For Quick Alerts
ALLOW NOTIFICATIONS  
For Daily Alerts
 

WTC 2023: ಮುಂಬೈ ಇಂಡಿಯನ್ಸ್ vs ಗುಜರಾತ್ ಜೈಂಟ್ಸ್ ಸಂಭಾವ್ಯ ತಂಡ, ಪಂದ್ಯದ ಮಾಹಿತಿ

WPL 2023; Mumbai Indians vs Gujarat Giants, match 12, probable XI and pitch report

ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಇಂದು ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ. ಮುಂಬೈ ಇಂಡಿಯನ್ಸ್ ತಂಡ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿ ಅಬ್ಬರಿಸುತ್ತಿದ್ದು ಆಡಿದ ಎಲ್ಲಾ ಪಂದ್ಯಗಳಲ್ಲಿ ಗೆದ್ದು ಅಜೇಯ ತಂಡ ಎನಿಸಿಕೊಂಡಿದ್ದರೆ ಗುಜರಾತ್ ಜೈಂಟ್ಸ್ ತಂಡಕ್ಕೆ ಹೇಳಿಕೊಳ್ಳುವಂತಾ ಯಶಸ್ಸು ದೊರೆತಿಲ್ಲ. ಆಡಿದ ನಾಲ್ಕು ಪಂದ್ಯಗಳಲ್ಲಿ ಜಿಜಿ ಪಡೆ ಕೇವಲ ಒಂದು ಪಂದ್ಯವನ್ನು ಮಾತ್ರವೇ ಗೆದ್ದುಕೊಂಡಿದೆ.

ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಸಾಕಷ್ಟು ಬಲಿಷ್ಠವಾಗಿದ್ದು ಎಲ್ಲಾ ಆಟಗಾರ್ತಿಯರು ಕೂಡ ಉತ್ತಮ ಪ್ರದರ್ಶನ ನೀಡಿಕೊಂಡು ಬಂದಿದ್ದಾರೆ. ಎಲ್ಲಾ ವಿಭಾಗದಲ್ಲಿಯೂ ಹರ್ಮನ್ ಪಡೆ ಬಲಿಷ್ಠವಾಗಿದ್ದು ಎದುರಾಳಿಗಳಿಗೆ ದುಃಸ್ವಪ್ನವಾಗಿ ಕಾಡುತ್ತಿದೆ. ಆದರೆ ಗುಜರಾತ್ ಜೈಂಟ್ಸ್ ತಂಡ ತಂಡವಾಗಿ ಪ್ರದರ್ಶನ ನೀಡಲು ವಿಫಲವಾಗುತ್ತಿದ್ದು ಹಿನ್ನಡೆಗೆ ಕಾರಣವಾಗಿದೆ.

ಇನ್ನು ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಜೈಂಟ್ಸ್ ತಂಡಗಳು ಈ ಆವೃತ್ತಿಯಲ್ಲಿ ಇದು ಎರಡನೇ ಬಾರಿಗೆ ಮುಖಾಮುಖಿಯಾಗುತ್ತಿದೆ. ವುಮೆನ್ಸ್ ಪ್ರೀಮಿಯರ್ ಲೀಗ್‌ನ ಪ್ರಪ್ರಥಮ ಪಂದ್ಯದಲ್ಲಿಯೂ ಈ ಎರಡು ತಂಡಗಳು ಕಾದಾಟ ನಡೆಸಿದ್ದವು. ಆ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ 143 ರನ್‌ಗಳ ಅಂತರದ ಬೃಹತ್ ಗೆಲುವು ಸಾಧಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿತ್ತು.

ಪಂದ್ಯದ ಆರಂಭ ಹಾಗೂ ನೇರಪ್ರಸಾರದ ಮಾಹಿತಿ: ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಜೈಂಟ್ಸ್ ತಂಡಗಳ ನಡುವಿನ ಈ ಪಂದ್ಯ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿದ್ದು ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದೆ. 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದ್ದು ಜಿಯೋ ಸಿನಿಮಾದಲ್ಲಿ ಪಂದ್ಯದ ನೇರಪ್ರಸಾರವಾಗಲಿದೆ.

ಪಿಚ್ ರಿಪೋರ್ಟ್, ಹವಾಮಾನ ವರದಿ
ಡಿವೈ ಪಾಟೀಲ್ ಕ್ರೀಡಾಂಗಣದ ಪಿಚ್ ಬ್ಯಾಟರ್‌ಗಳಿಗೆ ಉತ್ತಮವಾಗಿ ನೆರವಾಗಲಿದ್ದು ಪೈಪೋಟಿಯ ಹೋರಾಟ ನಡೆಯುವ ಸಾಧ್ಯತೆಯಿದೆ. ಆದರೆ ಟೂರ್ನಿಯ ಆರಂಭಕ್ಕಿಂತ ಪಿಚ್ ನಿಧಾನವಾಗಿ ವರ್ತಿಸುತ್ತಿದ್ದು 170ಕ್ಕಿಂತ ಹೆಚ್ಚಿನ ಸ್ಕೋರ್ ಇಲ್ಲಿ ಉತ್ತಮ ಮೊತ್ತ ಎನಿಸಿಕೊಳ್ಳಲಿದೆ. ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ತಂಡ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡುವುದು ಉತ್ತಮ ನಿರ್ಧಾರವಾಗಲಿದೆ.

ಹವಾಮಾನ ವರದಿ: ಇನ್ನು ಈ ಪಂದ್ಯದ ಸಂದರ್ಭದಲ್ಲಿ ಮಳೆ ಅಡ್ಡಿಯುಂಟು ಮಾಡುವ ಯಾವುದೇ ಸಾಧ್ಯತೆಗಳು ಕೂಡ ಇಲ್ಲ. ನವಿ ಮುಂಬೈನಲ್ಲಿ ಇಂದು 38 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶವಾಗಿದ್ದು 26 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಾಗಿರಲಿದೆ.

ಇತ್ತಂಡಗಳ ಸಂಭಾವ್ಯ ಆಡುವ ಬಳಗ:
ಮುಂಬೈ ಇಂಡಿಯನ್ಸ್ ಸಂಭಾವ್ಯ XI: ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಹೇಲಿ ಮ್ಯಾಥ್ಯೂಸ್, ನ್ಯಾಟ್ ಸ್ಕಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಅಮೆಲಿಯಾ ಕೆರ್, ಧಾರಾ ಗುಜ್ಜರ್/ಪೂಜಾ ವಸ್ತ್ರಕರ್, ಇಸ್ಸಿ ವಾಂಗ್, ಅಮನ್ಜೋತ್ ಕೌರ್, ಹುಮೈರಾ ಕಾಜಿ, ಜಿಂಟಿಮಣಿ ಕಲಿತಾ, ಸೈಕಾ ಇಶಾಕ್

ಗುಜರಾತ್ ಜೈಂಟ್ಸ್ ಸಂಭಾವ್ಯ XI: ಸಬ್ಬಿನೇನಿ ಮೇಘನಾ, ಲಾರಾ ವೊಲ್ವಾರ್ಡ್ಟ್/ಸೋಫಿಯಾ ಡಂಕ್ಲೆ, ಹರ್ಲೀನ್ ಡಿಯೋಲ್, ಆಶ್ಲೇ ಗಾರ್ಡ್ನರ್, ಜಾರ್ಜಿಯಾ ವೇರ್ಹ್ಯಾಮ್/ಅನ್ನಾಬೆಲ್ ಸದರ್ಲ್ಯಾಂಡ್, ಸುಷ್ಮಾ ವರ್ಮಾ (ವಿಕೆಟ್ ಕೀಪರ್), ದಯಾಲನ್ ಹೇಮಲತಾ, ಸ್ನೇಹ ರಾಣಾ (ನಾಯಕಿ), ಕಿಮ್ ಗಾರ್ತ್, ಮಾನ್ಸಿ ಜೋಶಿ, ತನುಜಾ ಕನ್ವರ್

Story first published: Tuesday, March 14, 2023, 14:07 [IST]
Other articles published on Mar 14, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+