WPL 2023 RCB vs MI: ಆರ್‌ಸಿಬಿ vs ಮುಂಬೈ ಇಂಡಿಯನ್ಸ್ ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ, ಲೈವ್ ಸ್ಟ್ರೀಮ್

ಮಂಗಳವಾರ, ಮಾರ್ಚ್ 21ರಂದು 2023ರ ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್‌ನ ಪಂದ್ಯದಲ್ಲಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) 2023ರಲ್ಲಿ ಸತತ ಐದು ಗೆಲುವಿನ ನಂತರ ಎರಡು ಸೋಲು ಕಂಡಿರುವ ಮುಂಬೈ ಇಂಡಿಯನ್ಸ್ ಮಹಿಳಾ ತಂಡವು ಆಘಾತ ಅನುಭವಿಸಿದೆ. ಸೋಮವಾರದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ 9 ವಿಕೆಟ್‌ಗಳ ಸೋಲಿನ ನಂತರ ಅಗ್ರಸ್ಥಾನದಿಂದ ಕೆಳಗಿಳಿದಿದೆ.
ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಭಾನುವಾರ, ಮಾರ್ಚ್ 26ರಂದು ನಡೆಯುವ ಫೈನಲ್ ಪಂದ್ಯದಲ್ಲಿ ಆಡುವ ಭರವಸೆ ಹೊಂದಿದ್ದರೆ ಮಂಗಳವಾರ, ಮಾರ್ಚ್ 21ರಂದು 2023ರ ಮಹಿಳಾ ಪ್ರೀಮಿಯರ್ ಲೀಗ್‌ನ ತಮ್ಮ ಕೊನೆಯ ಲೀಗ್ ಪಂದ್ಯದಲ್ಲಿ ಆರ್‌ಸಿಬಿ ತಂಡವನ್ನು ಸೋಲಿಸಲೇಬೇಕಾದ ಒತ್ತಡದಲ್ಲಿದೆ.

ಮುಂಬೈ ಇಂಡಿಯನ್ಸ್ ತಂಡ ಫೈನಲ್‌ಗೆ ತಲುಪಲು ಆರ್‌ಸಿಬಿ ವಿರುದ್ಧದ ಗೆಲುವು ಸಾಕಾಗುವುದಿಲ್ಲ. ಆದರೆ, ಪ್ಲೇಆಫ್ ಸ್ಥಾನವನ್ನು ಖಚಿತಪಡಿಸಿಕೊಳ್ಳುತ್ತಾರೆ. ಏಕೆಂದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಯುಪಿ ವಾರಿಯರ್ಸ್ ವಿರುದ್ಧ ಲೀಗ್‌ನ ಅಂತಿಮ ಪಂದ್ಯದಲ್ಲಿ ಆಡಲಿದ್ದು, ಅಗ್ರಸ್ಥಾನ ತಲುಪಲು ಡೆಲ್ಲಿ ಕ್ಯಾಪಿಟಲ್ಸ್‌ಗೆ ದೊಡ್ಡ ಗೆಲುವು ಸಾಕು.
ಮತ್ತೊಂದೆಡೆ, ಸ್ಮೃತಿ ಮಂಧಾನ ನಾಯಕತ್ವದ ಆರ್‌ಸಿಬಿ ತಂಡ ತಮ್ಮ ಚೊಚ್ಚಲ ಋತುವನ್ನು ಕಳಪೆಯಾಗಿ ಆರಂಭಿಸಿತು. ಸತತ ಐದು ಪಂದ್ಯಗಳ ಸೋಲಿನ ಬಳಿಕ ಸತತ ಎರಡು ಪಂದ್ಯಗಳನ್ನು ಗೆದ್ದು ಬೀಗಿದೆ. ತಮ್ಮ ಕೊನೆಯ ಲೀಗ್ ಪಂದ್ಯದಲ್ಲಿ ಗೆಲುವಿಗಾಗಿ ಹವಣಿಸುತ್ತಿದೆ.

ಸೋಮವಾರ ನಡೆದ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಯುಪಿ ವಾರಿಯರ್ಸ್ ಗೆಲುವು ಸಾಧಿಸುತ್ತಿದ್ದಂತೆಯೇ ಆರ್‌ಸಿಬಿ ಮಹಿಳಾ ತಂಡದ ಪ್ಲೇಆಫ್ ಕನಸು ನುಚ್ಚುನೂರಾಯಿತು. 2023ರ ಮಹಿಳಾ ಪ್ರೀಮಿಯರ್ ಲೀಗ್‌ನ ಕೊನೆಯ ಪಂದ್ಯದಲ್ಲಿ ಗೆದ್ದು ಹ್ಯಾಟ್ರಿಕ್ ಜಯದೊಂದಿಗೆ ಆರ್‌ಸಿಬಿ ತಂಡ ಪಂದ್ಯಾವಳಿ ಪೂರ್ಣಗೊಳಿಸಲು ಎದುರು ನೋಡುತ್ತಿದೆ.
ಆರ್‌ಸಿಬಿ vs ಮುಂಬೈ ಇಂಡಿಯನ್ಸ್ ಪಂದ್ಯದ ವಿವರ
ಸ್ಥಳ ಮತ್ತು ಸಮಯ: ಆರ್‌ಸಿಬಿ vs ಮುಂಬೈ ಇಂಡಿಯನ್ಸ್ ಪಂದ್ಯವು ಮಂಗಳವಾರ, ಮಾರ್ಚ್ 21ರಂದು ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯಲಿದ್ದು, ಭಾರತೀಯ ಕಾಲಮಾನ ಮಧ್ಯಾಹ್ನ 3.30ಕ್ಕೆ ಆರಂಭವಾಗಲಿದೆ.
ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ವಿವರ: ಆರ್‌ಸಿಬಿ vs ಮುಂಬೈ ಇಂಡಿಯನ್ಸ್ ಪಂದ್ಯವು ಭಾರತದಲ್ಲಿ Sports18 ನೆಟ್‌ವರ್ಕ್ ಚಾನೆಲ್‌ಗಳಲ್ಲಿ ನೇರಪ್ರಸಾರವಾಗಲಿದ್ದರೆ, Jio ಸಿನಿಮಾ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮ್ ಆಗಿ ವೀಕ್ಷಿಸಬಹುದು.

ಆರ್‌ಸಿಬಿ vs ಮುಂಬೈ ಇಂಡಿಯನ್ಸ್ ಸಂಭಾವ್ಯ ಆಡುವ 11ರ ಬಳಗ
ಆರ್‌ಸಿಬಿ ತಂಡ: ಸೋಫಿ ಡಿವೈನ್, ಸ್ಮೃತಿ ಮಂಧಾನ (ನಾಯಕಿ), ಎಲ್ಲಿಸ್ ಪೆರ್ರಿ, ಹೀದರ್ ನೈಟ್, ಕನಿಕಾ ಅಹುಜಾ, ರಿಚಾ ಘೋಷ್ (ವಿಕೆಟ್ ಕೀಪರ್), ಶ್ರೇಯಾಂಕಾ ಪಾಟೀಲ್, ದಿಶಾ ಕಸತ್, ಸೋಭನಾ ಆಶಾ, ಮೇಗನ್ ಶುಟ್, ಪ್ರೀತಿ ಬೋಸ್.
ಮುಂಬೈ ಇಂಡಿಯನ್ಸ್ ತಂಡ: ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ನ್ಯಾಟ್ ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಅಮೆಲಿಯಾ ಕೆರ್, ಇಸ್ಸಿ ವಾಂಗ್, ಹುಮೈರಾ ಕಾಜಿ, ಧಾರಾ ಗುಜ್ಜರ್, ಅಮನ್‌ಜೋತ್ ಕೌರ್, ಜಿಂತಿಮಣಿ ಕಲಿತಾ, ಸೈಕಾ ಇಶಾಕ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications