Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WPL 2023: ಆರ್​​ಸಿಬಿ - ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿ: ಸೇಡು ತೀರಿಸಿಕೊಳ್ಳುತ್ತಾ ಮಂದಾನ ಪಡೆ

WPL 2023: RCB Will Face Delhi Capitals On Monday In WPL Match, Probable XI, Picth Report

ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಸೋಮವಾರ ನಡೆಯುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೆಣೆಸಲಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದದ ಮೊದಲನೇ ಪಂದ್ಯದಲ್ಲಿ ಹೀನಾಯ ಸೋಲು ಕಂಡಿದ್ದ ಮಂದಾನ ಪಡೆ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.

ಮಹಿಳಾ ಪ್ರೀಮಿಯರ್ ಲೀಗ್ ಆರಂಭಕ್ಕೆ ಮುನ್ನ ಬಲಿಷ್ಠ ತಂಡವೆನಿಸಿಕೊಂಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಆಡಿದ ನಾಲ್ಕು ಪಂದ್ಯದಲ್ಲಿ ಸೋಲನುಭವಿಸಿರುವ ಮಂದಾನ ಪಡೆ ಭಾರಿ ಮುಖಭಂಗಕ್ಕೆ ಒಳಗಾಗಿದೆ.

ಪಾಯಿಂಟ್ಸ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಮತ್ತೊಂದು ಜಯದ ನಿರೀಕ್ಷೆಯಲ್ಲಿದೆ. ಅವರು ಆಡಿದ ಕೊನೆಯ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಅಮೋಘ 10 ವಿಕೆಟ್‌ಗಳ ಜಯ ಸಾಧಿಸಿದ್ದರು.

ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಗಳಿಸಿ, ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಎರಡನೇ ವೇಗದ ಅರ್ಧಶತಕ ಗಳಿಸಿದ ಆಟಗಾರ್ತಿ ಎನಿಸಿಕೊಂಡಿದ್ದಾರೆ. ಕೇವಲ 28 ಎಸೆತಗಳಲ್ಲಿ 10 ಬೌಂಡರಿ 5 ಭರ್ಜರಿ ಸಿಕ್ಸರ್ ನೆರವಿನಿಂದ 271.43 ಸ್ಟ್ರೈಕ್‌ರೇಟ್‌ನಲ್ಲಿ 76 ರನ್ ಗಳಿಸಿದ್ದರು. ನಾಯಕಿ ಮೆಗ್ ಲ್ಯಾನಿಂಗ್ ಕೂಡ ಅತ್ಯುತ್ತಮ ಫಾರ್ಮ್‌ನಲ್ಲಿದ್ದು ಆರ್ ಸಿಬಿ ವಿರುದ್ಧ ಗೆಲ್ಲುವ ನೆಚ್ಚಿನ ತಂಡವೆನಿಸಿಕೊಂಡಿದೆ.

WPL 2023: RCB Will Face Delhi Capitals On Monday In WPL Match, Probable XI, Picth Report

ತಪ್ಪು ತಿದ್ದಿಕೊಳ್ಳುತ್ತಾ ಮಂದಾನ ಪಡೆ

ಆಡಿರುವ ನಾಲ್ಕು ಪಂದ್ಯಗಳಲ್ಲಿ ಸೋತಿರುವ ಮಂದಾನ ಪಡೆಗೆ ಯಾವುದು ಅಂದುಕೊಂಡಂತಾಗುತ್ತಿಲ್ಲ. ನಾಯಕಿಯ ಎಲ್ಲಾ ಲೆಕ್ಕಾಚಾರಗಳು ತಲೆಕೆಳಗಾಗಿವೆ. ಬೌಲಿಂಗ್ ವಿಭಾಗ ಸಾಕಷ್ಟು ದುರ್ಬಲವಾಗಿದೆ. ಮೊದಲ ಮೂರು ಪಂದ್ಯಗಳಲ್ಲಿ 200ಕ್ಕಿಂತ ಹೆಚ್ಚಿನ ರನ್ ಬಿಟ್ಟುಕೊಟ್ಟು ಚೇಸಿಂಗ್ ಮಾಡಲು ವಿಫಲವಾಗಿತ್ತು.

ನಾಲ್ಕನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದಾಗ 138 ರನ್‌ಗಳಿ ಆಲೌಟ್ ಆಗಿತ್ತು. ಎಲಿಸ್ಸಾ ಪೆರ್ರಿ, ಸೋಫಿ ಡಿವೈನ್ ಉತ್ತಮವಾಗಿ ಆಡುತ್ತಿದ್ದರೆ, ನಾಯಕಿ ಮಂದಾನ ಬ್ಯಾಟಿಂಗ್‌ನಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದಾರೆ. ಶ್ರೇಯಾಂಕ ಪಾಟೀಲ್ ಬ್ಯಾಟಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದು, ಬೌಲಿಂಗ್‌ನಲ್ಲಿ ಸುಧಾರಣೆ ಕಂಡುಕೊಳ್ಳಬೇಕಿದೆ. ಆರ್ ಸಿಬಿ ಬೌಲಿಂಗ್ ಮತ್ತು ಬ್ಯಾಟಿಂಗ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರೆ ಮಾತ್ರ ಗೆಲುವಿನ ನಿರೀಕ್ಷೆ ಮಾಡಬಹುದು.

ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು, ಸಂಜೆ 7.30 ಆರಂಭವಾಗಲಿದೆ. ಬ್ಯಾಟಿಂಗ್‌ಗೆ ಪಿಚ್‌ ಹೆಚ್ಚಿನ ನೆರವು ನೀಡುವುದರಿಂದ ಹೈಸ್ಕೋರಿಂಗ್ ಪಂದ್ಯವನ್ನು ನಿರೀಕ್ಷೆ ಮಾಡಬಹುದಾಗಿದೆ. ಟಾಸ್ ಗೆಲ್ಲುವ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರೆ, ಉತ್ತಮ ನಿರ್ಧಾರ ಎನ್ನಲಾಗಿದೆ.

WPL 2023: RCB Will Face Delhi Capitals On Monday In WPL Match, Probable XI, Picth Report

ಉಭಯ ತಂಡಗಳ ಸಂಭಾವ್ಯ ಆಡುವ ಬಳಗ

ಆರ್​​ಸಿಬಿ : ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ಹೀದರ್ ನೈಟ್, ರಿಚಾ ಘೋಷ್ (ವಿಕೆಟ್ ಕೀಪರ್), ಎರಿನ್ ಬರ್ನ್ಸ್, ಶ್ರೇಯಾಂಕ ಪಾಟೀಲ್, ಕನಿಕಾ ಅಹುಜಾ, ಸಹನಾ ಪವಾರ್, ಕೋಮಲ್ ಝಂಜಾದ್, ರೇಣುಕಾ ಠಾಕೂರ್ ಸಿಂಗ್.

ಡೆಲ್ಲಿ ಕ್ಯಾಪಿಟಲ್ಸ್ : ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಲಾರಾ ಹ್ಯಾರಿಸ್, ಜೆಮಿಮಾ ರಾಡ್ರಿಗಸ್, ಮರಿಜಾನ್ನೆ ಕಪ್, ಜೆಸ್ ಜೊನಾಸೆನ್, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಮಿನ್ನು ಮಣಿ, ರಾಧಾ ಯಾದವ್, ಶಿಖಾ ಪಾಂಡೆ, ತಾರಾ ನಾರ್ರಿಸ್.

Story first published: Sunday, March 12, 2023, 23:43 [IST]
Other articles published on Mar 12, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+