Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

RCB Vs DC: ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಆರ್​​ಸಿಬಿ: ಬಲಿಷ್ಠ ಪ್ಲೇಯಿಂಗ್ XI ಕಣಕ್ಕೆ

WPL 2023: RCB Have Win The Toss Opted Field First Against Delhi Capitals, Playing XI, Picth Report

ಮುಂಬೈನ ಬ್ರಾಬೌರ್ನೆ ಅಂಗಳದಲ್ಲಿ ನಡೆಯುತ್ತಿರುವ ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಟಾಸ್ ಗೆದ್ದಿರುವ ಆರ್​​ಸಿಬಿ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಉಭಯ ತಂಡಗಳು ಟೂರ್ನಿಯಲ್ಲಿ ಮೊದಲನೇ ಪಂದ್ಯವನ್ನಾಡುತ್ತಿವೆ.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕಾಗಿ ಆರ್​​ಸಿಬಿ ಬಲಿಷ್ಠ ತಂಡವನ್ನೇ ಕಣಕ್ಕಿಳಿಸದೆ. ಎಲ್ಲಿಸ್ ಪೆರ್ರಿ, ಸೋಫಿ ಡಿವೈನ್, ಮೇಗನ್ ಶುಟ್, ಹೀಥರ್ ನೈಟ್ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಟಾಸ್ ಗೆದ್ದು ಮಾತನಾಡಿದ ಸ್ಮೃತಿ ಮಂಧಾನ "ಉತ್ತಮ ಗುಣಮಟ್ಟದ ವೇಗಿಗಳನ್ನು ಹೊಂದಿರುವ ಕಾರಣ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳಲಾಗಿದೆ. ಇದು ದೊಡ್ಡ ವೇದಿಕೆ, ನಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಲು ಕಾಯುತ್ತಿದ್ದೇವೆ. ತಂಡ ಮತ್ತು ಮ್ಯಾನೇಜ್‌ಮೆಂಟ್ ಅದ್ಭುತವಾಗಿದೆ" ಎಂದು ಹೇಳಿದರು.

ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಕೂಡ ಮೂವರು ವೇಗಿಗಳು, ಮೂವರು ಸ್ಪಿನ್ನರ್ ಗಳನ್ನು ಕಣಕ್ಕಿಳಿಸಿದೆ. ಆರ್​​ಸಿಬಿ ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿರುವುದರಿಂದ ಹೆಚ್ಚಿನ ಬೌಲರ್ ಗಳನ್ನು ಕಣಕ್ಕಿಳಿಸಿದೆ. ನಾಯಕಿ ಮೆಗ್‌ ಲ್ಯಾನಿಂಗ್ ಮಾತನಾಡಿ, "ನಾವು ಉತ್ತಮವಾಗಿ ಅಭ್ಯಾಸ ಮಾಡಿದ್ದೇವೆ, ಉತ್ತಮ ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆ" ಎಂದು ಹೇಳಿದ್ದಾರೆ.

WPL 2023: RCB Have Win The Toss Opted Field First Against Delhi Capitals, Playing XI, Picth Report

ಹೈಸ್ಕೋರಿಂಗ್ ಪಂದ್ಯವಾಗುವ ಸಾಧ್ಯತೆ

ಮಹಿಳಾ ಪ್ರೀಮಿಯರ್ ಲೀಗ್‌ಗಾಗಿ ಬೌಂಡರಿ ಅಂತರವನ್ನು ಕಡಿಮೆ ಮಾಡಲಾಗಿದೆ. ಬ್ರಾಬೌರ್ನೆ ಸ್ಟೇಡಿಯಂನಲ್ಲಿ 57 ಮತ್ತು 53 ಮೀಟರ್ ಬೌಂಡರಿ ಇರುವುದರಿಂದ ಹೈಸ್ಕೋರಿಂಗ್ ಪಂದ್ಯವನ್ನು ನಿರೀಕ್ಷೆ ಮಾಡಲಾಗಿದೆ. ಆರಂಭದಲ್ಲಿ ವೇಗಿಗಳಿಗೆ ಸಹಾಯ ಸಿಗುವುದರಿಂದ ಬ್ಯಾಟರ್ ಗಳು ಎಚ್ಚರಿಕೆಯಿಂದ ಇನ್ನಿಂಗ್ಸ್ ಆರಂಭಿಸಬೇಕಿದೆ.

ಈ ಟೂರ್ನಿಯಲ್ಲಿ ಆರ್ ಸಿಬಿ ಮಹಿಳಾ ತಂಡದ ಬಗ್ಗೆ ಸಾಕಷ್ಟು ನಿರೀಕ್ಷೆ ಹೊಂದಲಾಗಿದೆ. ಸ್ಟಾರ್ ಆಟಗಾರರ ದಂಡನ್ನೇ ಹೊಂದಿದ್ದು, ಯಾವ ರೀತಿಯ ಪ್ರದರ್ಶನ ನೀಡುತ್ತಾರೆ ಎಂದು ಕಾತರದಿಂದ ಕಾಯುತ್ತಿದ್ದಾರೆ.

WPL 2023: RCB Have Win The Toss Opted Field First Against Delhi Capitals, Playing XI, Picth Report

ಉಭಯ ತಂಡಗಳ ಆಡುವ ಬಳಗ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ : ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ದಿಶಾ ಕಸತ್, ಎಲ್ಲಿಸ್ ಪೆರ್ರಿ, ರಿಚಾ ಘೋಷ್ (ವಿಕೆಟ್ ಕೀಪರ್), ಹೀದರ್ ನೈಟ್, ಕನಿಕಾ ಅಹುಜಾ, ಆಶಾ ಶೋಬನಾ, ಪ್ರೀತಿ ಬೋಸ್, ಮೇಗನ್ ಶುಟ್, ರೇಣುಕಾ ಠಾಕೂರ್ ಸಿಂಗ್.

ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾತಂಡ: ಶಫಾಲಿ ವರ್ಮಾ, ಮೆಗ್ ಲ್ಯಾನಿಂಗ್ (ನಾಯಕಿ), ಮರಿಜಾನ್ನೆ ಕಪ್, ಜೆಮಿಮಾ ರಾಡ್ರಿಗಸ್, ಆಲಿಸ್ ಕ್ಯಾಪ್ಸೆ, ಜೆಸ್ ಜೊನಾಸ್ಸೆನ್, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಅರುಂಧತಿ ರೆಡ್ಡಿ, ಶಿಖಾ ಪಾಂಡೆ, ರಾಧಾ ಯಾದವ್, ತಾರಾ ನಾರ್ರಿಸ್.

Story first published: Sunday, March 5, 2023, 15:22 [IST]
Other articles published on Mar 5, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+