WPL 2023 RCB vs MI : ಆರ್‌ಸಿಬಿಗೆ ಸತತ 2ನೇ ಆಘಾತ: ಮುಂಬೈ ವಿರುದ್ಧವೂ ದಕ್ಕದ ಗೆಲುವು

ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಎರಡನೇ ಪಂದ್ಯದಲ್ಲಿಯೂ ಗೆಲುವಿನ ಮುಖ ನೋಡಲು ವಿಫಲವಾಗಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಮತ್ತೊಮ್ಮೆ ಎಲ್ಲಾ ವಿಭಾಗದಲ್ಲಿಯೂ ವೈಫಲ್ಯ ಕಂಡಿದ್ದು 9 ವಿಕೆಟ್‌ಗಳ ಅಂತರದ ಭಾರೀ ಸೋಲು ಅನುಭವಿಸಿದೆ. ಮೊದಲಿಗೆ ಬ್ಯಾಟಿಂಗ್‌ನಲ್ಲಿ ಹಿನ್ನಡೆ ಕಂಡ ಆರ್‌ಸಿಬಿ ಬಳಿಕ ಬೌಲಿಂಗ್‌ನಲ್ಲಿ ಮತ್ತೊಮ್ಮೆ ಹೀನಾಯ ಪ್ರದರ್ಶನ ನೀಡಿದೆ.
ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿದ ಆರ್‌ಸಿಬಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾಗಿದೆ. ತಂಡದ ಖ್ಯಾತನಾಮ ಆಟಗಾರ್ತಿಯರೆಲ್ಲರೂ ಮತ್ತೆಮ್ಮೆ ವೈಫಲ್ಯ ಅನುಭವಿಸಿದ್ದು ತಂಡಕ್ಕೆ ದೊಡ್ಡ ಹಿನ್ನಡೆಯುಂಟು ಮಾಡಿದೆ. ಆದರೆ ಅದರ ಹೊರತಾಗಿಯೂ ಕೆಳ ಕ್ರಮಾಂಕದ ಬ್ಯಾಟರ್‌ಗಳು ಆರ್‌ಸಿಬಿ ಹೋರಾಟವನ್ನು ಚಾಲ್ತಿಯಲ್ಲಿರುವಂತೆ ನೋಡಿಕೊಂಡರು. ಹೀಗಾಗಿ ಸವಾಲಿನ ಮೊತ್ತವನ್ನು ಪೇರಿಸುವಲ್ಲಿ ಯಶಸ್ವಿಯಾಗಿತ್ತು. ಆದರೆ ಬೌಲಿಂಗ್‌ನಲ್ಲಿ ಮತ್ತೊಮ್ಮೆ ಆರ್‌ಸಿಬಿ ಆಘಾತಕಾರಿ ಪ್ರದರ್ಶನ ನೀಡಿದ್ದು ಮುಂಬೈ ಇಂಡಿಯನ್ಸ್ ಇನ್ನೂ 34 ಎಸೆತಗಳು ಬಾಕಿಯಿರುವಂತೆ ಈ ಮೊತ್ತವನ್ನು ಬೆನ್ನಟ್ಟಿದೆ.
ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ನಡೆಸಿದ ಆರ್‌ಸಿನಿ ಉತ್ತಮ ಆರಂಭವನ್ನು ಪಡೆಯುವಲ್ಲಿ ಯಶಸ್ವಿಯಾಯಿತು. ಆದರೆ ಆ ಆರಂಭ ಮುಂದುವರಿಸಿಕೊಂಡು ಹೋಗಲು ವಿಫಲವಾಗಿದೆ. ನಾಯಕಿ ಮಂಧಾನ ಹಾಗೂ ಡಿವೈನ್ 39 ರನ್‌ಗಳ ಜೊತೆಯಾಟನ ನೀಡಿ ಬೇರ್ಪಟ್ಟ ಬಳಿಕ ಆರ್‌ಸಿಬಿ ತಂಡ ಹಠಾತ್ ಕುಸಿತಕ್ಕೆ ಒಳಗಾಯಿತು. 43 ರನ್‌ಗಳಿಗೆ 4 ವಿಕಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಎಲ್ಈಸ್ ಪೆರ್ರಿ ಕೂಡ ಈ ಸಂದರ್ಭದಲ್ಲಿ ವಿಕೆಟ್ ಕಳೆದುಕೊಳ್ಳುವ ಮೂಲಕ 71 ರನ್‌ಗೆ 5 ನೇ ವಿಕೆಟ್ ಕಳೆದುಕೊಂಡಿತು.
ಆದರೆ ಕೆಳ ಕ್ರಮಾಂಕದಲ್ಲಿ ರಿಚಾ ಘೋಷ್, ಕನಿಕಾ ಅಹುಜಾ, ಶ್ರೇಯಾಂಕ ಪಾಟೀಲ್, ಹಾಗೂ ಮೇಘನ್ ಶುಟ್ ತಂಡವನ್ನು ಸವಾಲಿನ ಮೊತ್ತದತ್ತ ಮುನ್ನಡೆಸಿದರು. ಕನ್ನಡತಿ ಶ್ರೇಯಾಂಕ ಪಾಟೀಲ್ 15 ಎಸೆತಗಳಲ್ಲಿ 23 ರನ್‌ಗಳಿಸುವ ಮೂಲಕ ತನ್ನಲ್ಲಿನ ಬ್ಯಾಟಿಂಗ್ ಕೌಶಲ್ಯವನ್ನು ತೋರ್ಪಡಿಸಿದ್ದಾರೆ. ಕನಿಕಾ ಅಹುಜಾ 13 ಎಸೆತಗಳಲ್ಲಿ 22 ರನ್ ಬಾರಿಸಿ ಮಿಂಚಿದರು. ಅಂತಿಮವಾಗಿ ಆರ್‌ಸಿಬಿ ಇನ್ನೂ 8 ಎಸೆತಗಳು ಬಾಕಿಯಿರುವಂತೆಯೇ 155 ರನ್‌ಗಳಿಸಿ ಆಲೌಟ್ ಆಯಿತು.
ಈ ಮೊತ್ತವನ್ನು ಆರ್‌ಸಿಬಿ ಕೇವಲ ಒಂದು ವಿಕೆಟ್ ಕಳೆದುಕೊಂಡು ಬೆನ್ನಟ್ಟುವಲ್ಲಿ ಯಶಸ್ವಿಯಾಗಿದೆ. ಮುಂಬೈ ಇಂಡಿಯನ್ಸ್ ಪರವಾಗಿ ಹೀಲಿ ಮ್ಯಾಥ್ಯೂಸ್ 38 ಎಸೆತಗಳಲ್ಲಿ ಅಜೇಯ 77 ರನ್ ಬಾರಿಸಿ ಅಬ್ಬರಿಸಿದರೆ ಯಸ್ತಿಕಾ ಭಾಟಿಯಾ 23 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ನ್ಯಾಟ್ ಸೈವರ್ ಬ್ರುಂಟ್ ಅಜೇಯ 55 ರನ್‌ಗಳಿಸಿ ತಂಡಕ್ಕೆ ಸುಲಭ ಗೆಲುವು ತಂದುಕೊಟ್ಟಿದ್ದಾರೆ. ಈ ಮೂಲಕ ಮುಂಬೈ ಇಂಡಿಯನ್ಸ ತಂಡ ಸತತ ಎರಡನೇ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ.
ಮುಂಬೈ ಇಂಡಿಯನ್ಸ್ ಆಡುವ ಬಳಗ: ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಹೇಲಿ ಮ್ಯಾಥ್ಯೂಸ್, ನ್ಯಾಟ್ ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಅಮೆಲಿಯಾ ಕೆರ್, ಪೂಜಾ ವಸ್ತ್ರಾಕರ್, ಇಸ್ಸಿ ವಾಂಗ್, ಅಮನ್ಜೋತ್ ಕೌರ್, ಹುಮೈರಾ ಕಾಜಿ, ಜಿಂತಿಮನಿ ಕಲಿತಾ, ಸೈಕಾ ಇಶಾಕ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ದಿಶಾ ಕಸತ್, ರಿಚಾ ಘೋಷ್(ವಿಕೆಟ್ ಕೀಪರ್), ಹೀದರ್ ನೈಟ್, ಕನಿಕಾ ಅಹುಜಾ, ಮೇಗನ್ ಶುಟ್, ಶ್ರೇಯಾಂಕಾ ಪಾಟೀಲ್, ಪ್ರೀತಿ ಬೋಸ್, ರೇಣುಕಾ ಠಾಕೂರ್ ಸಿಂಗ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications