Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WPL 2023: ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಯುಪಿ ವಾರಿಯರ್ಸ್: ಪ್ಲೇಯಿಂಗ್ XI, ಪಿಚ್ ವರದಿ

WPL 2023: UP Warriorz Have Win The Toss Opted Bat First Against Mumbai Indians

ಮಹಿಳಾ ಪ್ರೀಮಿಯರ್ ಲೀಗ್ 2023ರ ಆವೃತ್ತಿಯ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದಿರುವ ಯುಪಿ ವಾರಿಯರ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಮುಂಬೈನ ಬ್ರಬೌರ್ನೆ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದೆ. ಇದುವರೆಗೂ ಆಡಿರುವ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿರುವ ಬಲಿಷ್ಠ ಮುಂಬೈ ಇಂಡಿಯನ್ಸ್ ಸದ್ಯ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ಆಡಿರುವ ಮೂರು ಪಂದ್ಯಗಳಲ್ಲಿ 2 ಪಂದ್ಯಗಳನ್ನು ಗೆದ್ದಿರುವ ಯುಪಿ ವಾರಿಯರ್ಸ್ ಇಂದಿನ ಪಂದ್ಯವನ್ನು ಗೆಲ್ಲುವ ವಿಶ್ವಾಸದಲ್ಲಿದೆ. ಕಳೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 10 ವಿಕೆಟ್‌ಗಳ ಜಯ ಸಾಧಿಸಿರುವ ಯುಪಿ ವಾರಿಯರ್ಸ್ ಜಯದ ಓಟವನ್ನು ಮುಂದುವರೆಸುವ ವಿಶ್ವಾಸದಲ್ಲಿದೆ.

ನಾಯಕಿ ಅಲಿಸ್ಸಾ ಹೀಲಿ ಅತ್ಯುತ್ತಮ ಫಾರ್ಮ್‌ನಲ್ಲಿದ್ದು, ಕಳೆದ ಪಂದ್ಯದಲ್ಲಿ ಕೇವಲ 4 ರನ್‌ಗಳಿಂದ ಶತಕ ವಂಚಿತರಾಗಿದ್ದರು. ಬೌಲಿಂಗ್ ವಿಭಾಗ ಕೂಡ ಅತ್ಯುತ್ತಮವಾಗಿದ್ದು, ಆಲ್‌ರೌಂಡರ್ ಪ್ರದರ್ಶನ ನೀಡಿದರೆ ಮಾತ್ರ ಯುಪಿವಾರಿಯರ್ಸ್ ಬಲಿಷ್ಠ ಮುಂಬೈ ಇಂಡಿಯನ್ಸ್ ವಿರುದ್ಧ ಜಯ ಸಾಧಿಸಬಹುದಾಗಿದೆ.

ಮುಂಬೈ ಇಂಡಿಯನ್ಸ್ ಕೂಡ ತಾವು ಆಡಿದ ಕೊನೆ ಪಂದ್ಯದಲ್ಲಿ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದ್ದು, ಅಜೇಯ ಓಟವನ್ನು ಮುಂದುವರೆಸುವ ವಿಶ್ವಾಸದಲ್ಲಿದೆ. ಮೊದಲ ಪಂದ್ಯದಿಂದಲೂ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಮುಂಬೈ ತಂಡ ಗೆಲ್ಲುವ ನೆಚ್ಚಿನ ತಂಡವಾಗಿದೆ.

WPL 2023: UP Warriorz Have Win The Toss Opted Bat First Against Mumbai Indians

ಮತ್ತೊಂದು ಹೈಸ್ಕೋರಿಂಗ್ ಪಂದ್ಯ ಸಾಧ್ಯತೆ

ಬ್ರಬೌರ್ನೆ ಕ್ರಿಕೆಟ್‌ ಸ್ಟೇಡಿಯಂನಲ್ಲಿ ಮತ್ತೊಂದು ಹೈಸ್ಕೋರಿಂಗ್ ಪಂದ್ಯವನ್ನು ನಿರೀಕ್ಷೆ ಮಾಡಲಾಗಿದೆ. ಎರಡೂ ತಂಡಗಳು ಈ ಅಂಗಳದಲ್ಲಿ ಆರ್ ಸಿಬಿ ತಂಡದ ವಿರುದ್ಧ ಆಡಿದ್ದು ಜಯಗಳಿಸಿವೆ. ಮೊದಲು ಬ್ಯಾಟಿಂಗ್ ಮಾಡುವ ತಂಡ 180-200 ರನ್ ಗಳಿಸಿದರೆ, ಗೆಲ್ಲುವ ಸಾಧ್ಯತೆ ಇದೆ.

ಮುಂಬೈ ಇಂಡಿಯನ್ಸ್ ಕಳೆದ ಪಂದ್ಯದಲ್ಲಿ ಆಡಿದ್ದ ತಂಡವನ್ನೇ ಈ ಪಂದ್ಯದಲ್ಲಿ ಕಣಕ್ಕಿಳಿಸಿದೆ. ಯುಪಿ ವಾರಿಯರ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಂಡಿದ್ದು, ಹ್ಯಾರಿಸ್ ಬದಲಾಗಿ ಶಬ್ನಿಮ್ ಇಸ್ಮಾಯಿಲ್ ಸ್ಥಾನ ಪಡೆದುಕೊಂಡಿದ್ದಾರೆ.

WPL 2023: UP Warriorz Have Win The Toss Opted Bat First Against Mumbai Indians

ಉಭಯ ತಂಡಗಳ ಆಡುವ ಬಳಗ

ಮುಂಬೈ ಇಂಡಿಯನ್ಸ್: ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಹೇಲಿ ಮ್ಯಾಥ್ಯೂಸ್, ನ್ಯಾಟ್ ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಧಾರಾ ಗುಜ್ಜರ್, ಅಮೆಲಿಯಾ ಕೆರ್, ಇಸ್ಸಿ ವಾಂಗ್, ಅಮಾನ್ಜೋತ್ ಕೌರ್, ಹುಮೈರಾ ಕಾಜಿ, ಜಿಂಟಿಮಣಿ ಕಲಿತಾ, ಸೈಕಾ ಇಶಾಕ್.

ಯುಪಿ ವಾರಿಯರ್ಸ್ : ದೇವಿಕಾ ವೈದ್ಯ, ಅಲಿಸ್ಸಾ ಹೀಲಿ (ನಾಯಕಿ), ಶ್ವೇತಾ ಸೆಹ್ರಾವತ್, ಕಿರಣ್ ನವಗಿರೆ, ತಹ್ಲಿಯಾ ಮೆಗ್ರಾತ್, ದೀಪ್ತಿ ಶರ್ಮಾ, ಸಿಮ್ರಾನ್ ಶೇಖ್, ಸೋಫಿ ಎಕ್ಲೆಸ್ಟೋನ್, ಶಬ್ನಿಮ್ ಇಸ್ಮಾಯಿಲ್, ಅಂಜಲಿ ಸರ್ವಾಣಿ, ರಾಜೇಶ್ವರಿ ಗಾಯಕ್ವಾಡ್.

Story first published: Sunday, March 12, 2023, 19:21 [IST]
Other articles published on Mar 12, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+