Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WPL 2023: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಯುಪಿ ವಾರಿಯರ್ಸ್ : ಗೆದ್ದರಷ್ಟೇ ಪ್ಲೇ ಆಫ್ ಕನಸು ಜೀವಂತ

WPL 2023: UP Warriorz Have Won The Toss And Opted To Bowl Against Mumbai Indians

ಮಹಿಳಾ ಪ್ರೀಮಿಯರ್ ಲೀಗ್‌ 2023ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದಿರುವ ಯುಪಿ ವಾರಿಯರ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಪ್ಲೇ ಆಫ್ ಆಸೆ ಜೀವಂತವಾಗಿಟ್ಟುಕೊಳ್ಳಬೇಕಾದರೆ ಯುಪಿ ವಾರಿಯರ್ಸ್ ಇಂದಿನ ಪಂದ್ಯವನ್ನು ಗೆಲ್ಲಲೇಬೇಕಾಗಿದೆ.

ಮುಂಬೈನ ಡಿವೈ ಪಾಟೀಲ್ ಸ್ಪೋರ್ಟ್ಸ್‌ ಅಕಾಡೆಮಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ. ಆಡಿರುವ 5 ಪಂದ್ಯಗಳನ್ನು ಗೆಲ್ಲುವ ಮೂಲಕ ಮುಂಬೈ ಇಂಡಿಯನ್ಸ್ ಈಗಾಗಲೇ ಪ್ಲೇ ಆಫ್‌ ಪ್ರವೇಶವನ್ನು ಖಚಿತಪಡಿಸಿಕೊಂಡಿದೆ. ಇಂದಿನ ಪಂದ್ಯವನ್ನು ಗೆದ್ದರೆ ಅವರು ನೇರವಾಗಿ ಫೈನಲ್‌ಗೆ ಪ್ರವೇಶ ಪಡೆಯುವ ಸಾಧ್ಯತೆ ಅಧಿಕವಾಗುತ್ತದೆ. ಯುಪಿ ವಾರಿಯರ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 8 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿತ್ತು.

ಇನ್ನು ಆಡಿರುವ 5 ಪಂದ್ಯಗಳಲ್ಲಿ 2 ಪಂದ್ಯಗಳಲ್ಲಿ ಮಾತ್ರ ಗೆದ್ದಿರುವ ಯುಪಿ ವಾರಿಯರ್ಸ್ ಇಂದಿನ ಪಂದ್ಯದಲ್ಲಿ ಗೆದ್ದರೆ ಮಾತ್ರ ಪ್ಲೇ ಆಫ್ ಕನಸು ಜೀವಂತವಾಗಿರಲಿದೆ. ಇದುವರೆಗೂ ಸೋಲನ್ನೇ ಕಾಣದ ಮುಂಬೈ ಇಂಡಿಯನ್ಸ್ ವಿರುದ್ಧ ಗೆಲ್ಲುವುದು ಸುಲಭವಲ್ಲ, ಅತ್ಯುತ್ತಮ ಪ್ರದರ್ಶನ ನೀಡಿದರೆ ಮಾತ್ರ ಗೆಲ್ಲುವ ಸಾಧ್ಯತೆ ಇದೆ.

ಎರಡೂ ತಂಡಗಳಲ್ಲಿ ಬಲಿಷ್ಠ ಬ್ಯಾಟಿಂಗ್ ಮತ್ತ ಆಲ್‌ರೌಂಡರ್ ವಿಭಾಗ ಇದೆ. ಮುಂಬೈ ಇಂಡಿಯನ್ಸ್ ತಂಡದ ಬ್ಯಾಟಿಂಗ್ ಅತ್ಯುತ್ತಮವಾಗಿದೆ. ಹೇಲಿ ಮ್ಯಾಥ್ಯೂಸ್, ನ್ಯಾಟ್ ಸಿವರ್ ಬ್ರಂಟ್, ಹರ್ಮನ್‌ಪ್ರೀತ್ ಕೌರ್ ತಂಡದ ಪ್ರಮುಖ ಬ್ಯಾಟಿಂಗ್ ಶಕ್ತಿಯಾಗಿದ್ದಾರೆ.

ಯುಪಿ ವಾರಿಯರ್ಸ್ ತಂಡದಲ್ಲಿ ಸ್ಪಿನ್ ವಿಭಾಗ ಸಾಕಷ್ಟು ಬಲವಾಗಿದೆ. ದೀಪ್ತಿ ಶರ್ಮಾ, ರಾಜೇಶ್ವರಿ ಗಾಯಕ್ವಾಡ್, ಗ್ರೇಸ್ ಹ್ಯಾರಿಸ್ ವಿಕೆಟ್ ಪಡೆದರೆ ಹರ್ಮನ್‌ಪ್ರೀತ್ ಕೌರ್ ಪಡೆಯನ್ನು ಕಟ್ಟಿಹಾಕಬಹುದಾಗಿದೆ.

WPL 2023: UP Warriorz Have Won The Toss And Opted To Bowl Against Mumbai Indians

ಪಿಚ್ ವರದಿ, ಪ್ಲೇಯಿಂಗ್ ಇಲೆವೆನ್

ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಬೌಂಡರಿ ಚಿಕ್ಕದಾಗಿರುವುದರಿಂದ ಹೈಸ್ಕೋರಿಂಗ್ ಪಂದ್ಯವನ್ನು ನಿರೀಕ್ಷೆ ಮಾಡಬಹುದಾಗಿದೆ. ಮೊದಲು ಬೌಲಿಂಗ್ ಮಾಡುವ ತಂಡಕ್ಕೆ ಬೌಲಿಂಗ್‌ಗೆ ಪಿಚ್‌ ಸಹಾಯ ಮಾಡುವುದರಿಂದ ಯುಪಿ ವಾರಿಯರ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಮುಂಬೈ ಇಂಡಿಯನ್ಸ್ ಕಳೆದ ಪಂದ್ಯದಲ್ಲಿ ಆಡಿದ್ದ ತಂಡವನ್ನೇ ಇಂದಿನ ಪಂದ್ಯದಲ್ಲಿ ಕಣಕ್ಕಿಳಿಸಿದೆ. ಯುಪಿ ವಾರಿಯರ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಿದ್ದು, ಶ್ವೇತಾ ಶೆರವಾತ್ ಬದಲಿಗೆ ಪಾರ್ಶವಿ ಚೋಪ್ರಾ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಮುಂಬೈ ಇಂಡಿಯನ್ಸ್: ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ನ್ಯಾಟ್ ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಅಮೆಲಿಯಾ ಕೆರ್, ಇಸ್ಸಿ ವಾಂಗ್, ಹುಮೈರಾ ಕಾಜಿ, ಧಾರಾ ಗುಜ್ಜರ್, ಅಮಂಜೋತ್ ಕೌರ್, ಜಿಂಟಿಮಣಿ ಕಲಿತಾ, ಸೈಕಾ ಇಶಾಕ್.

ಯುಪಿ ವಾರಿಯರ್ಜ್: ಅಲಿಸ್ಸಾ ಹೀಲಿ(ನಾಯಕಿ), ದೇವಿಕಾ ವೈದ್ಯ, ಕಿರಣ್ ನವಗಿರೆ, ತಹ್ಲಿಯಾ ಮೆಕ್‌ಗ್ರಾತ್, ಗ್ರೇಸ್ ಹ್ಯಾರಿಸ್, ದೀಪ್ತಿ ಶರ್ಮಾ, ಪಾರ್ಶವಿ ಚೋಪ್ರಾ, ಸಿಮ್ರಾನ್ ಶೇಖ್, ಸೋಫಿ ಎಕ್ಲೆಸ್ಟೋನ್, ಅಂಜಲಿ ಸರ್ವಾಣಿ, ರಾಜೇಶ್ವರಿ ಗಾಯಕ್ವಾಡ್.

Story first published: Saturday, March 18, 2023, 15:35 [IST]
Other articles published on Mar 18, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+