WPL 2023: ಆರ್‌ಸಿಬಿ ತಂಡಕ್ಕೆ ಇಂದು ಡೆಲ್ಲಿ ಕ್ಯಾಪಿಟಲ್ಸ್ ಸವಾಲು; ಸಂಭಾವ್ಯ ತಂಡ, ಪಂದ್ಯದ ಮಾಹಿತಿ

ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತವಾಗಿ ವೈಫಲ್ಯ ಅನುಭವಿಸಿದೆ. ಈವರೆಗೆ ಆಡಿರುವ ನಾಲ್ಕು ಪಂದ್ಯಗಳಲ್ಲಿ ಕನಿಷ್ಠ ಒಂದು ಗೆಲುವು ಸಾಧಿಸಲು ಕೂಡ ಸ್ಮೃತಿ ಮಂಧಾನ ನೇತೃತ್ವದ ಆರ್‌ಸಿಬಿ ತಂಡಕ್ಕೆ ಅಸಾಧ್ಯವಾಗಿದೆ. ಮೊದಲ ಗೆಲುವಿನ ಹಂಬಲದಲ್ಲಿರುವ ಆರ್‌ಸಿಬಿ ಪಡೆಗೆ ಇಂದು ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸವಾಲೊಡ್ಡಲಿದ್ದು ಈ ಅಗ್ನಿ ಪರೀಕ್ಷೆಯಲ್ಲಿ ಯಾವ ರೀತಿಯ ಪ್ರದರ್ಶನ ನೀಡಲಿದೆ ಎಂಬುದು ಕುತೂಹಲ ಮೂಡಿಸಿದೆ.
ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ಈ ಪಂದ್ಯಕ್ಕೆ ಅತ್ಯಂತ ಆತ್ಮವಿಶ್ವಾಸದೊಂದಿಗೆ ಕಣಕ್ಕಿಳಿಯುತ್ತಿದೆ. ಟೂರ್ನಿಯಲ್ಲಿ ಆಡಿರುವ ನಾಲ್ಕು ಪಂದ್ಯಗಳ ಪೈಕಿ ಒಂದು ಪಂದ್ಯದಲ್ಲಿ ಮಾತ್ರವೇ ಡೆಲ್ಲಿ ಕ್ಯಾಪಿಟಲ್ಸ್ ಸೋಲು ಕಂಡಿದ್ದು ಐದು ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಅಲ್ಲದೆ ಅಂತಿಮ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡದ ವಿರುದ್ಧ ಅಮೋಘ 10 ವಿಕೆಟ್‌ಗಳ ಅಂತರದ ಗೆಲುವು ಸಾಧಿಸಿ ಆತ್ಮ ವಿಶ್ವಾಸದಲ್ಲಿದೆ.
ಇನ್ನು ಈ ಬಾರಿಯ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳುರು ತಂಡಗಳು ಇದು ಎರಡನೇ ಬಾರಿಗೆ ಮುಖಾಮುಖಿಯಾಗಿತ್ತಿದೆ. ಈ ತಂಡಗಳು ತಮ್ಮ ಪ್ರಥಮ ಪಂದ್ಯದಲ್ಲಿ ಪರಸ್ಪರ ಮುಖಾಮುಖಿಯಾಗಿದ್ದು ಆ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆರ್‌ಸಿಬಿ ಬಳಗವನ್ನು ಭರ್ಜರಿ 60 ರನ್‌ಗಳ ಅಂತರದಿಂದ ಸೋಲಿಸಿತ್ತು. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ಪಡೆ ಎಲ್ಲಾ ಕೋನಗಳಿಂದಲೂ ಅತ್ಯಂತ ಆತ್ಮವಿಶ್ವಾಸದಿಂದಿದ್ದು ಆರ್‌ಸಿಬಿ ಸತತ ಸೋಲಿನಿಂದ ಕಂಗೆಟ್ಟಿದೆ.

ಪಂದ್ಯದ ಆರಂಭ ಹಾಗೂ ನೇರಪ್ರಸಾರದ ಮಾಹಿತಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಈ ಪಂದ್ಯ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿದ್ದು ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದೆ. 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದ್ದು ಜಿಯೋ ಸಿನಿಮಾದಲ್ಲಿ ಪಂದ್ಯದ ನೇರಪ್ರಸಾರವಿರಲಿದೆ.

ಪಿಚ್ ರಿಪೋರ್ಟ್, ಹವಾಮಾನ ವರದಿ
ಡಿವೈ ಪಾಟೀಲ್ ಕ್ರೀಡಾಂಗಣದ ಪಿಚ್ ಬ್ಯಾಟರ್‌ಗಳಿಗೆ ಉತ್ತಮವಾಗಿ ನೆರವಾಗಲಿದ್ದು ದೊಡ್ಡ ಮೊತ್ತದ ಹೋರಾಟ ನಡೆಯುವ ಸಾಧ್ಯತೆ ದಟ್ಟವಾಗಿದೆ. 170ಕ್ಕಿಂತ ಹೆಚ್ಚಿನ ಸ್ಕೋರ್ ಇಲ್ಲಿ ಉತ್ತಮ ಮೊತ್ತ ಎನಿಸಿಕೊಳ್ಳಲಿದೆ. ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ತಂಡ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡುವುದು ಉತ್ತಮ ನಿರ್ಧಾರವಾಗಲಿದೆ.
ಹವಾಮಾನ ವರದಿ: ಇನ್ನು ಈ ಪಂದ್ಯದ ಸಂದರ್ಭದಲ್ಲಿ ಮಳೆ ಅಡ್ಡಿಯುಂಟು ಮಾಡುವ ಯಾವುದೇ ಸಾಧ್ಯತೆಗಳು ಕೂಡ ಇಲ್ಲ. ನವಿ ಮುಂಬೈನಲ್ಲಿ ಇಂದು 38 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶವಾಗಿದ್ದು 26 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಾಗಿರಲಿದೆ.
PSL 2023: 45 ಬೌಂಡರಿ, 33 ಸಿಕ್ಸರ್, 515 ರನ್ : ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ವಿಶ್ವದಾಖಲೆಯ ಪಂದ್ಯ!

ಇತ್ತಂಡಗಳ ಸಂಭಾವ್ಯ ಆಡುವ ಬಳಗ
ಡೆಲ್ಲಿ ಕ್ಯಾಪಿಟಲ್ಸ್: ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಲಾರಾ ಹ್ಯಾರಿಸ್, ಜೆಮಿಮಾ ರಾಡ್ರಿಗಸ್, ಮರಿಜಾನ್ನೆ ಕಪ್, ಜೆಸ್ ಜೊನಾಸೆನ್, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಮಿನ್ನು ಮಣಿ, ರಾಧಾ ಯಾದವ್, ಶಿಖಾ ಪಾಂಡೆ, ತಾರಾ ನಾರ್ರಿಸ್.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ಹೀದರ್ ನೈಟ್, ರಿಚಾ ಘೋಷ್ (ವಿಕೆಟ್ ಕೀಪರ್), ಎರಿನ್ ಬರ್ನ್ಸ್, ಶ್ರೇಯಾಂಕಾ ಪಾಟೀಲ್, ಕನಿಕಾ ಅಹುಜಾ, ಸಹನಾ ಪವಾರ್, ಕೋಮಲ್ ಜಂಜಾದ್, ರೇಣುಕಾ ಠಾಕೂರ್ ಸಿಂಗ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications