GG Vs DC: ಅಬ್ಬರಿಸಿದ ಶಫಾಲಿ ವರ್ಮಾ: ಗುಜರಾತ್ ಜೈಂಟ್ಸ್ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದ ಡೆಲ್ಲಿ ಕ್ಯಾಪಿಟಲ್ಸ್

ಶಫಾಲಿ ವರ್ಮಾ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗುಜರಾತ್ ಜೈಂಟ್ಸ್ ವಿರುದ್ಧ 10 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ. 106 ರನ್‌ಗಳ ಗುರಿಯನ್ನು ಬೆನ್ನತ್ತಿದ ಡೆಲ್ಲಿ 7.1 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 107 ರನ್ ಗಳಿಸಿತು.
ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಭಾರತ ಅಂಡರ್ 19 ಮಹಿಳಾ ತಂಡದ ನಾಯಕಿ ಶಫಾಲಿ ವರ್ಮಾ ಅಕ್ಷರಶಃ ಅಬ್ಬರಿಸಿದರು. ಕೇವಲ 18 ಎಸೆತಗಳಲ್ಲಿ ತಮ್ಮ ಅರ್ಧಶತಕವನ್ನು ಪೂರೈಸುವ ಮೂಲಕ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಎರಡನೇ ಅತಿ ವೇಗದ ಅರ್ಧಶತಕ ಗಳಿಸಿದ ಬ್ಯಾಟರ್ ಎನಿಸಿಕೊಂಡರು.
ಶಫಾಲಿ ವರ್ಮಾ ಕೇವಲ 28 ಎಸೆತಗಳಲ್ಲಿ 10 ಬೌಂಡರಿ 5 ಭರ್ಜರಿ ಸಿಕ್ಸರ್ ಸಹಿತ 271.43 ಸ್ಟ್ರೈಕ್‌ರೇಟ್‌ನಲ್ಲಿ ಅಜೇಯ 76 ರನ್ ಗಳಿಸಿದರು. ನಾಯಕಿ ಮೆಗ್ ಲ್ಯಾನಿಂಗ್ 15 ಎಸೆತಗಳಲ್ಲಿ 3 ಬೌಂಡರಿ ಸಹಿತ 21 ರನ್ ಗಳಿಸಿದರು. ಅಂತಿಮವಾಗಿ ಕೇವಲ 7.1 ಓವರ್ ಗಳಲ್ಲಿ 107 ರನ್ ಗಳಿಸಿದ ಡೆಲ್ಲಿ ಕ್ಯಾಪಿಟಲ್ಸ್ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು.

ಮಾರಿಜಾನ್ನೆ ಕಪ್ ಬೌಲಿಂಗ್ ಮೋಡಿ
ಇದಕ್ಕೂ ಮುನ್ನ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಗುಜರಾತ್ ಜೈಂಟ್ಸ್ ತಂಡಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಆಲ್‌ರೌಂಡರ್ ಮಾರಿಜಾನ್ನೆ ಕಪ್ ಮಾರಕವಾದರು. ಮಾರಿಜಾನ್ನೆ ಕಪ್ ಮಾರಕ ಬೌಲಿಂಗ್ ದಾಳಿಗೆ ನಲುಗಿದ ಗುಜರಾತ್ ಜೈಂಟ್ಸ್ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ ಕೇವಲ 105 ರನ್‌ಗಳನ್ನು ಗಳಿಸಿತು.
33 ರನ್ ಗಳಾಗುಷ್ಟರಲ್ಲಿ 6 ವಿಕೆಟ್ ಕಳೆದುಕೊಂಡಿದ್ದ ಗುಜರಾತ್ ಜೈಂಟ್ಸ್ ಕಡಿಮೆ ಮೊತ್ತಕ್ಕೆ ಕುಸಿಯುವ ಭೀತಿ ಅನುಭವಿಸಿತ್ತು. ಆದರೆ, ಜಾರ್ಜಿಯಾ ವಾರೆಹಾಮ್ 22 ರನ್ ಗಳಿಸಿದರೆ, ಕಿಮ್ ಗಾರ್ತ್ 32 ರನ್ ಗಳಿಸುವ ಮೂಲಕ ಗುಜರಾತ್ ಜೈಂಟ್ಸ್ 100 ರನ್‌ಗಳ ಗಡಿ ದಾಟಿತು.
ಮಾರಿಜಾನ್ನೆ ಕಪ್ 4 ಓವರ್ ಗಳಲ್ಲಿ ಕೇವಲ 15 ರನ್ ನೀಡಿ 5 ವಿಕೆಟ್ ಪಡೆದು ಮಿಂಚಿದರು. ಶಿಖಾ ಪಾಂಡೆ ಕೂಡ 4 ಓವರ್ ಗಳಲ್ಲಿ 26 ರನ್ ನೀಡಿ 3 ವಿಕೆಟ್ ಪಡೆದರು, ರಾಧಾ ಯಾದವ್ 4 ಓವರ್ ಗಳಲ್ಲಿ 19 ರನ್ ನೀಡಿ 1 ವಿಕೆಟ್ ಪಡೆದರು.

ಉಭಯ ತಂಡಗಳ ಆಡುವ ಬಳಗ
ಗುಜರಾತ್ ಜೈಂಟ್ಸ್ : ಸಬ್ಬಿನೇನಿ ಮೇಘನಾ, ಲಾರಾ ವೊಲ್ವಾರ್ಡ್, ಹರ್ಲೀನ್ ಡಿಯೋಲ್, ಆಶ್ಲೀಗ್ ಗಾರ್ಡ್ನರ್, ಜಾರ್ಜಿಯಾ ವೇರ್ಹ್ಯಾಮ್, ಸುಷ್ಮಾ ವರ್ಮಾ(ವಿಕೆಟ್ ಕೀಪರ್), ದಯಾಲನ್ ಹೇಮಲತಾ, ಸ್ನೇಹ ರಾಣಾ(ನಾಯಕಿ), ಕಿಮ್ ಗಾರ್ತ್, ಮಾನ್ಸಿ ಜೋಶಿ, ತನುಜಾ ಕನ್ವರ್
ಡೆಲ್ಲಿ ಕ್ಯಾಪಿಟಲ್ಸ್ : ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಲಾರಾ ಹ್ಯಾರಿಸ್, ಜೆಮಿಮಾ ರಾಡ್ರಿಗಸ್, ಮರಿಜಾನ್ನೆ ಕಪ್, ಜೆಸ್ ಜೊನಾಸೆನ್, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಮಿನ್ನು ಮಣಿ, ರಾಧಾ ಯಾದವ್, ಶಿಖಾ ಪಾಂಡೆ, ತಾರಾ ನಾರ್ರಿಸ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications