Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WPL 2024: ಆರ್‌ಸಿಬಿ vs ಗುಜರಾತ್ ಜೈಂಟ್ಸ್ ಮುಖಾಮುಖಿ; ಸತತ 2ನೇ ಗೆಲುವಿನ ಮೇಲೆ ಕಣ್ಣಿಟ್ಟ ಸ್ಮೃತಿ ಪಡೆ

ಮಂಗಳವಾರ, ಫೆಬ್ರವರಿ 27ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ 2024ರ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಪಂದ್ಯಾವಳಿಯ ಐದನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಗುಜರಾತ್ ಜೈಂಟ್ಸ್ (ಜಿಜಿ) ತಂಡಗಳು ಸೆಣಸಾಡಲಿವೆ.

ತನ್ನ ಮೊದಲ ಪಂದ್ಯದಲ್ಲಿ ಯುಪಿ ವಾರಿಯರ್ಜ್ (UPW) ವಿರುದ್ಧ ಎರಡು ರನ್‌ಗಳ ರೋಚಕ ಅಂತರದ ಗೆಲುವಿನೊಂದಿಗೆ ಆರ್‌ಸಿಬಿ ತಂಡವು ಪಂದ್ಯಾವಳಿಯಲ್ಲಿ ಅಭಿಯಾನವನ್ನು ಪ್ರಾರಂಭಿಸಿತು. ಮತ್ತೊಂದೆಡೆ, ಗುಜರಾತ್ ಜೈಂಟ್ಸ್ ತನ್ನ ಆರಂಭಿಕ ಪಂದ್ಯದಲ್ಲಿ ಐದು ವಿಕೆಟ್‌ಗಳಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಸೋಲು ಅನುಭವಿಸಿತು.

WPL 2024: RCB vs Gujarat Giants Head-to-Head; Match Report And Probable Playing 11 Details

ಯುಪಿ ವಾರಿಯರ್ಜ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಅದ್ಭುತ ಪ್ರದರ್ಶನ ನೀಡಿತು. ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ ತಂಡಕ್ಕೆ ರಿಚಾ ಘೋಷ್ 37 ಎಸೆತಗಳಲ್ಲಿ 62 ರನ್ ಮತ್ತು ಸಬ್ಬಿನೇನಿ ಮೇಘನಾ 44 ಎಸೆತಗಳಲ್ಲಿ 53 ರನ್‌ಗಳ ಅಮೋಘ ಅರ್ಧಶತಕಗಳ ನೆರವಿನಿಂದ 6 ವಿಕೆಟ್‌ಗೆ 157 ರನ್ ಕಲೆಹಾಕಿತು.

ಚೇಸಿಂಗ್‌ನಲ್ಲಿ ಯುಪಿ ವಾರಿಯರ್ಜ್ ತಂಡವು 16 ಓವರ್‌ಗಳಲ್ಲಿ 3 ವಿಕೆಟ್‌ಗೆ 126 ರನ್ ಗಳಿಸಿ ಗೆಲುವಿನ ಸಮೀಪದಲ್ಲಿತ್ತು. ಆದರೆ, ಆರ್‌ಸಿಬಿ ಲೆಗ್ ಸ್ಪಿನ್ನರ್ ಶೋಭನಾ ಆಶಾ 17 ನೇ ಓವರ್‌ನಲ್ಲಿ ಮೂರು ವಿಕೆಟ್‌ಗಳನ್ನು ಪಡೆದರು. ಇದು ಆರ್‌ಸಿಬಿ ತಂಡ ಅನಿರೀಕ್ಷಿತ ಎರಡು ರನ್‌ಗಳ ಗೆಲುವಿಗೆ ನೆರವಾಯಿತು. ಅಂತಿಮವಾಗಿ ಶೋಭನಾ ಆಶಾ 22 ರನ್ ನೀಡಿ 5 ವಿಕೆಟ್ ಕಬಳಿಸಿ ಆಘಾತ ನೀಡಿದರು.

ಇನ್ನು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಜೈಂಟ್ಸ್ ತಂಡವು ಕೆಳಮಟ್ಟದ ಪ್ರದರ್ಶನ ನೀಡಿತು. ತಮ್ಮ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 126 ರನ್‌ಗಳನ್ನು ಮಾತ್ರ ಗಳಿಸಿದರು. ಕೇವಲ ಮೂರು ಬ್ಯಾಟರ್‌ಗಳು ಮಾತ್ರ 20 ರನ್‌ಗಳ ಗಡಿ ದಾಟಿದರು.

ಗುಜರಾತ್ ಜೈಂಟ್ಸ್ ಬೌಲರ್‌ಗಳು ಮುಂಬೈ ಇಂಡಿಯನ್ಸ್ ತಂಡದ ಐದು ವಿಕೆಟ್‌ಗಳನ್ನು ಪಡೆಯಲು ಕಠಿಣವಾಗಿ ಹೋರಾಡಿದರು. ಆದರೆ ಅವರು ಕಲೆಹಾಕಿದ ಮೊತ್ತವು ತೀರಾ ಕಡಿಮೆಯಾಗಿತ್ತು.

WPL 2024: RCB vs Gujarat Giants Head-to-Head; Match Report And Probable Playing 11 Details

ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಆರ್‌ಸಿಬಿ vs ಗುಜರಾತ್ ಜೈಂಟ್ಸ್ ಮುಖಾಮುಖಿ

ಕಳೆದ ವರ್ಷ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಜೈಂಟ್ಸ್ ತಂಡಗಳು ಎರಡು ಬಾರಿ ಮುಖಾಮುಖಿಯಾಗಿದ್ದು, ಎರಡೂ ತಂಡಗಳು ತಲಾ ಒಂದು ಪಂದ್ಯವನ್ನು ಗೆದ್ದಿವೆ.

ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆದ ಮೊದಲ ಮುಖಾಮುಖಿಯಲ್ಲಿ ಗುಜರಾತ್ ಜೈಂಟ್ಸ್ 11 ರನ್‌ಗಳಿಂದ ಗೆದ್ದಿದ್ದರೆ, ಎರಡನೇ ಬಾರಿಗೆ ಮುಖಾಮುಖಿಯಾದಾಗ, ಆರ್‌ಸಿಬಿ ಅದೇ ಮೈದಾನದಲ್ಲಿ ಎಂಟು ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತು.

WPL 2024: ಆರ್‌ಸಿಬಿ vs ಗುಜರಾತ್ ಜೈಂಟ್ಸ್ ಸಂಭಾವ್ಯ ಆಡುವ 11ರ ಬಳಗ

ಗುಜರಾತ್ ಜೈಂಟ್ಸ್: ಬೆತ್ ಮೂನಿ (ನಾಯಕ/ ವಿಕೆಟ್‌ಕೀಪರ್), ವೇದಾ ಕೃಷ್ಣಮೂರ್ತಿ, ಫೋಬೆ ಲಿಚ್‌ಫೀಲ್ಡ್, ಹರ್ಲೀನ್ ಡಿಯೋಲ್, ಆಶ್ಲೇ ಗಾರ್ಡ್ನರ್, ದಯಾಳನ್ ಹೇಮಲತಾ, ಸ್ನೇಹ್ ರಾಣಾ, ತನುಜಾ ಕನ್ವರ್, ಕ್ಯಾಥರೀನ್ ಬ್ರೈಸ್, ಲೀ ತಹುಹು, ಮೇಘನಾ ಸಿಂಗ್.

ಆರ್‌ಸಿಬಿ : ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಸಬ್ಬಿನೇನಿ ಮೇಘನಾ, ಎಲ್ಲಿಸ್ ಪೆರ್ರಿ, ರಿಚಾ ಘೋಷ್ (ವಿಕೆಟ್ ಕೀಪರ್​), ಸೋಫಿ ಮೊಲಿನೆಕ್ಸ್, ಜಾರ್ಜಿಯಾ ವೇರ್ಹ್ಯಾಮ್, ಶ್ರೇಯಾಂಕಾ ಪಾಟೀಲ್, ಸಿಮ್ರಾನ್ ಬಹದ್ದೂರ್, ಆಶಾ ಶೋಭನಾ, ರೇಣುಕಾ ಠಾಕೂರ್ ಸಿಂಗ್.

Story first published: Tuesday, February 27, 2024, 12:08 [IST]
Other articles published on Feb 27, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+