RCB vs GG WPL 2023 : ಆರ್‌ಸಿಬಿ vs ಗುಜರಾತ್ ಜೈಂಟ್ಸ್ ಪಂದ್ಯದ ವರದಿ; ಸಂಭಾವ್ಯ ಆಡುವ ಬಳಗ, ಲೈವ್ ಸ್ಟ್ರೀಮಿಂಗ್ ಮಾಹಿತಿ

ಬುಧವಾರ, ಮಾರ್ಚ್ 7ರಂದು ಮುಂಬೈನ ಬ್ರೆಬೋರ್ನ್ ಸ್ಟೇಡಿಯಂನಲ್ಲಿ ಸತತ ಎರಡು ಪಂದ್ಯಗಳನ್ನು ಸೋತಿರುವ ಗುಜರಾತ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡಗಳು ಮೊದಲ ಗೆಲುವಿಗಾಗಿ ಸೆಣಸಾಟ ನಡೆಸಲಿವೆ.
2023ರ ಮಹಿಳಾ ಪ್ರೀಮಿಯರ್ ಲೀಗ್‌ನ 8ನೇ ಪಂದ್ಯವು ರೋಚಕತೆಗೆ ಸಾಕ್ಷಿಯಾಗಲಿರುವ ಪಂದ್ಯವಾಗಿದೆ. ಆರ್‌ಸಿಬಿ ಮತ್ತು ಗುಜರಾತ್ ಜೈಂಟ್ಸ್ ತಂಡಗಳು ಚೊಚ್ಚಲ ಪಂದ್ಯಾವಳಿಯಲ್ಲಿ ಆಡಿದ ಮೊದಲೆರಡು ಪಂದ್ಯಗಳಲ್ಲಿ ಸೋತು ನಿರಾಸೆ ಅನುಭವಿಸಿವೆ. ಹೀಗಾಗಿ ಉಭಯ ತಂಡಗಳು ಗೆಲುವಿನ ಖಾತೆ ತೆರೆಯಲು ಹೋರಾಡಲಿವೆ.
ಆಲ್‌ರೌಂಡರ್ ಹರ್ಲೀನ್ ಡಿಯೋಲ್ ಅವರ ಉತ್ತಮ ಪ್ರದರ್ಶನದ ಸಹಾಯದಿಂದ ಗೌರವಾನ್ವಿತ ಮೊತ್ತ ಗಳಿಸಿದ್ದ ಗುಜರಾತ್ ಜೈಂಟ್ಸ್ ತಂಡವು ಗೆಲುವಿನ ಸಮೀಪ ಬಂದಿತ್ತು. ಆದರೆ, ಯುಪಿ ವಾರಿಯರ್ಸ್ ತಂಡದ ಗ್ರೇಸ್ ಹ್ಯಾರಿಸ್ ಅಬ್ಬರದ ಬ್ಯಾಟಿಂಗ್ ಮೂಲಕ ತಮ್ಮ ತಂಡವನ್ನು ಗೆಲುವಿನ ಗಡಿ ಮುಟ್ಟಿಸಿದರು. ಇದಕ್ಕೂ ಮುನ್ನ ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಎದುರು ಸೋತಿತ್ತು.
ಇನ್ನು, ಆರ್‌ಸಿಬಿ ಮಹಿಳಾ ತಂಡ ಅಚ್ಚರಿ ಎಂಬಂತೆ ತಮ್ಮ ಮೊದಲ ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತರೆ, ಎರಡನೇ ಪಂದ್ಯವನ್ನು ಬಲಿಷ್ಠ ಮುಂಬೈ ಇಂಡಿಯನ್ಸ್ ಎದುರು ಶರಣಾಯಿತು. ಆದ್ದರಿಂದ ಇಂದಿನ ಪಂದ್ಯದಲ್ಲಿ ಪುಟಿದೇಳಲು ಸ್ಮೃತಿ ಮಂಧಾನ ಬಳಗ ಎದುರು ನೋಡುತ್ತಿದೆ.

ಮಾರ್ಚ್ 8ರ ಅಂತಾರಾಷ್ಟ್ರೀಯ ಮಹಿಳಾ ದಿನದಂದು ಆರ್‌ಸಿಬಿ ಮತ್ತು ಗುಜರಾತ್ ಜೈಂಟ್ಸ್ ನಡುವಿನ ಪಂದ್ಯ ವೀಕ್ಷಿಸಲು ಎಲ್ಲರಿಗೂ ಬ್ರೆಬೋರ್ನ್ ಕ್ರೀಡಾಂಗಣಕ್ಕೆ ಬಿಸಿಸಿಐ ಉಚಿತ ಪ್ರವೇಶವನ್ನು ಘೋಷಿಸಿದೆ.
ಸ್ಮೃತಿ ಮಂಧಾನ ನಾಯಕತ್ವದ ಆರ್‌ಸಿಬಿ ತಂಡ ಪ್ರಸ್ತುತ ಮಹಿಳಾ ಪ್ರೀಮಿಯರ್ ಲೀಗ್ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದರೆ, ಗುಜರಾತ್ ಜೈಂಟ್ಸ್ ಕೊನೆಯ ಸ್ಥಾನದಲ್ಲಿದೆ. ಎರಡೂ ತಂಡಗಳು ತಮ್ಮ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಳ್ಳಬೇಕಾದರೆ ಅಂಕಪಟ್ಟಿಯಲ್ಲಿ ಮೇಲೆ ಬರಬೇಕಿದೆ. ಹಾಗಾಗಿ ಉಭಯ ತಂಡಗಳಿಗೆ ಗೆಲುವು ಅನಿವಾರ್ಯವಾಗಿದೆ.
ಆರ್‌ಸಿಬಿ vs ಗುಜರಾತ್ ಜೈಂಟ್ಸ್ ಪಂದ್ಯದ ವರದಿ
ಸ್ಥಳ, ದಿನಾಂಕ ಮತ್ತು ಸಮಯ: ಆರ್‌ಸಿಬಿ vs ಗುಜರಾತ್ ಜೈಂಟ್ಸ್ ನಡುವಿನ ಪಂದ್ಯವು ಬುಧವಾರ, ಮಾರ್ಚ್ 9ರಂದು ಮುಂಬೈನ ಬ್ರೆಬೋರ್ನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತೀಯ ಕಾಲಮಾನ ಸಂಜೆ 7.30ಕ್ಕೆ ಆರಂಭವಾಗಲಿದೆ. ಟಾಸ್ ಸಮಯ ಸಂಜೆ 7 ಗಂಟೆಗೆ.
ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ವಿವರ: ಮಹಿಳಾ ಪ್ರೀಮಿಯರ್ ಲೀಗ್ 2023ರ ಮೊದಲ ಪಂದ್ಯ ಭಾರತದಲ್ಲಿ Sports18 ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರವಾಗಲಿದ್ದರೆ, JioCinema ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಿ ವೀಕ್ಷಿಸಬಹುದು.

ಆರ್‌ಸಿಬಿ vs ಗುಜರಾತ್ ಜೈಂಟ್ಸ್ ಸಂಭಾವ್ಯ ಆಡುವ 11ರ ಬಳಗ
ಗುಜರಾತ್ ಜೈಂಟ್ಸ್ ತಂಡ: ಸ್ನೇಹ್ ರಾಣಾ(ನಾಯಕಿ), ಸಬ್ಬಿನೇನಿ ಮೇಘನಾ, ಹರ್ಲೀನ್ ಡಿಯೋಲ್, ಸುಷ್ಮಾ ವರ್ಮಾ(ವಿಕೆಟ್ ಕೀಪರ್), ಆಶ್ಲೀಗ್ ಗಾರ್ಡ್ನರ್, ಸೋಫಿಯಾ ಡಂಕ್ಲಿ, ಅನ್ನಾಬೆಲ್ ಸದರ್ಲ್ಯಾಂಡ್, ಕಿಮ್ ಗಾರ್ತ್, ದಯಾಳನ್ ಹೇಮಲತಾ, ತನುಜಾ ಕನ್ವರ್, ಮಾನ್ಸಿ ಜೋಶಿ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ದಿಶಾ ಕಸತ್, ರಿಚಾ ಘೋಷ್ (ವಿಕೆಟ್ ಕೀಪರ್), ಹೀಧರ್ ನೈಟ್, ಕನಿಕಾ ಅಹುಜಾ, ಮೇಗನ್ ಶುಟ್, ಶ್ರೇಯಾಂಕಾ ಪಾಟೀಲ್, ಪ್ರೀತಿ ಬೋಸ್, ರೇಣುಕಾ ಸಿಂಗ್ ಠಾಕೂರ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications