For Quick Alerts
ALLOW NOTIFICATIONS  
For Daily Alerts
 

WPL 2024: ಫೈನಲ್ ಪಂದ್ಯದಲ್ಲಿ ಮಾರಕ ದಾಳಿ ನಡೆಸಿದ ಕನ್ನಡತಿ ಶ್ರೇಯಾಂಕಾ ಪಾಟೀಲ್

ಮಹಿಳಾ ಪ್ರೀಮಿಯರ್ ಲೀಗ್ ನ ಫೈನಲ್ ನಲ್ಲಿ ಭರ್ಜರಿ ಪ್ರದರ್ಶನ ನೀಡಿದ ಆರರ್ ಸಿಬಿ ಬೌಲರ್ಸ್ ಮಿಂಚಿದ್ದಾರೆ. ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಳಸಿಕೊಂಡ ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಹತ್ವದ ಸಾಧನೆ ಮಾಡಿದ್ದಾರೆ.‌ಅಲ್ಲದೆ ಪರ್ಪಲ್ ಕ್ಯಾಪ್ ನ್ನು ಪಡೆದ ಕೀರ್ತಿಗೆ ಭಾಜನರಾಗಿದ್ದಾರೆ.

ಮಹಿಳಾ ಪ್ರೀಮಿಯರ್ ಲೀಗ್ 2024 ರ ಫೈನಲ್ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಟಾಸ್ ಗೆದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಆದರೆ ಆರ್‌ಸಿಬಿ ಬೌಲರ್‌ಗಳ ಮುಂದೆ ಡೆಲ್ಲಿ ಕ್ಯಾಪಿಟಲ್ಸ್ ಆಸೆ‌ ಮಣ್ಣು ಪಾಲಾಗಿದೆ. ಡೆಲ್ಲಿ 18.3 ಓವರ್‌ಗಳಲ್ಲಿ 113 ರನ್‌ಗಳಿಗೆ ಇಳಿಸಲಾಯಿತು. ಈ ವೇಳೆ ಆರ್‌ಸಿಬಿಯ ಶ್ರೇಯಾಂಕಾ ಪಾಟೀಲ್ ಐತಿಹಾಸಿಕ ಸಾಧನೆ ಮಾಡಿದರು.

WPL 2024 shreyanka patilshreyanka patil Revealed in Finals

21 ವರ್ಷದ ಶ್ರೇಯಾಂಕಾ ಪಾಟೀಲ್ ಈ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಮಾಡಿದರು. ಅವರು RCB ತಂಡದ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡರು. ಇವರು 3.3 ಓವರ್ ಗಳಲ್ಲಿ 12 ರನ್ ನೀಡಿ ನಾಲ್ಕು ವಿಕೆಟ್ ಪಡೆದರು. ಇದರೊಂದಿಗೆ ಮಹಿಳಾ ಪ್ರೀಮಿಯರ್ ಲೀಗ್ ನ ಅಂತಿಮ ಪಂದ್ಯದಲ್ಲಿ ಅತ್ಯುತ್ತಮ ಸ್ಪೆಲ್ ಮಾಡಿದ ಬೌಲರ್ ಎಂಬ ಹೆಗ್ಗಳಿಕೆಗೂ ಶ್ರೇಯಾಂಕಾ ಪಾಟೀಲ್ ಪಾತ್ರರಾದರು.

ಈ ಮೊದಲು ಈ ದಾಖಲೆ ಮುಂಬೈ ಇಂಡಿಯನ್ಸ್‌ನ ಹ್ಯಾಲಿ ಮ್ಯಾಥ್ಯೂಸ್ ಹೆಸರಿನಲ್ಲಿತ್ತು. 2023 ರ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಹೇಯ್ಲಿ ಮ್ಯಾಥ್ಯೂಸ್ 4 ಓವರ್‌ಗಳಲ್ಲಿ 5 ರನ್‌ಗಳಿಗೆ 3 ವಿಕೆಟ್ ಪಡೆದಿದ್ದರು.

ಈ ಪಂದ್ಯದಲ್ಲಿ ಶ್ರೇಯಾಂಕಾ ಪಾಟೀಲ್ ಹೊರತಾಗಿ ಸೋಫಿ ಮೊಲಿನೋ ಕೂಡ ಅದ್ಭುತ ಬೌಲಿಂಗ್ ಮಾಡಿದ್ದಾರೆ. 4 ಓವರ್‌ಗಳಲ್ಲಿ 20 ರನ್‌ ನೀಡಿ 3 ವಿಕೆಟ್‌ ಪಡೆದರು. ವಿಶೇಷವೆಂದರೆ ಸೋಫಿ ಮೊಲಿನೊ ಒಂದೇ ಓವರ್‌ನಲ್ಲಿ ಎಲ್ಲಾ ಮೂರು ವಿಕೆಟ್‌ಗಳನ್ನು ಪಡೆದರು. ಇದಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ವೇಗವಾಗಿ ರನ್ ಗಳಿಸುತ್ತಿತ್ತು. ಆದರೆ ಸೋಫಿ ಮೊಲಿನೊ ಒಂದೇ ಓವರ್‌ನಲ್ಲಿ ಇಡೀ ಆಟವನ್ನು ಬದಲಾಯಿಸಿದರು.

Story first published: Sunday, March 17, 2024, 23:25 [IST]
Other articles published on Mar 17, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+