Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WPL 2023: ಆರ್‌ಸಿಬಿ ತಂಡಕ್ಕೆ ಯುಪಿ ವಾರಿಯರ್ಸ್ ಸವಾಲು, ಟಾಸ್ ರಿಪೋರ್ಟ್, ಆಡುವ ಬಳಗ

WPL 2023: RCB vs UPW, 8th match Toss report, Playing XI and Live score

ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಇಂದು 8ನೇ ಪಂದ್ಯ ನಡೆಯುತ್ತಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಹಾಗೂ ಯುಪಿ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಿದೆ. ಮುಂಬೈನ ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೊಂಡಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟಾಸ್ ಗೆದ್ದುಕೊಂಡಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿದೆ. ಹೀಗಾಗಿ ಯುಪಿ ವಾರಿಯರ್ಸ್ ಮೊದಲಿಗೆ ಬೌಲಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.

ಯುಪಿ ವಾರಿಯರ್ಸ್ ತಂಡಕ್ಕೆ ಇದು ಮೂರನೇ ಪಂದ್ಯವಾಗಿದ್ದರೆ ಆರ್‌ಸಿಬಿ ತಂಡಕ್ಕೆ ಇದು ನಾಲ್ಕನೇ ಪಂದ್ಯವಾಗಿದೆ. ಆದರೆ ಯುಪಿ ವಾರಿಯರ್ಸ್ ಆಡಿರುವ ಎರಡು ಪಂದ್ಯಗಳ ಪೈಕಿ ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿದ್ದರೆ ಒಂದು ಪಂದ್ಯದಲ್ಲಿ ಸೋಲಿನ ಕಹಿ ಅನುಭವಿಸಿದೆ. ಇತ್ತ ಆರ್‌ಸಿಬಿ ಮೊದಲ ಆಡಿರುವ ಮೂರು ಪಂದ್ಯಗಳಲ್ಲಿಯೂ ಸೋಲು ಮಾತ್ರವೇ ಕಂಡಿದ್ದು ಮೊದಲ ಗೆಲುವಿಗಾಗಿ ಎದುರು ನೋಡುತ್ತಿದೆ.

ಯುಪಿ ವಾರಿಯರ್ಸ್ ಆಡುವ ಬಳಗ: ಅಲಿಸ್ಸಾ ಹೀಲಿ(ನಾಯಕಿ/ವಿಕೆಟ್ ಕೀಪರ್), ಶ್ವೇತಾ ಸೆಹ್ರಾವತ್, ಕಿರಣ್ ನವಗಿರೆ, ತಹ್ಲಿಯಾ ಮೆಗ್ರಾತ್, ದೀಪ್ತಿ ಶರ್ಮಾ, ಗ್ರೇಸ್ ಹ್ಯಾರಿಸ್, ದೇವಿಕಾ ವೈದ್ಯ, ಸಿಮ್ರಾನ್ ಶೇಖ್, ಸೋಫಿ ಎಕ್ಲೆಸ್ಟೋನ್, ಅಂಜಲಿ ಸರ್ವಾಣಿ, ರಾಜೇಶ್ವರಿ ಗಾಯಕ್ವಾಡ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ಹೀದರ್ ನೈಟ್, ರಿಚಾ ಘೋಷ್ (ವಿಕೆಟ್ ಕೀಪರ್), ಎರಿನ್ ಬರ್ನ್ಸ್, ಶ್ರೇಯಾಂಕಾ ಪಾಟೀಲ್, ಕನಿಕಾ ಅಹುಜಾ, ಸಹನಾ ಪವಾರ್, ಕೋಮಲ್ ಝಂಜಾದ್, ರೇಣುಕಾ ಠಾಕೂರ್ ಸಿಂಗ್

Story first published: Friday, March 10, 2023, 19:12 [IST]
Other articles published on Mar 10, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+