For Quick Alerts
ALLOW NOTIFICATIONS  
For Daily Alerts
 

WPL 2023: ಮಿಂಚಿದ ಆರ್‌ಸಿಬಿ ಬೌಲಿಂಗ್ ಪಡೆ: 135 ರನ್‌ಗಳಿಗೆ ಯುಪಿ ವಾರಿಯರ್ಸ್ ಆಲೌಟ್

WPL 2023: UP Warriorz Allout For 135 Runs As Ellys Perry, Sophie Devine, Asha Shobana Shines

ಆರ್‌ಸಿಬಿ ತಂಡದ ಬೌಲಿಂಗ್ ಪಡೆ ಮಿಂಚಿನ ದಾಳಿಗೆ ಯುಪಿ ವಾರಿಯರ್ಸ್ ತಂಡ ನಲುಗಿದೆ. ಎಲ್ಲಿಸ್ ಪೆರ್ರಿ, ಸೋಫಿ ಡಿವೈನ್, ಆಶಾ ಶೋಬನಾ ಅತ್ಯುತ್ತಮ ಬೌಲಿಂಗ್ ಸಹಾಯದಿಂದ ಯುಪಿ ವಾರಿಯರ್ಸ್ 19.3 ಓವರ್ ಗಳಲ್ಲಿ 135 ರನ್‌ಗಳಿಗೆ ಆಲೌಟ್ ಆಗಿದೆ.

ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ಸ್ಮೃತಿ ಮಂದಾನ ನಿರ್ಧಾರವನ್ನು ಮೊದಲನೇ ಓವರ್ ನಲ್ಲೇ ಸರಿ ಇದೆ ಎನ್ನುವಂತೆ ಬೌಲಿಂಗ್ ಮಾಡಿದ್ದು ಸೋಫಿ ಡಿವೈನ್. ಇನ್ನಿಂಗ್ಸ್‌ನ ಎರಡನೇ ಎಸೆತದಲ್ಲೇ ಡಿವೈನ್ ದೇವಿಕಾ ವೈದ್ಯ ಅವರ ವಿಕೆಟ್ ಪಡೆದು ಮಿಂಚಿದರು.

2.2ನೇ ಓವರ್ ನಲ್ಲಿ ಯುಪಿ ವಾರಿಯರ್ಸ್ ತಂಡದ ನಾಯಕಿ ಅಲಿಸ್ಸಾ ಹೀಲಿ ವಿಕೆಟ್ ಪಡೆದ ಸೋಫಿ ಡಿವೈನ್ ಯುಪಿ ವಾರಿಯರ್ಸ್‌ಗೆ ಆರಂಭದಲ್ಲೇ ಆಘಾತ ನೀಡಿದರು. 31 ರನ್‌ಗಳಾಗುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡ ಯುಪಿ ವಾರಿಯರ್ಸ್ ಕಡಿಮೆ ಮೊತ್ತಕ್ಕೆ ಆಲೌಟ್ ಆಗುವ ಭೀತಿ ಎದುರಿಸಿತ್ತು.

ಆದರೆ ಗ್ರೇಸ್ ಹ್ಯಾರಿಸ್ ಮತ್ತು ದೀಪ್ತಿ ಶರ್ಮಾ ಅತ್ಯುತ್ತಮ ಬ್ಯಾಟಿಂಗ್ ಮಾಡುವ ಮೂಲಕ ತಂಡವನ್ನು ಕುಸಿತದಿಂದ ಪಾರು ಮಾಡಿದರು. ಗ್ರೇಸ್ ಹ್ಯಾರಿಸ್ 32 ಎಸೆತಗಳಲ್ಲಿ 5 ಬೌಂಡರಿ 2 ಸಿಕ್ಸರ್ ಸಹಿತ 46 ರನ್ ಗಳಿಸಿದರು. ದೀಪ್ತಿ ಶರ್ಮಾ 19 ಎಸೆತಗಳಲ್ಲಿ 22 ರನ್ ಗಳಿಸಿ ಮಿಂಚಿದರು.

ಒಂದು ಹಂತದಲ್ಲಿ ಇವರಿಬ್ಬರೂ ದೊಡ್ಡ ಮೊತ್ತವನ್ನು ಗಳಿಸುವಂತೆ ಬ್ಯಾಟಿಂಗ್ ಮಾಡುತ್ತಿದ್ದಾಗ ದಾಳಿಗೆ ಇಳಿದ ಎಲ್ಲಿಸ್ ಪೆರ್ರಿ ಒಂದೇ ಓವರ್ ನಲ್ಲಿ ಇವರಿಬ್ಬರ ವಿಕೆಟ್ ಪಡೆದು ಮತ್ತೆ ಆಘಾತ ನೀಡಿದರು. ಅಂತಿಮವಾಗಿ ಯುಪಿ ವಾರಿಯರ್ಸ್ 135 ರನ್‌ಗಳಿಗೆ ಆಲೌಟ್ ಆಯಿತು.

WPL 2023: UP Warriorz Allout For 135 Runs As Ellys Perry, Sophie Devine, Asha Shobana Shines

ಮಿಂಚಿದ ಆರ್‌ಸಿಬಿ ಬೌಲಿಂಗ್

ಆರಂಭದಲ್ಲಿ ಸೋಫಿ ಡಿವೈನ್ ಎರಡು ವಿಕೆಟ್ ಪಡೆದು ಮಿಂಚಿದರೆ, ಆಶಾ ಶೋಭನಾ ಕೂಡ ಎರಡು ವಿಕೆಟ್ ಪಡೆಯುವ ಮೂಲಕ ಯುಪಿ ವಾರಿಯರ್ಸ್ ಮೇಲೆ ಒತ್ತಡ ಹೇರಿದರು. ಅತ್ಯುತ್ತಮವಾಗಿ ಬೌಲಿಂಗ್ ಮಾಡಿದ ಎಲ್ಲಿಸ್ ಪೆರ್ರಿ ಮೂರು ವಿಕೆಟ್ ಪಡೆದು ಮಿಂಚಿದರು. ಮೇಗನ್ ಶೂಟ್ ಮತ್ತು ಶ್ರೇಯಾಂಕ ಪಾಟೀಲ್ ತಲಾ ಒಂದು ವಿಕೆಟ್ ಪಡೆದು ಮಿಂಚಿದರು.

ಇಂದಿನ ಪಂದ್ಯದಲ್ಲಿ ಗೆದ್ದರೆ ಮಾತ್ರ ಆರ್ ಸಿಬಿ ಟೂರ್ನಿಯಲ್ಲಿ ಪ್ಲೇ ಆಫ್ ಆಸೆಯನ್ನು ಜೀವಂತವಾಗಿಟ್ಟುಕೊಳ್ಳಬಹುದು. ಒಂದು ವೇಳೆ ಆರ್ ಸಿಬಿ ಸೋತರೆ ಪ್ಲೇ ಆಫ್‌ ರೇಸ್‌ನಿಂದ ಹೊರಬೀಳಲಿದೆ.

WPL 2023: UP Warriorz Allout For 135 Runs As Ellys Perry, Sophie Devine, Asha Shobana Shines

ಉಭಯ ತಂಡಗಳ ಆಡುವ ಬಳಗ

ಯುಪಿ ವಾರಿಯರ್ಸ್: ಅಲಿಸ್ಸಾ ಹೀಲಿ (ನಾಯಕಿ), ದೇವಿಕಾ ವೈದ್ಯ, ಕಿರಣ್ ನವಗಿರೆ, ಗ್ರೇಸ್ ಹ್ಯಾರಿಸ್, ತಹ್ಲಿಯಾ ಮೆಗ್ರಾತ್, ಸಿಮ್ರಾನ್ ಶೇಖ್, ಸೋಫಿ ಎಕ್ಲೆಸ್ಟೋನ್, ದೀಪ್ತಿ ಶರ್ಮಾ, ಶ್ವೇತಾ ಸೆಹ್ರಾವತ್, ಅಂಜಲಿ ಸರ್ವಾಣಿ, ರಾಜೇಶ್ವರಿ ಗಾಯಕ್ವಾಡ್.

ಆರ್‌ಸಿಬಿ: ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಎಲ್ಲಿಸ್ ಪೆರಿ, ಹೀದರ್ ನೈಟ್, ರಿಚಾ ಘೋಷ್ (ವಿಕೆಟ್ ಕೀಪರ್), ಶ್ರೇಯಾಂಕ ಪಾಟೀಲ್, ಕನಿಕಾ ಅಹುಜಾ, ದಿಶಾ ಕಸತ್, ಮೇಗನ್ ಶುಟ್, ಆಶಾ ಶೋಬನಾ, ರೇಣುಕಾ ಠಾಕೂರ್ ಸಿಂಗ್.

Story first published: Wednesday, March 15, 2023, 21:31 [IST]
Other articles published on Mar 15, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+