For Quick Alerts
ALLOW NOTIFICATIONS  
For Daily Alerts
 

WPL 2023: MI vs DC; ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ

WPL 2023: Mumbai Indians vs Delhi Capitals Match Report, Probable Playing 11 And Live Streaming Details

ಗುರುವಾರ, ಮಾರ್ಚ್ 9ರಂದು ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ 2023ರ ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯಾವಳಿಯ 7ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ಮಹಿಳಾ ತಂಡಗಳು ಸೆಣಸಾಟ ನಡೆಸಲಿವೆ.

ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್‌ನ ಅಂಕಪಟ್ಟಿಯಲ್ಲಿ ಮೊದಲೆರಡು ಕ್ರಮವಾಗಿ ಮೊದಲೆರಡು ಸ್ಥಾನದಲ್ಲಿರುವ ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಮುಂಬೈ ಇಂಡಿಯನ್ಸ್ ಮತ್ತು ಮೆಗ್ ಲ್ಯಾನ್ನಿಂಗ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಇಲ್ಲಿಯವರೆಗೆ ಅಜೇಯವಾಗಿವೆ.

ಮುಂಬೈ ಇಂಡಿಯನ್ಸ್ ತಂಡದ ಪರ ಸ್ಪಿನ್ನರ್ ಸೈಕಾ ಇಶಾಕ್ ಬೌಲ್‌ನೊಂದಿಗೆ ಉತ್ತಮ ಪ್ರದರ್ಶನ ನೀಡಿದ್ದು, ಆಡಿದ 2 ಪಂದ್ಯಗಳಲ್ಲಿ 6.16ರ ಸರಾಸರಿಯಲ್ಲಿ 6 ವಿಕೆಟ್ ಸದ್ಯ ಟೂರ್ನಿಯಲ್ಲಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದಾರೆ.

ಗುಜರಾತ್ ಜೈಂಟ್ಸ್ ವಿರುದ್ಧದ 143 ರನ್‌ಗಳ ಅಂತರದ ಮುಂಬೈ ಇಂಡಿಯನ್ಸ್ ತಂಡದ ಗೆಲುವಿನಲ್ಲಿ ಸೈಕಾ ಇಶಾಕ್ 3.1 ಓವರ್‌ಗಳಲ್ಲಿ 11 ರನ್ ನೀಡಿ 4 ವಿಕೆಟ್ ಪಡೆದರು. ಇನ್ನು ಆರ್‌ಸಿಬಿ ವಿರುದ್ಧದ 9 ವಿಕೆಟ್ ಜಯದಲ್ಲಿ 4 ಓವರ್‌ಗಳಲ್ಲಿ 26 ರನ್ ನೀಡಿ 2 ವಿಕೆಟ್ ಪಡೆದಿದ್ದರು.

WPL 2023: Mumbai Indians vs Delhi Capitals Match Report, Probable Playing 11 And Live Streaming Details

ಇಂದಿನ ಪಂದ್ಯದಲ್ಲಿ ಗೆಲ್ಲುವ ಮೂಲಕ ಅಜೇಯ ಓಟವನ್ನು ಕಾಪಾಡಿಕೊಳ್ಳಲು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ಮಹಿಳಾ ತಂಡಗಳು ಪ್ರಯತ್ನಿಸಲಿವೆ. ಗೆದ್ದ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯಲಿದೆ. ಯಾವುದೇ ತಂಡ ಸೋತರೂ ಈ ಪಂದ್ಯಾವಳಿಯಲ್ಲಿ ಮೊದಲ ಸೋಲಾಗಲಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ನಾಯಕಿ ಮೆಗ್ ಲ್ಯಾನ್ನಿಂಗ್, ಶಫಾಲಿ ವರ್ಮಾ, ಮಾರಿಜಾನ್ನೆ ಕಾಪ್ ಮತ್ತು ಜೆಮಿಮಾ ರೋಡ್ರಿಗಸ್ ಅತ್ಯುತ್ತಮ ಬ್ಯಾಟಿಂಗ್ ಫಾರ್ಮ್‌ನಲ್ಲಿದ್ದರೆ, ಮುಂಬೈ ಇಂಡಿಯನ್ಸ್ ತಂಡದಲ್ಲಿ ಹೇಲಿ ಮ್ಯಾಥ್ಯೂಸ್, ನ್ಯಾಟ್ ಸೀವರ್-ಬ್ರಂಟ್, ನಾಯಕಿ ಹರ್ಮನ್‌ಪ್ರೀತ್ ಕೌರ್ ಉತ್ತಮ ಫಾರ್ಮ್‌ನಲ್ಲಿದ್ದಾರೆ.

WPL 2023: Mumbai Indians vs Delhi Capitals Match Report, Probable Playing 11 And Live Streaming Details

ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯದ ವಿವರ

ಸ್ಥಳ ಮತ್ತು ಸಮಯ: ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯವು ಗುರುವಾರ, ಮಾರ್ಚ್ 9ರಂದು ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯಲಿದ್ದು, ಭಾರತೀಯ ಕಾಲಮಾನ ಸಂಜೆ 7.30ಕ್ಕೆ ಆರಂಭವಾಗಲಿದೆ.

ಟಿವಿ ಮತ್ತು ಲೈವ್ ಸ್ಟ್ರೀಮಿಂಗ್: ಮಹಿಳಾ ಪ್ರೀಮಿಯರ್ ಲೀಗ್ 2023ರ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯ ಭಾರತದಲ್ಲಿ Sports18 ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರವಾಗಲಿದ್ದರೆ, JioCinema ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಿ ವೀಕ್ಷಿಸಬಹುದು.

ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ಸಂಭಾವ್ಯ ಆಡುವ 11ರ ಬಳಗ

ಮುಂಬೈ ಇಂಡಿಯನ್ಸ್ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ನ್ಯಾಟ್ ಸೀವರ್-ಬ್ರಂಟ್, ಅಮೆಲಿಯಾ ಕೆರ್ / ಕ್ಲೋಯ್ ಟ್ರಯಾನ್, ಪೂಜಾ ವಸ್ತ್ರಾಕರ್, ಇಸ್ಸಿ ವಾಂಗ್, ಹುಮೈರಾ ಕಾಜಿ, ಅಮನ್ಜೋತ್ ಕೌರ್, ಜಿಂತಿಮಣಿ ಕಲಿತಾ, ಸೈಕಾ ಇಶಾಕ್

ಡೆಲ್ಲಿ ಕ್ಯಾಪಿಟಲ್ಸ್ ತಂಡ: ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಮರಿಜಾನ್ನೆ ಕಪ್, ಜೆಮಿಮಾ ರಾಡ್ರಿಗಸ್, ಆಲಿಸ್ ಕ್ಯಾಪ್ಸೆ, ಜೆಸ್ ಜೊನಾಸೆನ್, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಟೈಟಾಸ್ ಸಾಧು, ಶಿಖಾ ಪಾಂಡೆ, ರಾಧಾ ಯಾದವ್, ತಾರಾ ನಾರ್ರಿಸ್.

Story first published: Thursday, March 9, 2023, 12:41 [IST]
Other articles published on Mar 9, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+