WPL 2024: ಬೆಂಗಳೂರಿನಲ್ಲಿ MI vs DC ಉದ್ಘಾಟನಾ ಪಂದ್ಯ; ಬಾಲಿವುಡ್ ತಾರೆಯರಿಂದ ಅದ್ಧೂರಿ ಸಮಾರಂಭ
2024ರ ಮಹಿಳೆಯರ ಪ್ರೀಮಿಯರ್ ಲೀಗ್‌ನ (ಡಬ್ಲ್ಯುಪಿಎಲ್) ಎರಡನೇ ಆವೃತ್ತಿಯು ಶುಕ್ರವಾರ, ಫೆಬ್ರವರಿ 23ರಿಂದ ಪ್ರಾರಂಭವಾಗಲಿದ್ದು, ಉದ್ಘಾಟನಾ ಪಂದ್ಯವು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ಮೊದಲ ಪಂದ್ಯದಲ್ಲಿ ಚೊಚ್ಚಲ ಆವೃತ್ತಿಯ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ರನ್ನರ್-ಅಪ್ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಸೆಣಸಾಟ ನಡೆಸಲಿವೆ.

ಪಂದ್ಯಕ್ಕೂ ಮುನ್ನ ಎರಡನೇ ಆವೃತ್ತಿಯನ್ನು ಬ್ಲಾಕ್‌ಬಸ್ಟರ್ ರೂಪದಲ್ಲಿ ಪ್ರಾರಂಭಿಸಲು ಡಬ್ಲ್ಯುಪಿಎಲ್‌ನ ಉದ್ಘಾಟನಾ ಸಮಾರಂಭ ನಡೆಯಲಿದೆ. ಇದರಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಈವೆಂಟ್‌ನಲ್ಲಿ ಪ್ರದರ್ಶನ ನೀಡಲಿದ್ದಾರೆ.
ಶಾರೂಖ್ ಖಾನ್ ಮಾತ್ರವಲ್ಲದೆ ಶಾಹಿದ್ ಕಪೂರ್, ಕಾರ್ತಿಕ್ ಆರ್ಯನ್, ವರುಣ್ ಧವನ್ ಮತ್ತು ಟೈಗರ್ ಶ್ರಾಫ್ ಕೂಡ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಪ್ರದರ್ಶನ ನೀಡಲಿದ್ದಾರೆ.
2024ರ ಮಹಿಳಾ ಪ್ರೀಮಿಯರ್ ಲೀಗ್‌ನ ಮೊದಲ ಪಂದ್ಯ ಶುಕ್ರವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವನಿತೆಯರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡಗಳ ನಡುವೆ ನಡೆಯಲಿದೆ.
ಮುಂಬೈ ಇಂಡಿಯನ್ಸ್ ಇತಿಹಾಸವನ್ನು ಪುನರಾವರ್ತಿಸಲು ಮತ್ತು ಈ ವರ್ಷ ತಮ್ಮ ಸತತ ಎರಡನೇ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳಲು ಎದುರು ನೋಡುತ್ತಿದೆ. ಇದೇ ವೇಳೆ ಡೆಲ್ಲಿ ಕ್ಯಾಪಿಟಲ್ಸ್ 2023ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್‌ನಲ್ಲಿ ಮುಂಬೈ ವಿರುದ್ಧ ಸೋತ ನಂತರ ತಮ್ಮ ಚೊಚ್ಚಲ ಟ್ರೋಫಿ ಎತ್ತಿ ಹಿಡಿಯಲು ಗುರಿ ಹೊಂದಿದ್ದಾರೆ.
ಉದ್ಘಾಟನಾ ಪಂದ್ಯ ಹಾಗೂ ಸಮಾರಂಭದ ದಿನಾಂಕ ಮತ್ತು ಸಮಯ
ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಜೆ 7.30ಕ್ಕೆ ಪ್ರಾರಂಭವಾಗುತ್ತದೆ. ಅದಕ್ಕೂ ಮುನ್ನ ಅಂದರೆ, ಸಂಜೆ 6.30ಕ್ಕೆ ಅದೇ ಮೈದಾನದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ.
2024ರ ಮಹಿಳಾ ಪ್ರೀಮಿಯರ್ ಲೀಗ್ ಟಿವಿ ಮತ್ತು ಲೈವ್ ಸ್ಟ್ರೀಮಿಂಗ್
2024ರ ಮಹಿಳಾ ಪ್ರೀಮಿಯರ್ ಲೀಗ್ ಉದ್ಘಾಟನಾ ಸಮಾರಂಭ ಹಾಗೂ ಪಂದ್ಯವನ್ನು ಟಿವಿಯಲ್ಲಿ ಸ್ಪೋರ್ಟ್ಸ್ 18 ನೆಟ್‌ವರ್ಕ್‌ನ ಟಿವಿ ಚಾನೆಲ್‌ಗಳಲ್ಲಿ ನೇರಪ್ರಸಾರ ಮಾಡಲಾಗುತ್ತದೆ.
ಇನ್ನು 2024ರ ಮಹಿಳಾ ಪ್ರೀಮಿಯರ್ ಲೀಗ್ ಉದ್ಘಾಟನಾ ಸಮಾರಂಭ ಹಾಗೂ ಪಂದ್ಯವನ್ನು ಜಿಯೋ ಸಿನಿಮಾ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಲಭ್ಯವಿರುತ್ತದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications