WPL 2023: UPW vs GG : ಯುಪಿ ವಾರಿಯರ್ಸ್ vs ಗುಜರಾತ್ ಜೈಂಟ್ಸ್ ಟಾಸ್ ವರದಿ, ಆಡುವ 11ರ ಬಳಗ & ಲೈವ್ ಸ್ಕೋರ್

2023ರ ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್‌ನ 3ನೇ ಪಂದ್ಯದಲ್ಲಿ ಯುಪಿ ವಾರಿಯರ್ಸ್ ತಂಡವು ತಮ್ಮ ಮೊದಲ ಪಂದ್ಯವನ್ನು ಗುಜರಾತ್ ಜೈಂಟ್ಸ್ ಮಹಿಳಾ ತಂಡದ ವಿರುದ್ಧ ಭಾನುವಾರ, ಮಾರ್ಚ್ 5ರಂದು ಮುಂಬೈನ ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ಆಡುತ್ತಿದೆ.
ಟಾಸ್ ಗೆದ್ದ ಗುಜರಾತ್ ಜೈಂಟ್ಸ್ ತಂಡದ ನಾಯಕಿ ಸ್ನೇಹ್ ರಾಣಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಅಲಿಸ್ಸಾ ಹೀಲಿ ನಾಯಕತ್ವದ ಯುಪಿ ವಾರಿಯರ್ಸ್ ತಂಡ ಮೊದಲು ಬೌಲಿಂಗ್ ಮಾಡಲಿದೆ.
ಮಹಿಳಾ ಪ್ರೀಮಿಯರ್ ಲೀಗ್‌ನ ಚೊಚ್ಚಲ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಶನಿವಾರದಂದು ಮುಂಬೈ ಇಂಡಿಯನ್ಸ್ ವಿರುದ್ಧ 143 ರನ್‌ಗಳ ಹೀನಾಯ ಸೋಲು ಅನುಭವಿಸಿದ ಬೆತ್ ಮೂನಿ ನಾಯಕತ್ವದ ಗುಜರಾತ್ ಜೈಂಟ್ಸ್ ತಂಡದ ವಿರುದ್ಧ ಗೆಲ್ಲಲು ಅಲಿಸ್ಸಾ ಹೀಲಿ ನಾಯಕತ್ವದ ಯುಪಿ ವಾರಿಯರ್ಸ್ ಎದುರು ನೋಡುತ್ತಿದೆ.
ಯುಪಿ ವಾರಿಯರ್ಸ್ vs ಗುಜರಾತ್ ಜೈಂಟ್ಸ್ ಆಡುವ 11ರ ಬಳಗ
ಯುಪಿ ವಾರಿಯರ್ಸ್: ಅಲಿಸ್ಸಾ ಹೀಲಿ (ನಾಯಕಿ), ಶ್ವೇತಾ ಸೆಹ್ರಾವತ್, ತಹ್ಲಿಯಾ ಮೆಗ್ರಾತ್, ದೀಪ್ತಿ ಶರ್ಮಾ, ಗ್ರೇಸ್ ಹ್ಯಾರಿಸ್, ಸಿಮ್ರಾನ್ ಶೇಖ್, ಕಿರಣ್ ನವಗಿರೆ, ದೇವಿಕಾ ವೈದ್ಯ, ರಾಜೇಶ್ವರಿ ಗಾಯಕ್ವಾಡ್, ಸೋಫಿ ಎಕ್ಲೆಸ್ಟೋನ್, ಅಂಜಲಿ ಶರ್ವಾಣಿ.
ಗುಜರಾತ್ ಜೈಂಟ್ಸ್: ಸ್ನೇಹ್ ರಾಣಾ (ನಾಯಕಿ), ಸುಷ್ಮಾ ವರ್ಮಾ (ವಿಕೆಟ್ ಕೀಪರ್), ಸಬ್ಬಿನೇನಿ ಮೇಘನಾ, ಸೋಫಿಯಾ ಡಂಕ್ಲಿ, ಹರ್ಲೀನ್ ಡಿಯೋಲ್, ಆಶ್ಲೀಗ್ ಗಾರ್ಡ್ನರ್, ದಯಾಳನ್ ಹೇಮಲತಾ, ಕಿಮ್ ಗಾರ್ತ್, ಅನ್ನಾಬೆಲ್ ಸದರ್ಲ್ಯಾಂಡ್, ಮಾನ್ಸಿ ಜೋಶಿ, ತನುಜಾ ಕನ್ವರ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications