Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WPL 2023: ಮುಂಬೈ ಇಂಡಿಯನ್ಸ್ vs ಗುಜರಾತ್ ಜೈಂಟ್ಸ್ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ & ಲೈವ್ ಸ್ಕೋರ್

WPL 2023: Mumbai Indians vs Gujarat Giants Toss Report, Playing 11 And Live Score

ಮಂಗಳವಾರ, ಮಾರ್ಚ್ 14ರಂದು ಮಹಿಳಾ ಪ್ರೀಮಿಯರ್ ಲೀಗ್‌ನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮಹಿಳಾ ತಂಡವು ಗುಜರಾತ್ ಜೈಂಟ್ಸ್ ಮಹಿಳಾ ತಂಡವನ್ನು ಮುಂಬೈನ ಬ್ರೆಬೋರ್ನ್ ಸ್ಟೇಡಿಯಂನಲ್ಲಿ ಎದುರಿಸುತ್ತಿದೆ.

ಟಾಸ್ ಗೆದ್ದ ಗುಜರಾತ್ ಜೈಂಟ್ಸ್ ನಾಯಕಿ ಸ್ನೇಹ್ ರಾಣಾ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್‌ ಪಂದ್ಯಾವಳಿಯಲ್ಲಿ ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡವು ಇಲ್ಲಿಯವರೆಗೆ ಅಜೇಯ ಓಟ ಮುಂದುವರೆಸಿದ್ದು, ಆಡಿದ ಎಲ್ಲಾ ನಾಲ್ಕು ಪಂದ್ಯಗಳನ್ನು ಗೆದ್ದಿದೆ.

ಮತ್ತೊಂದೆಡೆ, ಸ್ನೇಹ್ ರಾಣಾ ನಾಯಕತ್ವದ ಗುಜರಾತ್ ಜೈಂಟ್ಸ್ ಇದುವರೆಗೆ ಆಡಿರುವ ನಾಲ್ಕು ಪಂದ್ಯಗಳಲ್ಲಿ ಒಂದು ಪಂದ್ಯವನ್ನು ಮಾತ್ರ ಗೆದ್ದಿದೆ. ಉದ್ಘಾಟನಾ ಪಂದ್ಯದಲ್ಲಿನ ಸೋಲಿಗೆ ಗುಜರಾತ್ ಜೈಂಟ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಬಹುದೇ ಎಂಬುದನ್ನು ನೋಡಬೇಕಿದೆ.

ಮುಂಬೈ ಇಂಡಿಯನ್ಸ್ vs ಗುಜರಾತ್ ಜೈಂಟ್ಸ್ ಆಡುವ 11ರ ಬಳಗ
ಮುಂಬೈ ಇಂಡಿಯನ್ಸ್ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ನ್ಯಾಟ್ ಸಿವರ್-ಬ್ರಂಟ್, ಧಾರಾ ಗುಜ್ಜರ್, ಅಮೆಲಿಯಾ ಕೆರ್, ಇಸ್ಸಿ ವಾಂಗ್, ಅಮನ್‌ಜೋತ್ ಕೌರ್, ಹುಮೈರಾ ಕಾಜಿ, ಜಿಂತಿಮಣಿ ಕಲಿತಾ, ಸೈಕಾ ಇಶಾಕ್.

ಗುಜರಾತ್ ಜೈಂಟ್ಸ್ ತಂಡ: ಸ್ನೇಹ್ ರಾಣಾ(ನಾಯಕಿ), ಸಬ್ಬಿನೇನಿ ಮೇಘನಾ, ಸೋಫಿಯಾ ಡಂಕ್ಲೆ, ಹರ್ಲೀನ್ ಡಿಯೋಲ್, ಆಶ್ಲೀಗ್ ಗಾರ್ಡ್ನರ್, ದಯಾಳನ್ ಹೇಮಲತಾ, ಅನ್ನಾಬೆಲ್ ಸದರ್ಲ್ಯಾಂಡ್, ಸುಷ್ಮಾ ವರ್ಮಾ(ವಿಕೆಟ್ ಕೀಪರ್), ಕಿಮ್ ಗಾರ್ತ್, ತನುಜಾ ಕನ್ವರ್, ಮಾನ್ಸಿ ಜೋಶಿ.

Story first published: Tuesday, March 14, 2023, 19:04 [IST]
Other articles published on Mar 14, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+