For Quick Alerts
ALLOW NOTIFICATIONS  
For Daily Alerts
 

WPL 2023: ಗುಜರಾತ್ ಜೈಂಟ್ಸ್ ವಿರುದ್ಧ ಗೆದ್ದ ಯುಪಿ ವಾರಿಯರ್ಸ್: ನಾಕೌಟ್ ಸ್ಪರ್ಧೆಯಿಂದ ಆರ್‌ಸಿಬಿ ಔಟ್

WPL 2023: UP Warriorz win against Gujarat Giants by 3 wickets, RCB knocked out of WPL

ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಇಂದು ಗುಜರಾತ್ ಜೈಂಟ್ಸ್ ಹಾಗೂ ಯುಪಿ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಿದ್ದು ಈ ರೋಚಕ ಪಂದ್ಯದಲ್ಲಿ ಯುಪಿ ವಾರಿಯರ್ಸ್ ತಂಡ 3 ವಿಕೆಟ್‌ಗಳ ಅಂತರದ ಗೆಲುವು ಸಾಧಿಸಿದೆ. ಈ ಮೂಲಕ ಪ್ಲೇಆಫ್ ಸುತ್ತಿಗೇರುವ ಸ್ಪರ್ಧೆಯಲ್ಲಿ ಮಹತ್ವದ ಎರಡು ಅಂಕಗಳನ್ನು ಬುಟ್ಟಿಗೆ ಹಾಕಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಇತ್ತ ಗುಜರಾತ್ ಜೈಂಟ್ಸ್ ಹಾಗೂ ಯುಪಿ ವಾರಿಯರ್ಸ್ ತಂಡಗಳ ನಡುವಿನ ಈ ಮುಖಾಮುಖಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಿಗೆ ನಿರ್ಣಾಯಕವಾಗಿತ್ತು. ನಾಕೌಟ್ ಹಂತಕ್ಕೇರುವ ಸ್ಪರ್ಧೆಯಲ್ಲಿ ಆರ್‌ಸಿಬಿ ಉಳಿಯಬೇಕಾದರೆ ಈ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡ ಗೆಲುವು ಸಾಧಿಸಬೇಕಾಗಿತ್ತು. ಆದರೆ ಗುಜರಾತ್ ಸೋಲಿನೊಂದಿಗೆ ಸ್ಮೃತಿ ಮಂಧಾನ ಪಡೆಯ ನಾಕೌಟ್ ಹಂತಕ್ಕೇರುವ ಕನಸು ಸಂಪೂರ್ಣವಾಗಿ ಭಗ್ನಗೊಂಡಿದೆ. ಆರ್‌ಸಿಬಿ ಲೀಗ್ ಹಂತದಿಂದಕ್ಕೆ ತನ್ನ ಹೋರಾಟವನ್ನು ಅಂತ್ಯಗೊಳಿಸಲಿದೆ.

ಈ ಪಂದ್ಯದಲ್ಲಿ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿದ ಗುಜರಾತ್ ಜೈಂಟ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 178 ರನ್‌ಗಳನ್ನು ಗಳಿಸಿತ್ತು. ಜಿಜಿ ತಂಡದ ಪರವಾಗಿ ದಯಾಳನ್ ಹೇಮಲತಾ ಹಾಗೂ ಆಶ್ಲೇ ಗಾರ್ಡ್ನರ್ ಅರ್ಧ ಶತಕ ಗಳಿಸಿ ಅಬ್ಬರಿಸಿದರು. ಹೀಗಾಗಿ ಯುಪಿ ವಾರಿಯರ್ಸ್‌ಗೆ ಕಠಿಣ ಸವಾಲು ಮುಂದಿಟ್ಟಿತು ಗುಜರಾತ್ ಜೈಂಟ್ಸ್.

ಇನ್ನು ಗುಜರಾತ್ ಜೈಂಟ್ಸ್ ನೀಡಿದ 179 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಯುಪಿ ವಾರಿಯರ್ಸ್ ತಂಡ ಉತ್ತಮ ಆರಂಭ ಪಡೆಯಲು ವಿಫಲವಾಗಿತ್ತು. 39 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು ಅಲೀಸಾ ಹಿಲಿ ಪಡೆ. ಆದರೆ ಬಳಿಕ ಜೊತೆಯಾದ ತಹಿಲಾ ಮೆಗ್ರಾಥ್ ಹಾಗೂ ಗ್ರೇಸ್ ಹ್ಯಾರಿಸ್ ಯುಪಿ ವಾರಿಯರ್ಸ್ ಪರವಾಗಿ ಅದ್ಭುತ ಜೊತೆಯಾಟದಲ್ಲಿ ಭಾಗಿಯಾದರು.

ತಹಿಲಾ ಮೆಗ್ರಾಥ್ 38 ಎಸೆತಗಳಲ್ಲಿ 57 ರನ್‌ಗಳನ್ನು ಬಾರಿಸಿ ವಿಕೆಟ್ ಕಳೆದುಕೊಂಡರೆ ಗ್ರೇಸ್ ಹ್ಯಾರಿಸ್ ಭರ್ಜರಿ ಪ್ರದರ್ಶನ ನೀಡುತ್ತಾ ಮುನ್ನುಗ್ಗಿದರು. 19ನೇ ಓವರ್ ತನಕ ಬ್ಯಾಟಿಂಗ್ ನಡೆಸಿದ ಅವರು 41 ಎಸೆತಗಳಲ್ಲಿ 72 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಕೊನೆಯ ಹಂತದಲ್ಲಿ ಯುಪಿ ಕೆಲ ವಿಕೆಟ್‌ಗಳನ್ನು ಕಳೆದುಕೊಂಡರೂ ಅಂತಿಮವಾಗಿ ಒಮದು ಎಸೆತ ಬಾಕಿಯಿರುವಂತೆಯೇ ಯುಪಿ ವಾರಿಯರ್ಸ್ ಗೆಲುವು ಸಾಧಿಸಿದೆ.

ಗುಜರಾತ್ ಜೈಂಟ್ಸ್ ಆಡುವ ಬಳಗ: ಸೋಫಿಯಾ ಡಂಕ್ಲಿ, ಲಾರಾ ವೊಲ್ವಾರ್ಡ್ಟ್, ಆಶ್ಲೀಗ್ ಗಾರ್ಡ್ನರ್, ದಯಾಲನ್ ಹೇಮಲತಾ, ಹರ್ಲೀನ್ ಡಿಯೋಲ್, ಸುಷ್ಮಾ ವರ್ಮಾ (ವಿಕೆಟ್ ಕೀಪರ್), ಸ್ನೇಹ ರಾಣಾ (ನಾಯಕಿ), ಕಿಮ್ ಗಾರ್ತ್, ಮೋನಿಕಾ ಪಟೇಲ್, ತನುಜಾ ಕನ್ವರ್, ಅಶ್ವನಿ ಕುಮಾರಿ
ಬೆಂಚ್: ಸಬ್ಬಿನೇನಿ ಮೇಘನಾ, ಮಾನ್ಸಿ ಜೋಶಿ, ಜಾರ್ಜಿಯಾ ವೇರ್ಹ್ಯಾಮ್, ಅನ್ನಾಬೆಲ್ ಸದರ್ಲ್ಯಾಂಡ್, ಹರ್ಲಿ ಗಾಲಾ, ಶಬ್ನಮ್ ಎಂಡಿ ಶಕೀಲ್, ಪರುಣಿಕಾ ಸಿಸೋಡಿಯಾ

ಯುಪಿ ವಾರಿಯರ್ಸ್ ಆಡುವ ಬಳಗ: ದೇವಿಕಾ ವೈದ್ಯ, ಅಲಿಸ್ಸಾ ಹೀಲಿ (ನಾಯಕಿ & ವಿಕೆಟ್ ಕೀಪರ್), ಕಿರಣ್ ನವಗಿರೆ, ತಹ್ಲಿಯಾ ಮೆಗ್ರಾತ್, ಗ್ರೇಸ್ ಹ್ಯಾರಿಸ್, ದೀಪ್ತಿ ಶರ್ಮಾ, ಸೋಫಿ ಎಕ್ಲೆಸ್ಟೋನ್, ಸಿಮ್ರಾನ್ ಶೇಖ್, ಪಾರ್ಶವಿ ಚೋಪ್ರಾ, ಅಂಜಲಿ ಸರ್ವಾಣಿ, ರಾಜೇಶ್ವರಿ ಗಾಯಕ್ವಾಡ್
ಬೆಂಚ್: ಶಬ್ನಿಮ್ ಇಸ್ಮಾಯಿಲ್, ಲಾರೆನ್ ಬೆಲ್, ಶಿವಾಲಿ ಶಿಂಧೆ, ಲಕ್ಷ್ಮಿ ಯಾದವ್, ಶ್ವೇತಾ ಸೆಹ್ರಾವತ್, ಸೊಪ್ಪದಂಡಿ ಯಶಸ್ರಿ

Story first published: Monday, March 20, 2023, 19:30 [IST]
Other articles published on Mar 20, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+