WPL 2024: ವಿಡಿಯೋ ಕಾಲ್ ಮಾಡಿ WPL ಚಾಂಪಿಯನ್ನರನ್ನು ಅಭಿನಂಧಿಸಿದ ವಿರಾಟ್ ಕೊಹ್ಲಿ
16 ವರ್ಷವೂ ಈ ಬಾರಿ ಕಪ್ ನಮ್ದೇ ಎಂದು ಹೇಳುತ್ತಿದ್ದ ಅಭಿಮಾನಿಗಳ ಟ್ಯಾಗ್ ಲೈನ್‌ನ್ನು ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಆರ್‌ಸಿಬಿ ವನಿತೆಯರು ನಿಜ ಮಾಡಿದ್ದಾರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಫೈನಲ್‌ನಲ್ಲಿ ಮಣಿಸಿದ ಸ್ಮೃತಿ ಮಂಧನಾ ತಂಡ ಮಹಿಳಾ ಪ್ರೀಮಿಯರ್ ಲೀಗ್‌ನ ಪ್ರಶಸ್ತಿಯನ್ನು ಪಡೆದು ಬೀಗಿದೆ.
ಮೊದಲ ಬೌಲಿಂಗ್ ನಲ್ಲಿ ಸೋಫಿ ಮೌಲಿನೌ ಒಂದೇ ಓವರ್ ನಲ್ಲಿ 3 ವಿಕೆಟ್ ಕಬಳಿಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಆಘಾತ ನೀಡಿದರೆ, ಶ್ರೇಯಾಂಕಾ ಪಾಟೀಲ್ 4 ವಿಕೆಟ್ ಕಬಳಿಸಿ ಎದುರಾಳಿಗೆ ಕಾಡಿದರು. ಆರ್‌ಸಿಬಿ ಪರವಾಗಿ ನಾಯಕಿ ಸ್ಮೃತಿ ಮಂಧಾನ, ಸೋಫಿ ಡಿವೈನ್ ಮತ್ತು ಎಲ್ಲಿಸ್ ಪೆರ್ರಿ ಅವರು ಅದ್ಭುತ ಬ್ಯಾಟಿಂಗ್ ನಡೆಸಿ ತಂಡಕ್ಕೆ ಆಧಾರವದರು. ಅಲ್ಲದೆ ಆರ್‌ಸಿಬಿ ಚೊಚ್ಚಲ ಚಾಂಪಿಯನ್ ಪಟ್ಟವನ್ನು ತೊಡಿಸುವಲ್ಲಿ ಸಫಲರಾದರು. ಈ ಗೆಲುವಿಗೆ ಸಾಮಾಜಿಕ ಜಾಲತಾಣಗಳಲ್ಲಿ ಆರ್‌ಸಿಬಿ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

ಮಹಿಳಾ ಪ್ರೀಮಿಯರ್ ಲೀಗ್‌ನ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲುವು ಸಾಧಿಸಿದ ಬೆನ್ನಲ್ಲೇ ವಿರಾಟ್ ಕೊಹ್ಲಿ ಮಹಿಳಾ ತಂಡಕ್ಕೆ ವಿಡಿಯೋ ಕರೆ ಮಾಡಿ ಅಭಿನಂದಿಸಿದ್ದಾರೆ. ವಿರಾಟ್ ಕೊಹ್ಲಿ ತಂಡದ ನಾಯಕಿ ಸ್ಮೃತಿ ಮಂಧಾನ ಅವರೊಂದಿಗೆ ಮಾತನಾಡಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಪುರುಷರಿಗೆ ಬೂಸ್ಟ್
ಆರ್‌ಸಿಬಿ ಪುರುಷರ ತಂಡ ಕಳೆದ 16 ವರ್ಷಗಳಿಂದ ಐಪಿಎಲ್‌ನಲ್ಲಿ ಅಡಿದ್ದು ಒಮ್ಮೆಯೂ ಪ್ರಶಸ್ತಿಯನ್ನು ಎತ್ತಿಲ್ಲ. ನಿಜಕ್ಕೂ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಆರ್‌ಸಿಬಿ ಗೆಲುವು ಪುರುಷರ ತಂಡಕ್ಕೆ ಬೂಸ್ಟ್ ಸಿಗಲಿದೆ. ಮಾರ್ಚ್ 22 ರಿಂದ ಐಪಿಎಲ್‌ನಲ್ಲಿ ಆಡಲು ತಂಡವು ಸಕಲ ರೀತಿಯಲ್ಲಿ ಸಿದ್ಧವಾಗಿದೆ. ವಿರಾಟ್ ಕೊಹ್ಲಿ ಕೂಡ ಐಪಿಎಲ್‌ನಲ್ಲಿ ಭಾರತಕ್ಕೆ ಮರಳಿದ್ದು, ಶೀಘ್ರದಲ್ಲೇ ತಂಡವನ್ನು ಸೇರಿಕೊಳ್ಳಬಹುದು. RCB ಒಟ್ಟು ಮೂರು ಬಾರಿ IPL ಫೈನಲ್‌ಗೆ ಅರ್ಹತೆ ಪಡೆದಿತ್ತು, ಆದರೆ ಪ್ರತಿ ಬಾರಿ ನಿರಾಸೆಯನ್ನು ಎದುರಿಸಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications