WPL 2023: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಯುಪಿ ವಾರಿಯರ್ಸ್

ಮಹಿಳಾ ಪ್ರೀಮಿಯರ್ ಲೀಗ್ 2023ರ ಪ್ಲೇಆಫ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಟಾಸ್ ಗೆದ್ದಿರುವ ಯುಪಿ ವಾರಿಯರ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಫೈನಲ್‌ಗೆ ತಲುಪಲು ಎರಡೂ ತಂಡಗಳು ಭಾರಿ ಪೈಪೋಟಿ ನಡೆಸಲು ಸಜ್ಜಾಗಿವೆ.
ಪ್ಲೇ ಆಫ್ ಪಂದ್ಯ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ. ಎರಡೂ ತಂಡಗಳಲ್ಲಿ ಬಲಿಷ್ಠ ಆಲ್‌ರೌಂಡರ್ ಮತ್ತು ಬ್ಯಾಟಿಂಗ್ ಪಡೆ ಇರುವುದರಿಂದ ಗೆಲುವಿಗಾಗಿ ಉಭಯ ತಂಡಗಳು ಕೊನೆಯವರೆಗೂ ಕಾದಾಡುತ್ತವೆ ಎಂದು ನಿರೀಕ್ಷೆ ಮಾಡಲಾಗಿದೆ.
ಮೊದಲ ಐದು ಪಂದ್ಯಗಳಲ್ಲಿ ಸತತವಾಗಿ ಗೆಲುವು ಸಾಧಿಸಿದ್ದ ಮುಂಬೈ ಇಂಡಿಯನ್ಸ್ ನಂತರ ಎರಡು ಪಂದ್ಯಗಳಲ್ಲಿ ಸೋಲನುಭವಿಸಿತ್ತು. ಮುಂಬೈ ಇಂಡಿಯನ್ಸ್‌ಗೆ ಮೊದಲ ಸೋಲಿನ ರುಚಿ ತೋರಿಸಿದ್ದು ಕೂಡ ಯುಪಿ ವಾರಿಯರ್ಸ್ ತಂಡ, ಮುಂಬೈ ಇಂಡಿಯನ್ಸ್ ವಿರುದ್ಧ ಮತ್ತೊಂದು ಗೆಲುವಿನ ವಿಶ್ವಾಸದಲ್ಲಿದೆ.
ಯುಪಿ ವಾರಿಯರ್ಸ್ ಲೀಗ್ ಹಂತದಲ್ಲಿ ಆಡಿದ 8 ಪಂದ್ಯಗಳಲ್ಲಿ 4 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು, 4 ಪಂದ್ಯಗಳಲ್ಲಿ ಸೋಲನುಭವಿಸಿದೆ. ಮುಂಬೈ ಇಂಡಿಯನ್ಸ್ ವಿರುದ್ಧ ಆಡಿರುವ ಎರಡು ಪಂದ್ಯಗಳಲ್ಲಿ ಒಂದರಲ್ಲಿ ಗೆಲುವು ಸಾಧಿಸಿದ್ದು, ಮತ್ತೊಂದರಲ್ಲಿ ಸೋಲನುಭವಿಸಿದೆ. ಬಲಿಷ್ಠ ಆಟಗಾರರನ್ನು ಹೊಂದಿರುವ ಯುಪಿ ವಾರಿಯರ್ಸ್ ಹರ್ಮನ್‌ಪ್ರೀತ್ ಕೌರ್ ಪಡೆಗೆ ಪೈಪೋಟಿ ನೀಡುವ ಉತ್ಸಾಹದಲ್ಲಿದೆ.

ಯಾವುದೇ ಬದಲಾವಣೆ ಮಾಡದ ಮುಂಬೈ ಇಂಡಿಯನ್ಸ್
ಮಹತ್ವದ ಪಂದ್ಯಕ್ಕಾಗಿ ಮುಂಬೈ ಇಂಡಿಯನ್ಸ್ ಆಡುವ ಬಳಗದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ಪಂದ್ಯದಲ್ಲಿ ಆರ್ ಸಿಬಿ ವಿರುದ್ಧ ಗೆಲುವು ಸಾಧಿಸಿದ್ದ ತಂಡವೇ ಯುಪಿ ವಾರಿಯರ್ಸ್ ವಿರುದ್ಧ ಕಣಕ್ಕಿಳಿಯಲಿದೆ.
ಯುಪಿ ವಾರಿಯರ್ಸ್ ತಂಡದಲ್ಲಿ ಗ್ರೇಸ್ ಹ್ಯಾರಿಸ್ ವಾಪಸಾಗಿದ್ದಾರೆ. ಉಳಿದಂತೆ ಕಳೆದ ಪಂದ್ಯದಲ್ಲಿ ಆಡಿದ ತಂಡವೇ ಕಣಕ್ಕಿಳಿಯಲಿದೆ. ನಾಯಕಿ ಅಲಿಸ್ಸಾ ಹೀಲಿ ಹುಟ್ಟು ಹಬ್ಬದ ಖುಷಿಯಲ್ಲಿದ್ದು, ತಮ್ಮ ತಂಡವನ್ನು ಗೆಲುವಿನ ದಡ ಸೇರಿಸುವ ವಿಶ್ವಾಸದಲ್ಲಿದ್ದಾರೆ.

ಉಭಯ ತಂಡಗಳ ಆಡುವ ಬಳಗ
ಮುಂಬೈ ಇಂಡಿಯನ್ಸ್: ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ನ್ಯಾಟ್ ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಅಮೆಲಿಯಾ ಕೆರ್, ಇಸ್ಸಿ ವಾಂಗ್, ಹುಮೈರಾ ಕಾಜಿ, ಧಾರಾ ಗುಜ್ಜರ್, ಅಮಂಜೋತ್ ಕೌರ್, ಜಿಂತಮಣಿ ಕಲಿತಾ, ಸೈಕಾ ಇಶಾಕ್.
ಯುಪಿ ವಾರಿಯರ್ಜ್: ಅಲಿಸ್ಸಾ ಹೀಲಿ(ನಾಯಕಿ), ಶ್ವೇತಾ ಶೆರಾವತ್, ಕಿರಣ್ ನವಗಿರೆ, ತಹ್ಲಿಯಾ ಮೆಗ್ರಾ, ಗ್ರೇಸ್ ಹ್ಯಾರಿಸ್, ದೀಪ್ತಿ ಶರ್ಮಾ, ಪಾರ್ಶವಿ ಚೋಪ್ರಾ, ಸಿಮ್ರಾನ್ ಶೇಖ್, ಸೋಫಿ ಎಕ್ಲೆಸ್ಟೋನ್, ಅಂಜಲಿ ಸರ್ವಾಣಿ, ರಾಜೇಶ್ವರಿ ಗಾಯಕ್ವಾಡ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications