Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WPL 2023: ಆರ್‌ಸಿಬಿ vs ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ & ಲೈವ್ ಸ್ಕೋರ್

WPL 2023: Royal Challengers Bangalore vs Delhi Capitals Toss Report, Playing 11 And Live Score

ಸೋಮವಾರ, ಮಾರ್ಚ್ 13ರಂದು ಮಹಿಳಾ ಪ್ರೀಮಿಯರ್ ಲೀಗ್‌ನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮಹಿಳಾ ತಂಡವು ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡವನ್ನು ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಎದುರಿಸುತ್ತಿದೆ.

ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕಿ ಮೆಗ್ ಲ್ಯಾನಿಂಗ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಸ್ಮೃತಿ ಮಂಧಾನ ನಾಯಕತ್ವದ ಆರ್‌ಸಿಬಿ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

ಈ ಮೊದಲು ಎರಡೂ ತಂಡಗಳು ಪರಸ್ಪರ ಮುಖಾಮುಖಿಯಾಗಿದ್ದಾಗ, ಡೆಲ್ಲಿ ಕ್ಯಾಪಿಟಲ್ಸ್ ತಂಡ 60 ರನ್‌ಗಳ ಅಂತರದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೋಲಿಸಿತ್ತು. ಇದೀಗ ಕಳೆದ ಪಂದ್ಯದ ಸೋಲಿಗೆ ಪ್ರತೀಕಾರ ತೀರಿಸಿಕೊಳ್ಳುವ ತವಕದಲ್ಲಿ ಆರ್‌ಸಿಬಿ ತಂಡವಿದೆ.

ತನ್ನ ಕೊನಯ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡವನ್ನು 10 ವಿಕೆಟ್‌ಗಳಿಂದ ಸೋಲಿಸಿದ ಹೆಚ್ಚಿನ ಆತ್ಮವಿಶ್ವಾಸದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಈ ಪಂದ್ಯವನ್ನು ಆಡುತ್ತಿದೆ.

ಇನ್ನು ಸ್ಮೃತಿ ಮಂಧಾನ ಪಡೆ ಇದುವರೆಗೆ ಆಡಿದ ಎಲ್ಲಾ ನಾಲ್ಕು ಪಂದ್ಯಗಳನ್ನು ಸೋತಿರುವ ಕಾರಣ ಗೆಲುವಿಗೆ ಇನ್ನೂ ತೆರೆದಿಲ್ಲ. ಮುಂದಿನ ಹಂತ ತಲುಪಲು ಆರ್‌ಸಬಿ ತಂಡಕ್ಕೆ ಗೆಲುವು ಅನಿವಾರ್ಯವಾಗಿದೆ. ಸೋತರೆ ಟೂರ್ನಿಯಿಂದ ಹೊರಬೀಳುವ ಸಾಧ್ಯತೆಯೂ ಇದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಡೆಲ್ಲಿ ಕ್ಯಾಪಿಟಲ್ಸ್ ಆಡುವ 11ರ ಬಳಗ
ಆರ್‌ಸಿಬಿ ಮಹಿಳಾ ತಂಡ: ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ದಿಶಾ ಕಸತ್, ಎಲ್ಲಿಸ್ ಪೆರ್ರಿ, ರಿಚಾ ಘೋಷ್ (ವಿಕೆಟ್ ಕೀಪರ್), ಹೀದರ್ ನೈಟ್, ಶ್ರೇಯಾಂಕ ಪಾಟೀಲ್, ಆಶಾ ಶೋಬನಾ, ಪ್ರೀತಿ ಬೋಸ್, ಮೇಗನ್ ಶುಟ್, ರೇಣುಕಾ ಠಾಕೂರ್ ಸಿಂಗ್.

ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡ: ಶಫಾಲಿ ವರ್ಮಾ, ಮೆಗ್ ಲ್ಯಾನಿಂಗ್ (ನಾಯಕಿ), ಅಲಿಸ್ ಕ್ಯಾಪ್ಸೆ, ಮರಿಜಾನ್ನೆ ಕಪ್, ಜೆಮಿಮಾ ರೋಡ್ರಿಗಸ್, ಜೆಸ್ ಜೊನಾಸ್ಸೆನ್, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಅರುಂಧತಿ ರೆಡ್ಡಿ, ಶಿಖಾ ಪಾಂಡೆ, ರಾಧಾ ಯಾದವ್, ತಾರಾ ನಾರ್ರಿಸ್.

Story first published: Monday, March 13, 2023, 19:06 [IST]
Other articles published on Mar 13, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+