WPL 2023: ಆರ್‌ಸಿಬಿ vs ಮುಂಬೈ ಇಂಡಿಯನ್ಸ್ ಟಾಸ್ ವರದಿ, ಆಡುವ 11ರ ಬಳಗ, ಲೈವ್ ಸ್ಕೋರ್

ಮಂಗಳವಾರ, ಮಾರ್ಚ್ 21ರಂದು 2023ರ ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್‌ನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಿವೆ.
ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಮೊದಲು ಬೌಲಿಂಗ್ ಆಯ್ದುಕೊಂಡರು, ಹೀಗಾಗಿ ಸ್ಮೃತಿ ಮಂಧಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.
ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಭಾನುವಾರ, ಮಾರ್ಚ್ 26ರಂದು ನಡೆಯುವ ಫೈನಲ್ ಪಂದ್ಯದಲ್ಲಿ ಆಡುವ ಭರವಸೆ ಹೊಂದಿದ್ದರೆ ಇಂದಿನ ತಮ್ಮ ಕೊನೆಯ ಲೀಗ್ ಪಂದ್ಯದಲ್ಲಿ ಆರ್‌ಸಿಬಿ ತಂಡವನ್ನು ಸೋಲಿಸಲೇಬೇಕಾದ ಒತ್ತಡದಲ್ಲಿದೆ.
ಮತ್ತೊಂದೆಡೆ, ಸ್ಮೃತಿ ಮಂಧಾನ ನಾಯಕತ್ವದ ಆರ್‌ಸಿಬಿ ತಂಡ ತಮ್ಮ ಚೊಚ್ಚಲ ಋತುವನ್ನು ಕಳಪೆಯಾಗಿ ಆರಂಭಿಸಿತು. ಸತತ ಐದು ಪಂದ್ಯಗಳ ಸೋಲಿನ ಬಳಿಕ ಸತತ ಎರಡು ಪಂದ್ಯಗಳನ್ನು ಗೆದ್ದು ಬೀಗಿದೆ. ತಮ್ಮ ಕೊನೆಯ ಲೀಗ್ ಪಂದ್ಯದಲ್ಲಿ ಗೆಲುವಿಗಾಗಿ ಹವಣಿಸುತ್ತಿದೆ.
ಆರ್‌ಸಿಬಿ vs ಮುಂಬೈ ಇಂಡಿಯನ್ಸ್ ಆಡುವ 11ರ ಬಳಗ
ಆರ್‌ಸಿಬಿ ತಂಡ: ಸೋಫಿ ಡಿವೈನ್, ಸ್ಮೃತಿ ಮಂಧಾನ (ನಾಯಕಿ), ಎಲ್ಲಿಸ್ ಪೆರ್ರಿ, ಹೀದರ್ ನೈಟ್, ಕನಿಕಾ ಅಹುಜಾ, ರಿಚಾ ಘೋಷ್ (ವಿಕೆಟ್ ಕೀಪರ್), ಶ್ರೇಯಾಂಕಾ ಪಾಟೀಲ್, ದಿಶಾ ಕಸತ್, ಸೋಭನಾ ಆಶಾ, ಮೇಗನ್ ಶುಟ್, ಪ್ರೀತಿ ಬೋಸ್.
ಮುಂಬೈ ಇಂಡಿಯನ್ಸ್ ತಂಡ: ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ನ್ಯಾಟ್ ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಅಮೆಲಿಯಾ ಕೆರ್, ಇಸ್ಸಿ ವಾಂಗ್, ಹುಮೈರಾ ಕಾಜಿ, ಪೂಜಾ ವಸ್ತ್ರಾಕರ್, ಅಮನ್‌ಜೋತ್ ಕೌರ್, ಜಿಂತಿಮಣಿ ಕಲಿತಾ, ಸೈಕಾ ಇಶಾಕ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications