WPL 2024: ಬೃಹತ್ ಮೊತ್ತದ ಚೇಸಿಂಗ್‌ನಲ್ಲಿ ಎಡವಿದ ಆರ್‌ಸಿಬಿ; ಡೆಲ್ಲಿ ಕ್ಯಾಪಿಟಲ್ಸ್‌ಗೆ ಭರ್ಜರಿ ಜಯ
ಗುರುವಾರ, ಫೆಬ್ರವರಿ 29ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ 2024ರ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಪಂದ್ಯಾವಳಿಯ ಏಳನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮಹಿಳಾ ತಂಡ ಡೆಲ್ಲಿ ಕ್ಯಾಪಿಟಲ್ಸ್ (ಜಿಜಿ) ತಂಡದ ವಿರುದ್ಧ ಹೀನಾಯ ಸೋಲು ಅನುಭವಿಸಿದೆ.
ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಆರ್‌ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಅವರ ನಿರ್ಧಾರವನ್ನು ಬೌಲರ್‌ಗಳು ತಲೆಕೆಳಗಾಗಿ ಮಾಡಿದರು. ಏಕೆಂದರೆ, ಕಳಪೆ ಬೌಲಿಂಗ್ ಮತ್ತು ಕಳಪೆ ಫೀಲ್ಡಿಂಗ್ ಪ್ರದರ್ಶನದಿಂದ ಅಧಿಕ ರನ್ ಬಿಟ್ಟುಕೊಟ್ಟರು.

ಇನ್ನು ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಶಫಾಲಿ ವರ್ಮಾ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್‌ಗೆ 194 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.
195 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಆರ್‌ಸಿಬಿ ತಂಡ ಕೇವಲ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು ಕೇವಲ 169 ರನ್ ಗಳಿಸಿ 25 ರನ್‌ಗಳ ಸೋಲು ಅನುಭವಿಸಿತು. ಈ ಮೂಲಕ ಹ್ಯಾಟ್ರಿಕ್ ಗೆಲುವಿನ ಕನಸಿನಲ್ಲಿದ್ದ ಸ್ಮೃತಿ ಮಂಧಾನ ಪಡೆ ನಿರಾಸೆ ಕಂಡಿತು.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ನಾಯಕಿ ಮೆಗ್ ಲ್ಯಾನಿಂಗ್ 11 ರನ್, ಶಫಾಲಿ ವರ್ಮಾ 31 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್ ಸಮೇತ 50 ರನ್, ಆಲಿಸ್ ಕ್ಯಾಪ್ಸಿ 33 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್ ಮೂಲಕ 46 ರನ್, ಮಾರಿಜಾನ್ನೆ ಕಾಪ್ 32 ರನ್ ಮತ್ತು ಜೆಸ್ ಜೊನಾಸೆನ್ 36 ರನ್ ಗಳಿಸಿ ತಂಡದ ಮೊತ್ತ 190ರ ಗಡಿ ದಾಟಿಸಿದರು.
ಬೌಲಿಂಗ್‌ನಲ್ಲಿ ಆರ್‌ಸಿಬಿ ಪರ ಸೋಫಿ ಡಿವೈನ್ ಮತ್ತು ನಾಡಿನ್ ಡಿ ಕ್ಲಾರ್ಕ್ ತಲಾ ಎರಡು ವಿಕೆಟ್ ಕಬಳಿಸಿದರೆ, ಶ್ರೇಯಾಂಕಾ ಪಾಟೀಲ್ ಒಂದು ವಿಕೆಟ್ ಪಡೆದರು.
ಇನ್ನು ಬ್ಯಾಟಿಂಗ್‌ನಲ್ಲಿ ಆರ್‌ಸಿಬಿ ತಂಡದ ಪರ ನಾಯಕಿ ಸ್ಮೃತಿ ಮಂಧಾನ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ತಮ್ಮ ಮೊದಲ ಅರ್ಧಶತಕ ಬಾರಿಸಿದರು. 43 ಎಸೆತಗಳನ್ನು ಎದುರಿಸಿ 10 ಬೌಂಡರಿ ಹಾಗೂ 3 ಸಿಕ್ಸರ್ ಸಿಕ್ಸರ್ ಸಮೇತ 74 ರನ್ ಗಳಿಸಿದರು. ಸ್ಮೃತಿ ಮಂಧಾನ ಕ್ರೀಸ್‌ನಲ್ಲಿ ಇರುವವರೆಗೆ ಆರ್‌ಸಿಬಿ ತಂಡ ಗೆಲುವಿನತ್ತ ಮುನ್ನುಗ್ಗುತ್ತಿತ್ತು. ಅವರ ವಿಕೆಟ್ ಬೀಳುತ್ತಿದ್ದಂತೆಯೇ ಆಸೆ ಕೈಚೆಲ್ಲಿತು.
ಉಳಿದಂತೆ ಸೋಫಿ ಡಿವೈನ್ 23 ರನ್, ಸಬ್ಬಿನೇನಿ ಮೇಘನಾ 36 ರನ್, ರಿಚಾ ಘೋಷ್ 19 ರನ್ ಗಳಿಸಿದರೆ, ಉಳಿದ ಬ್ಯಾಟರ್‌ಗಳು ಎರಡಂಕಿ ಮೊತ್ತ ದಾಟಲು ವಿಫಲರಾದರು.
ಡೆಲ್ಲಿ ಕ್ಯಾಪಿಟಲ್ಸ್ ಪರ ಬೌಲಿಂಗ್‌ನಲ್ಲಿ ಜೆಸ್ ಜೊನಾಸೆನ್ 3 ವಿಕೆಟ್ ಕಬಳಿಸಿದರೆ, ಮಾರಿಜಾನ್ನೆ ಕಾಪ್ ಮತ್ತು ಅರುಂಧತಿ ರೆಡ್ಡಿ ತಲಾ 2 ವಿಕೆಟ್ ಪಡೆದರು. ಉಳಿದಂತೆ ಶಿಖಾ ಪಾಂಡೆ ಒಂದು ವಿಕೆಟ್ ತಮ್ಮದಾಗಿಸಿಕೊಂಡರು. ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿ ಆಲ್‌ರೌಂಡ್ ಪ್ರದರ್ಶನ ನೀಡಿದ ಮಾರಿಜಾನ್ನೆ ಕಾಪ್ ಪಂದ್ಯಶ್ರೇಷ್ಠ ಆಟಗಾರ್ತಿ ಪ್ರಶಸ್ತಿಗೆ ಭಾಜನರಾದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications