Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WPL 2024: ಐಪಿಎಲ್ ಮಾದರಿಯಲ್ಲಿ ನಡೆಯಲಿವೆ ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯಗಳು

ಮಹಿಳಾ ಪ್ರೀಮಿಯರ್ ಲೀಗ್‌ನ ಉದ್ಘಾಟನಾ ಆವೃತ್ತಿಯ ಯಶಸ್ಸಿನಿಂದ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿರುವ ಐಪಿಎಲ್ ಚೇರ್ಮನ್ ಅರುಣ್ ಧುಮಾಲ್ ಮತ್ತೊಂದು ಯೋಜನೆ ಸಿದ್ದಪಡಿಸಿದ್ದಾರೆ. ಮುಂದಿನ ವರ್ಷದಿಂದ ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯಗಳನ್ನು ತವರು ಮತ್ತು ಹೊರಗಿನ ಮಾದರಿಯಲ್ಲಿ ಆಯೋಜಿಸಲು ಮುಂದಾಗಿದ್ದಾರೆ. ಇನ್ನೂ ಮೂರು ವರ್ಷಗಳ ಕಾಲ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಐದು ತಂಡಗಳಷ್ಟೇ ಆಡಲಿವೆ ಎಂದು ಖಚಿತಪಡಿಸಿದ್ದಾರೆ.

ಐಪಿಎಲ್ 2023ರ ಆರಂಭಕ್ಕೆ ಮುಂಚಿತವಾಗಿ ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯಾವಳಿ ನಡೆದಿತ್ತು. ಉದ್ಘಾಟನಾ ಆವೃತ್ತಿಯ ಎಲ್ಲಾ ಪಂದ್ಯಗಳನ್ನು ಮುಂಬೈನ ಎರಡು ಕ್ರೀಡಾಂಗಣಗಳಲ್ಲಿ ಮಾತ್ರ ಆಯೋಜನೆ ಮಾಡಲಾಗಿತ್ತು. ಆದರೆ, ನಿರೀಕ್ಷೆಗೂ ಮೀರಿ ಪಂದ್ಯಾವಳಿ ಯಶಸ್ಸು ಕಂಡ ಬಳಿಕ ಮುಂದಿನ ವರ್ಷ ಮಹಿಳಾ ಕ್ರಿಕೆಟ್‌ ಅನ್ನು ಮತ್ತಷ್ಟು ಜನಪ್ರಿಯಗೊಳಿಸಲು ತೀರ್ಮಾನಿಸಿದೆ.

WPL 2024

ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯಗಳ ಆಯೋಜನೆ ತನ್ನ ಅಧಿಕಾರಾವಧಿಯ ದೊಡ್ಡ ಸವಾಲಾಗಿದೆ ಎಂದು ಧುಮಾಲ್ ಹೇಳಿದರು, ತವರು ಮತ್ತು ಹೊರಗಿನ ಸ್ಥಳಗಳಲ್ಲಿ ಪಂದ್ಯಗಳನ್ನು ಆಯೋಜನೆ ಮಾಡುವುದರಿಂದ ಅಭಿಮಾನಿಗಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಲು ತಂಡಗಳಿಗೆ ಹೆಚ್ಚಿನ ಸಹಾಯ ಮಾಡಿದಂತಾಗುತ್ತದೆ. ಮುಂದಿನ ಆವೃತ್ತಿಯಲ್ಲಿ ಇದನ್ನು ಕಾರ್ಯಗತಗೊಳಿಸಲು ಮಂಡಳಿ ಕೆಲಸ ಮಾಡುತ್ತದೆ ಎಂದು ಹೇಳಿದರು.

WPL 2024

ಮೂರು ವರ್ಷದ ಬಳಿಕ ತಂಡದ ಸಂಖ್ಯೆ ಹೆಚ್ಚಳ

"ನಾವು ತಂಡಗಳ ಸಂಖ್ಯೆಯಲ್ಲಿ ಹೆಚ್ಚಳವನ್ನು ನಿರೀಕ್ಷಿಸುತ್ತಿದ್ದೇವೆ ಆದರೆ ಮುಂಬರುವ ಮೂರು ಆವೃತ್ತಿಗಳಲ್ಲಿ ಐದು ತಂಡಗಳು ಆಡಲಿವೆ. ತವರು ಮತ್ತು ವಿದೇಶದ ಸ್ವರೂಪವನ್ನು ನೋಡುತ್ತಿದ್ದೇವೆ, ಭಾರತದ ಅಂತರರಾಷ್ಟ್ರೀಯ ವೇಳಾಪಟ್ಟಿಯನ್ನು ಪರಿಗಣಿಸಿ ಯಾವ ಸಮಯದ ಸ್ಲಾಟ್ ಲಭ್ಯವಿದೆ ಎಂಬುದನ್ನು ನಾವು ನೋಡುತ್ತೇವೆ ಮತ್ತು ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ. ಅಭಿಮಾನಿಗಳನ್ನು ಹೆಚ್ಚು ಆಕರ್ಷಿಸಲು, ನಾವು ಐಪಿಎಲ್ ಮಾದರಿಯಲ್ಲಿ ಪಂದ್ಯಗಳನ್ನು ನಡೆಸುವುದು ಮುಖ್ಯ" ಎಂದು ಧುಮಾಲ್ ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಬ್ರಬೋರ್ನ್ ಮತ್ತು ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಪಂದ್ಯಗಳನ್ನು ವೀಕ್ಷಿಸಲು ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿದ್ದರು. ಲೀಗ್ ಹಂತದ ಪಂದ್ಯಗಳಿಗೆ ಮಹಿಳೆಯರಿಗೆ ಉಚಿತ ಪ್ರವೇಶವನ್ನು ನೀಡಿತ್ತಾದರೂ, ಫೈನಲ್ ಪಂದ್ಯಕ್ಕೆ ಟಿಕೆಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಆದರೂ ಫೈನಲ್ ಪಂದ್ಯದಲ್ಲಿ ಕ್ರೀಡಾಂಗಣ ಭರ್ತಿಯಾಗಿತ್ತು. 5 ತಂಡಗಳನ್ನು ಮಾರಾಟ ಮಾಡುವ ಮೂಲಕ ಬಿಸಿಸಿಐ 4700 ಕೋಟಿ ರುಪಾಯಿ ಆದಾಯ ಗಳಿಸಿದರೆ, ಮಾಧ್ಯಮ ಹಕ್ಕುಗಳನ್ನು 951 ಕೋಟಿ ರುಪಾಯಿಗಳಿಗೆ ಮಾರಾಟ ಮಾಡಿತ್ತು.

Story first published: Wednesday, April 5, 2023, 11:31 [IST]
Other articles published on Apr 5, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+