WPL 2023: ಮೊದಲ ಬಾರಿಗೆ ಆಲೌಟ್ ಆದ ಮುಂಬೈ ಇಂಡಿಯನ್ಸ್: ಯುಪಿ ವಾರಿಯರ್ಸ್‌ಗೆ ಸುಲಭ ಸವಾಲು

ಮಹಿಳಾ ಪ್ರೀಮಿಯರ್ ಲೀಗ್ 2023ರಲ್ಲಿ ಮೊದಲ ಬಾರಿಗೆ ಆಲೌಟ್ ಆಗಿದೆ. ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡವನ್ನು 127 ರನ್‌ಗಳಿಗೆ ಆಲೌಟ್ ಮಾಡುವಲ್ಲಿ ಯುಪಿ ವಾರಿಯರ್ಸ್ ಯಶಸ್ವಿಯಾಗಿದೆ. ಸೋಫಿ ಎಕಲ್‌ಸ್ಟೋನ್ ಮೂರು ವಿಕೆಟ್ ಪಡೆದು ಮಿಂಚಿದರು.
ಮುಂಬೈನ ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಯುಪಿ ವಾರಿಯರ್ಸ್ ಸ್ಪಿನ್ನರ್ ಗಳು ಮಿಂಚಿದರು. ನಿಧಾನವಾಗಿ ಆಡಿದ ಮುಂಬೈ ಇಂಡಿಯನ್ಸ್ ಮೊದಲ ವಿಕೆಟ್ ಪತನದ ನಂತರ ಸತತವಾಗಿ ವಿಕೆಟ್‌ಗಳನ್ನು ಕಳೆದುಕೊಂಡಿತು.
ಹೇಲಿ ಮ್ಯಾಥ್ಯೂಸ್ 30 ಎಸೆತಗಳಲ್ಲಿ 1 ಬೌಂಡರಿ, 3 ಸಿಕ್ಸರ್ ಸಹಿತ 35 ರನ್ ಗಳಿಸಿದರೆ, ಯಾಸ್ತಿಕಾ ಭಾಟಿಯಾ 7, ನಾಟ್ ಸಿವರ್ ಬ್ರಂಟ್ 5 ರನ್ ಗಳಿಗೆ ಔಟಾಗುವ ಮೂಲಕ ನಿರಾಸೆ ಮೂಡಿಸಿದರು. ನಾಯಕಿ ಹರ್ಮನ್‌ಪ್ರೀತ್ ಕೌರ್ 25 ರನ್ ಗಳಿಸಿ ಔಟಾದರು.
ಅಮೇಲಿಯಾ ಕೆರ್ ಕೇವಲ 3 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಅಮನ್‌ಜೋತ್ ಕೌರ್ 5 ರನ್, ಧಾರಾ ಗುಜ್ಜರ್ 3, ಸೈಕಾ ಇಶಾಕ್ ಶೂನ್ಯಕ್ಕೆ ಔಟಾದರು. ಇಸ್ಸಿ ವಾಂಗ್ 19 ಎಸೆತಗಳಲ್ಲಿ 4 ಬೌಂಡರಿ 1 ಸಿಕ್ಸರ್ ಸಹಿತ 32 ರನ್ ಗಳಿಸಿ ತಂಡ 120 ರನ್‌ಗಳ ಗಡಿ ದಾಟಲು ಸಹಾಯಕವಾದರು.

ಯುಪಿ ವಾರಿಯರ್ಸ್ ಉತ್ತಮ ಬೌಲಿಂಗ್
ಸೋಫಿ ಎಕ್ಲೆಸ್ಟೋನ್ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದರು. 4 ಓವರ್ ಗಳಲ್ಲಿ ಕೇವಲ 15 ರನ್ ನೀಡಿ ಪ್ರಮುಖ 3 ವಿಕೆಟ್ ಪಡೆದು ಮಿಂಚಿದರು. ದೀಪ್ತಿ ಶರ್ಮಾ 4 ಓವರ್ ಗಳಲ್ಲಿ 35 ರನ್ ನೀಡಿದರೂ 2 ವಿಕೆಟ್ ಪಡೆದುಕೊಂಡರು. ರಾಜೇಶ್ವರಿ ಗಾಯಕ್ವಾಡ್ 4 ಓವರ್ ಗಳಲ್ಲಿ ಕೇವಲ 16 ನೀಡಿ 2 ವಿಕೆಟ್ ಪಡೆದು ಮಿಂಚಿದರು.
128 ರನ್‌ಗಳ ಗುರಿಯನ್ನು ಸುಲಭವಾಗಿ ಬೆನ್ನತ್ತುವ ಉತ್ಸಾಹದಲ್ಲಿದೆ ಯುಪಿ ವಾರಿಯರ್ಸ್. ಈ ಪಂದ್ಯದಲ್ಲಿ ಯುಪಿ ವಾರಿಯರ್ಸ್ ಗೆಲುವು ಸಾಧಿಸಿದರೆ ಪ್ಲೇ ಆಫ್ ದಾರಿ ಸುಗಮವಾಗಲಿದೆ. ಒಂದು ವೇಳೆ ಸೋತರೆ ಮುಂದಿನ ಎರಡೂ ಪಂದ್ಯಗಳಲ್ಲಿ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಲಿದೆ.

ಉಭಯ ತಂಡಗಳ ಆಡುವ ಬಳಗ
ಮುಂಬೈ ಇಂಡಿಯನ್ಸ್: ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ನ್ಯಾಟ್ ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಅಮೆಲಿಯಾ ಕೆರ್, ಇಸ್ಸಿ ವಾಂಗ್, ಹುಮೈರಾ ಕಾಜಿ, ಧಾರಾ ಗುಜ್ಜರ್, ಅಮಂಜೋತ್ ಕೌರ್, ಜಿಂಟಿಮಣಿ ಕಲಿತಾ, ಸೈಕಾ ಇಶಾಕ್.
ಯುಪಿ ವಾರಿಯರ್ಜ್: ಅಲಿಸ್ಸಾ ಹೀಲಿ(ನಾಯಕಿ), ದೇವಿಕಾ ವೈದ್ಯ, ಕಿರಣ್ ನವಗಿರೆ, ತಹ್ಲಿಯಾ ಮೆಕ್‌ಗ್ರಾತ್, ಗ್ರೇಸ್ ಹ್ಯಾರಿಸ್, ದೀಪ್ತಿ ಶರ್ಮಾ, ಪಾರ್ಶವಿ ಚೋಪ್ರಾ, ಸಿಮ್ರಾನ್ ಶೇಖ್, ಸೋಫಿ ಎಕ್ಲೆಸ್ಟೋನ್, ಅಂಜಲಿ ಸರ್ವಾಣಿ, ರಾಜೇಶ್ವರಿ ಗಾಯಕ್ವಾಡ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications