WPL 2024 Final: ಆರ್‌ಸಿಬಿ ಸ್ಪಿನ್ನರ್‌ಗಳ ದಾಳಿಗೆ ಕಂಗಾಲಾದ ಡೆಲ್ಲಿ ಕ್ಯಾಪಿಟಲ್ಸ್; ಸ್ಮೃತಿ ಪಡೆಗೆ 114 ರನ್‌ಗಳ ಗುರಿ
ಭಾನುವಾರ, ಮಾರ್ಚ್ 17ರಂದು ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ನ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ತಂಡ ಸಾಧಾರಣ ಮೊತ್ತ ಕಲೆಹಾಕಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡವು ಉತ್ತಮ ಆರಂಭದ ಹೊರತಾಗಿಯೂ ಆರ್‌ಸಿಬಿ ತಂಡದ ಸ್ಪಿನ್ನರ್‌ಗಳ ಮಾರಕ ದಾಳಿಗೆ ಸಿಲುಕಿತು. ಹೀಗಾಗಿ 18.3 ಓವರ್‌ಗಳಲ್ಲಿ 113 ರನ್‌ಗಳಿಗೆ ಆಲೌಟ್ ಆಗಿದ್ದು, ಆರ್‌ಸಿಬಿ ತಂಡದ ಗೆಲುವಿಗೆ 114 ರನ್‌ಗಳ ಗುರಿ ನೀಡಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಇನ್ನಿಂಗ್ಸ್ ಆರಂಭಿಸಿದ ನಾಯಕಿ ಮೆಗ್ ಲ್ಯಾನಿಂಗ್ ಮತ್ತು ಶಫಾಲಿ ವರ್ಮಾ ಪವರ್ ಪ್ಲೇನಲ್ಲಿ ಆಕ್ರಮಣಕಾರಿ ಬ್ಯಾಟಿಂಗ್ ಮೂಲಕ ಭರ್ಜರಿ ಆರಂಭ ಪಡೆದರು. ಈ ಜೋಡಿ ಮೊದಲ ವಿಕೆಟ್‌ಗೆ 7 ಓವರ್‌ಗಳಲ್ಲಿ 64 ರನ್‌ಗಳ ಜೊತೆಯಾಟ ನಿರ್ಮಿಸಿತು.
8ನೇ ಓವರ್ ಎಸೆಯಲು ಬಂದ ಸೋಫಿ ಮೊಲಿನೆಕ್ಸ್ ಮೊದಲ ಎಸೆತದಲ್ಲಿಯೇ ಸ್ಫೋಟಕ ಬ್ಯಾಟರ್ ಶಫಾಲಿ ವರ್ಮಾ ಅವರ ವಿಕೆಟ್ ಪಡೆದು ಮೊದಲ ಮುನ್ನಡೆ ತಂದುಕೊಟ್ಟರು. ಆಗ ಶಫಾಲಿ ವರ್ಮಾ 27 ಎಸೆತಗಳಲ್ಲಿ 2 ಬೌಂಡರಿ ಹಾಗೂ 3 ಸಿಕ್ಸರ್‌ಗಳ ಸಮೇತ 44 ರನ್‌ಗಳನ್ನು ಬಾರಿಸಿದರು.
ನಂತರ ಬಂದ ಜೆಮಿಮಾ ರೋಡ್ರಿಗಸ್ ಮತ್ತು ಆಲಿಸ್ ಕ್ಯಾಪ್ಸೆ ಅದೇ ಓವರ್‌ನಲ್ಲಿ ತಾವು ಎದುರಿಸಿದ ಮೊದಲ ಎಸೆತದಲ್ಲಿಯೇ ಡಕ್‌ಗೆ ಔಟಾಗಿ ಪೆವಿಲಿಯನ್ ಸೇರಿದರು. ಬಳಿಕ ಕ್ರೀಸ್‌ಗೆ ಬಂದ ಮಾರಿಜಾನ್ನೆ ಕಾಪ್ 8 ರನ್ ಗಳಿಸಿ ಔಟಾದರು.

ಇನ್ನು 23 ಎಸೆತಗಳಲ್ಲಿ 23 ರನ್ ಗಳಿಸಿ ಉತ್ತಮವಾಗಿ ಆಡುತ್ತಿದ್ದ ನಾಯಕಿ ಮೆಗ್ ಲ್ಯಾನಿಂಗ್ ಅವರು ಶ್ರೇಯಾಂಕಾ ಪಾಟೀಲ್ ಎಸೆದ ಅತ್ಯುತ್ತಮ ಎಸೆತದಲ್ಲಿ ಎಲ್‌ಬಿಡಬ್ಲ್ಯು ಆಗಿ ಹೊರನಡೆದರು. ಆ ಬಳಿಕ ಜೆಸ್ ಜೊನ್ನಾಸೆನ್ 3 ರನ್, ರಾಧಾ ಯಾದವ್ 12 ರನ್, ಮಿನ್ನು ಮಣಿ 5 ರನ್, ಅರುಂಧತಿ ರೆಡ್ಡಿ 10 ರನ್, ಶಿಖಾ ಪಾಂಡೆ 5 ರನ್ ಗಳಿಸಿ ತಂಡದ ಮೊತ್ತ 110ರ ಗಡಿ ದಾಟಲು ನೆರವಾದರು.
ಇನ್ನು ಬೌಲಿಂಗ್‌ನಲ್ಲಿ ಆರ್‌ಸಿಬಿ ತಂಡದ ಪರ ಶ್ರೇಯಾಂಕಾ ಪಾಟೀಲ್ 3.3 ಓವರ್‌ಗಳಲ್ಲಿ 12 ರನ್ ನೀಡಿ 4 ವಿಕೆಟ್ ಕಬಳಿಸಿದರೆ, ಸೋಫಿ ಮೊಲಿನೆಕ್ಸ್ 4 ಓವರ್‌ಗಳಲ್ಲಿ 20 ರನ್ ನೀಡಿ ಪ್ರಮುಖ 3 ವಿಕೆಟ್ ಪಡೆದು ಮಿಂಚಿದರು. ಉಳಿದಂತೆ ಆಶಾ ಸೋಬನಾ 3 ಓವರ್‌ಗಳಲ್ಲಿ 14 ರನ್ ನೀಡಿ 2 ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications