ಮುಂಬೈ ಇಂಡಿಯನ್ಸ್ ಆಡುವ 11ರ ಬಳಗ ಬದಲಾವಣೆ ಕಡಿಮೆ. ತಮ್ಮ ಕೊನೆಯ ಪಂದ್ಯದಲ್ಲಿ ಸೋತಿದ್ದರೂ, ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಅದೇ ತಂಡವನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ.
ಮುಂಬೈ ಇಂಡಿಯನ್ಸ್ ತಂಡ: ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ನ್ಯಾಟ್ ಸ್ಕಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಅಮೆಲಿಯಾ ಕೆರ್, ಇಸ್ಸಿ ವಾಂಗ್, ಹುಮೈರಾ ಕಾಜಿ, ಧಾರಾ ಗುಜ್ಜರ್, ಅಮಾನ್ಜೋತ್ ಕೌರ್, ಜಿಂತಿಮಣಿ ಕಲಿತಾ, ಸೈಕಾ ಇಶಾಕ್.
ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಮ್ಮ ಕೊನೆಯ ಪಂದ್ಯದಲ್ಲಿ ಎಡಗೈ ವೇಗಿ ತಾರಾ ನಾರ್ರಿಸ್ ಅವರ ಬದಲಾಗಿ ಪೂನಂ ಯಾದವ್ ಅವರನ್ನು ಆಡಿಸಿತ್ತು. ಡಿವೈ ಪಾಟೀಲ್ ಪಿಚ್ ಸ್ಪಿನ್ನರ್‌ಗಳಿಗೆ ಸಹಾಯ ಮಾಡುತ್ತಿದೆ. ಆದ್ದರಿಂದ ತಂಡದ ಮ್ಯಾನೇಜ್‌ಮೆಂಟ್ ಅದೇ ತಂಡದ ಸಂಯೋಜನೆಯೊಂದಿಗೆ ಆಡುವ ಸಾಧ್ಯತೆಯಿದೆ.
ದೆಹಲಿ ಕ್ಯಾಪಿಟಲ್ಸ್ ತಂಡ: ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಆಲಿಸ್ ಕ್ಯಾಪ್ಸಿ, ಜೆಮಿಮಾ ರೋಡ್ರಿಗಸ್, ಮರಿಜಾನ್ನೆ ಕಪ್, ಜೆಸ್ ಜೊನಾಸೆನ್, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಅರುಂಧತಿ ರೆಡ್ಡಿ, ರಾಧಾ ಯಾದವ್, ಶಿಖಾ ಪಾಂಡೆ, ಪೂನಂ ಯಾದವ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications