WPL 2024: ಕನ್ನಡತಿ ಶ್ರೇಯಾಂಕಾ ಪಾಟೀಲ್ ಪರ್ಪಲ್ ಕ್ಯಾಪ್ ಒಡತಿ; ಮತ್ತೊಂದು ಪ್ರಶಸ್ತಿ ಮುಡಿಗೆ
ಭಾನುವಾರ, ಮಾರ್ಚ್ 17ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಕ್ಕೆ ಮರೆಯಲಾಗದ ಐತಿಹಾಸಿಕ ದಿನವಾಗಿದೆ. ಏಕೆಂದರೆ, 16 ವರ್ಷಗಳ "ಈ ಸಲ ಕಪ್ ನಮ್ದೇ' ಎಂಬ ಅಸಂಖ್ಯ ಅಭಿಮಾನಿಗಳ ಘೋಷ ವಾಕ್ಯವನ್ನು ನಿಜವಾಗಿಸಿದ ದಿನ.
ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) 2ನೇ ಆವೃತ್ತಿಯ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಮ್ಮ ಅಮೋಘ ಆಲ್‌ರೌಂಡ್ ಪ್ರದರ್ಶನದಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 8 ವಿಕೆಟ್‌ಗಳಿಂದ ಸೋಲಿಸಿತು.

ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮಹಿಳಾ ತಂಡ ಚೊಚ್ಚಲ ಬಾರಿಗೆ ಟ್ರೋಫಿ ಎತ್ತಿ ಹಿಡಿದು ಇತಿಹಾಸ ನಿರ್ಮಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡ ಉತ್ತಮ ಆರಂಭದ ಹೊರತಾಗಿಯೂ ಆರ್‌ಸಿಬಿ ಸ್ಪಿನ್ನರ್‌ಗಳ ಮಾರಕ ದಾಳಿಗೆ ಸಿಲುಕಿ 18.3 ಓವರ್‌ಗಳಲ್ಲಿ ಕೇವಲ 113 ರನ್‌ಗಳಿಗೆ ಅರ್ವಪತನ ಕಂಡಿತು.

ಪ್ರಶಸ್ತಿ ಗೆಲುವಿಗೆ 114 ರನ್‌ಗಳ ಗುರಿ ಪಡೆದ ಆರ್‌ಸಿಬಿ ತಂಡ ಸೋಫಿ ಡಿವೈನ್ ಮತ್ತು ಸ್ಮೃತಿ ಮಂಧಾನ ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ 19.3 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗೆಲುವಿನ ಗುರಿ ಮುಟ್ಟಿತು.
ಇದಕ್ಕೂ ಮುನ್ನ ಆರ್‌ಸಿಬಿ ಸ್ಟಾರ್ ಆಲ್‌ರೌಂಡರ್ ಹಾಗೂ ಕನ್ನಡತಿ ಶ್ರೇಯಾಂಕಾ ಪಾಟೀಲ್ ತನ್ನ ನಾಲ್ಕು ವಿಕೆಟ್ ಗಳಿಕೆಯೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ವಿನಾಶ ಮಾಡಿದರು ಮತ್ತು ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) 2ನೇ ಆವೃತ್ತಿಯಲ್ಲಿ ಅತಿ ಹೆಚ್ಚು ವಿಕೆಟ್ ಪೆಡದ ಬೌಲರ್ ಆಗಿ ಪರ್ಪಲ್ ಕ್ಯಾಪ್ ಮುಡಿಗೇರಿಸಿಕೊಂಡರು.
ಹೈ-ವೋಲ್ಟೇಜ್ ಫೈನಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಕೇವಲ 113 ರನ್‌ಗಳಿಗೆ ಆಲೌಟ್ ಆಯಿತು ಮತ್ತು ಅದು ಕೂಡ ಅವರದೇ ತವರಿನ ಮೈದಾನದಲ್ಲಿ. ಪವರ್‌ಪ್ಲೇ ತನಕ ಡೆಲ್ಲಿ ಕ್ಯಾಪಿಟಲ್ಸ್ ಅತ್ಯಂತ ಆಕ್ರಮಣಕಾರಿಯೊಂದಿಗೆ ರನ್ ಗಳಿಸಿತು. ಮೊದಲ ಆರು ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 61 ರನ್ ಕಲೆಹಾಕಿತು.
ಸ್ಮೃತಿ ಮಂಧಾನ ನಾಯಕತ್ವದ ಆರ್‌ಸಿಬಿ ಬೌಲರ್‌ಗಳು 8-15 ಓವರ್‌ಗಳಲ್ಲಿ ಕೇವಲ 29 ರನ್‌ಗಳನ್ನು ನೀಡಿ ಏಳು ವಿಕೆಟ್‌ಗಳನ್ನು ಉರುಳಿಸಿತು.
ಮಧ್ಯಮ ಕ್ರಮಾಂಕದಲ್ಲಿ ಆಲಿಸ್ ಕ್ಯಾಪ್ಸೆ, ಜೆಮಿಮಾ ರೋಡ್ರಿಗಸ್, ಮರಿಜಾನ್ನೆ ಕಾಪ್ ಮತ್ತು ಜೆಸ್ ಜೊನಾಸೆನ್ ಅವರಂತಹ ಉತ್ತಮ ಅಂತಾರಾಷ್ಟ್ರೀಯ ಆಟಗಾರ್ತಿಯರನ್ನು ಹೊಂದಿದ್ದರೂ, ಡೆಲ್ಲಿ ಕ್ಯಾಪಿಟಲ್ಸ್‌ಗೆ ಪ್ರತಿರೋಧ ಒಡ್ಡಲು ಸಾಧ್ಯವಾಗಲಿಲ್ಲ.
ಕನ್ನಡತಿ ಶ್ರೇಯಾಂಕಾ ಪಾಟೀಲ್ ಪರ್ಪಲ್ ಕ್ಯಾಪ್ ಒಡತಿ
ಫೈನಲ್ ಪಂದ್ಯಕ್ಕೂ ಮುನ್ನ ಒಂಬತ್ತು ವಿಕೆಟ್‌ಗಳನ್ನು ಪಡೆದಿದ್ದ ಬೌಲಿಂಗ್ ಆಲ್‌ರೌಂಡರ್ ಶ್ರೇಯಾಂಕಾ ಪಾಟೀಲ್, ನಿರ್ಣಾಯಕ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ನಾಲ್ಕು ವಿಕೆಟ್‌ಗಳೊಂದಿಗೆ ಅಗ್ರಸ್ಥಾನಕ್ಕೆ ಏರಿದರು. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮೆಗ್ ಲ್ಯಾನಿಂಗ್, ಮಿನ್ನು ಮಣಿ, ಅರುಂಧತಿ ರೆಡ್ಡಿ ಮತ್ತು ತಾನಿಯಾ ಭಾಟಿಯಾ ಅವರ ವಿಕೆಟ್ ಪಡೆದರು.
ಈ ಮೂಲಕ ಪಂದ್ಯಾವಳಿಯಲ್ಲಿ ಒಟ್ಟಾರೆ 13 ವಿಕೆಟ್‌ಗಳೊಂದಿಗೆ ಶ್ರೇಯಾಂಕಾ ಪಾಟೀಲ್ ಪರ್ಪಲ್ ಕ್ಯಾಪ್ ಪಡೆದರು. ಈ 13 ವಿಕೆಟ್‌ಗಳ ಪೈಕಿ ಎಂಟು ವಿಕೆಟ್‌ಗಳು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧವೇ ಬಂದಿರುವುದು ಮತ್ತೊಂದು ವಿಶೇಷ.
ಶ್ರೇಯಾಂಕಾ ಪಾಟೀಲ್ ತಮ್ಮ ಮಹಿಳಾ ಪ್ರೀಮಿಯರ್ ಲೀಗ್ ವೃತ್ತಿಜೀವನದ ಅತ್ಯುತ್ತಮ 3.3 ಓವರ್‌ಗಳಲ್ಲಿ 12 ರನ್ ನೀಡಿ 4 ವಿಕೆಟ್ ಅಂಕಿಅಂಶ ದಾಖಲಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications