Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WPL 2023: ಯುಪಿ ವಾರಿಯರ್ಸ್ ವಿರುದ್ಧ ಟಾಸ್ ಗೆದ್ದ ಆರ್‌ಸಿಬಿ; ಆಡುವ 11ರ ಬಳಗ & ಲೈವ್ ಸ್ಕೋರ್

WPL 2023: Royal Challengers Bangalore vs UP Warriorz Toss Report, Playing 11 And Live Score

ಬುಧವಾರ, ಮಾರ್ಚ್ 15ರಂದು ಮಹಿಳಾ ಪ್ರೀಮಿಯರ್ ಲೀಗ್‌ನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮಹಿಳಾ ತಂಡವು ಯುಪಿ ವಾರಿಯರ್ಸ್ ಮಹಿಳಾ ತಂಡದ ವಿರುದ್ಧ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಸೆಣಸಾಡುತ್ತಿದೆ.

ಟಾಸ್ ಗೆದ್ದ ಆರ್‌ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಅಲಿಸ್ಸಾ ಹೀಲಿ ನಾಯಕತ್ವದ ಯುಪಿ ವಾರಿಯರ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

ಅಲಿಸ್ಸಾ ಹೀಲಿ ನಾಯಕತ್ವದ ಯುಪಿ ವಾರಿಯರ್ಸ್ ತಂಡವು ತನ್ನ ಹಿಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋತ ನಂತರ ಈ ಪಂದ್ಯವನ್ನು ಅಡುತ್ತಿದೆ. ಇನ್ನು ಸ್ಮೃತಿ ಮಂಧಾನ ನಾಯಕತ್ವದ ಆರ್‌ಸಿಬಿ ತಂಡವು ತಮ್ಮ ಕೊನೆಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರು ವಿಕೆಟ್‌ಗಳ ಸೋಲನ್ನು ಕಂಡಿತು.

ಆರ್‌ಸಿಬಿ ತಂಡ ಇನ್ನೂ ಪಂದ್ಯಾವಳಿಯಲ್ಲಿ ತಮ್ಮ ಮೊದಲ ಗೆಲುವನ್ನು ಪಡೆದಿಲ್ಲ. ಆದರೆ ಯುಪಿ ವಾರಿಯರ್ಸ್ ತಂಡ ಆಡಿದ ನಾಲ್ಕು ಪಂದ್ಯಗಳಲ್ಲಿ ಎರಡು ಗೆಲುವು, ಎರಡು ಸೋಲು ಕಂಡಿದೆ.

WPL 2023: Royal Challengers Bangalore vs UP Warriorz Toss Report, Playing 11 And Live Score


ಈ ಮೊದಲು ಎರಡೂ ತಂಡಗಳು ಪರಸ್ಪರ ಮುಖಾಮುಖಿಯಾಗಿದ್ದಾಗ, ಯುಪಿ ವಾರಿಯರ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 10 ವಿಕೆಟ್‌ಗಳ ಅಂತರದಿಂದ ಸೋಲಿಸಿತ್ತು. ಇದೀಗ ಕಳೆದ ಪಂದ್ಯದ ಸೋಲಿಗೆ ಪ್ರತೀಕಾರ ತೀರಿಸಿಕೊಳ್ಳುವ ತವಕದಲ್ಲಿ ಸ್ಮೃತಿ ಮಂಧಾನ ಬಳಗವಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಯುಪಿ ವಾರಿಯರ್ಸ್ ಆಡುವ 11ರ ಬಳಗ
ಆರ್‌ಸಿಬಿ ಮಹಿಳಾ ತಂಡ: ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ದಿಶಾ ಕಸತ್, ಎಲ್ಲಿಸ್ ಪೆರ್ರಿ, ರಿಚಾ ಘೋಷ್ (ವಿಕೆಟ್ ಕೀಪರ್), ಹೀದರ್ ನೈಟ್, ಶ್ರೇಯಾಂಕ ಪಾಟೀಲ್, ಆಶಾ ಶೋಬನಾ, ಕನಿಕಾ ಅಹುಜಾ, ಮೇಗನ್ ಶುಟ್, ರೇಣುಕಾ ಠಾಕೂರ್ ಸಿಂಗ್.

ಯುಪಿ ವಾರಿಯರ್ಸ್ ತಂಡ: ಅಲಿಸ್ಸಾ ಹೀಲಿ (ನಾಯಕಿ/ ವಿಕೆಟ್ ಕೀಪರ್), ದೇವಿಕಾ ವೈದ್ಯ, ಕಿರಣ್ ನವಗಿರೆ, ಗ್ರೇಸ್ ಹ್ಯಾರಿಸ್, ತಹ್ಲಿಯಾ ಮೆಕ್‌ಗ್ರಾತ್, ಸಿಮ್ರಾನ್ ಶೈಖ್, ಸೋಫಿಯಾ ಎಕ್ಲೆಸ್ಟೋನ್, ದೀಪ್ತಿ ಶರ್ಮಾ, ಶ್ವೇತಾ ಸೆಹ್ರಾವತ್, ಅಂಜಲಿ ಸರ್ವಾಣಿ, ರಾಜೇಶ್ವರಿ ಗಾಯಕ್ವಾಡ್.

Story first published: Wednesday, March 15, 2023, 19:07 [IST]
Other articles published on Mar 15, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+