WPL 2025: ವಾರಿಯರ್ಸ್ ವಿರುದ್ಧ ಆರ್‌ಸಿಬಿಗೆ ಮಾಡು ಇಲ್ಲವೇ ಮಡಿ ಪಂದ್ಯ
ಮಹಿಳಾ ಪ್ರೀಮಿಯರ್ ಲೀಗ್ 2025ರ ಟೂರ್ನಿಯಿಂದ ಹೊರಬೀಳುವ ಭೀತಿಯಲ್ಲಿರುವ ಯುಪಿ ವಾರಿಯರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಶನಿವಾರ ಮುಖಾಮುಖಿಯಾಗಲಿವೆ. ಆರ್‌ಸಿಬಿ ಮತ್ತು ಯುಪಿ ವಾರಿಯರ್ಸ್ ನಡುವಿನ ಡಬ್ಲ್ಯೂಪಿಎಲ್ 2025ರ 18ನೇ ಪಂದ್ಯ ಮಾರ್ಚ್ 8 ರಂದು ಲಕ್ನೋದ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡಯಲಿದೆ. ಇದು ಆರ್‌ಸಿಬಿ ತಂಡಕ್ಕೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಯುಪಿ ಕೂಡ ಗೆಲುವಿನ ನಿರೀಕ್ಷೆಯಲ್ಲಿದೆ.
ಯುಪಿ ತಂಡವು ಹಲವು ಗೆಲ್ಲುವ ಅವಕಾಶಗಳನ್ನು ಕಳೆದುಕೊಂಡಿದೆ. ಆರ್‌ಸಿಬಿ ತಂಡವೂ ಸತತ ಸೋಲುಗಳಿಂದ ಕಂಗೆಟ್ಟಿದ್ದು, ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಳ್ಳಲು ಇನ್ನೊಂದು ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಕಳೆದ ಪಂದ್ಯದಲ್ಲಿ ಸೂಪರ್ ಓವರ್‌ನಲ್ಲಿನ ಸೋಲಿಗೆ ಯುಪಿ ವಿರುದ್ಧ ಸೇಡಿಗೆ ಆರ್‌ಸಿಬಿ ಸಜ್ಜಾಗಿದೆ.

ಆರ್‌ಸಿಬಿ ತಂಡ ಆಡಿರುವ ಆರು ಪಂದ್ಯಗಳಲ್ಲಿ ಎರಡರಲ್ಲಿ ಗೆದ್ದರೆ, ಸತತ ನಾಲ್ಕರಲ್ಲಿ ಸೋಲು ಕಂಡಿದೆ. ಇದೊಂದಿಗೆ ಆರ್‌ಸಿಬಿ ನಾಲ್ಕನೇ ಸ್ಥಾನದಲ್ಲಿದೆ. ಯುಪಿ ವಾರಿಯರ್ಜ್ ತಂಡ ಇದುವರೆಗೆ ಏಳು ಪಂದ್ಯಗಳಲ್ಲಿ ಎರಡರಲ್ಲಿ ಮಾತ್ರ ಗೆದ್ದಿದ್ದು, ಐದರಲ್ಲಿ ಸೋತಿದೆ.
ಡಬ್ಲ್ಯೂಪಿಎಲ್ ಇತಿಹಾಸದಲ್ಲಿ ಯುಪಿ ವಾರಿಯರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಒಟ್ಟು ಐದು ಪಂದ್ಯಗಳು ನಡೆದಿವೆ. ಇದರಲ್ಲಿ ಆರ್‌ಸಿಬಿ ಮೂರು ಪಂದ್ಯಗಳನ್ನು ಗೆದ್ದರೆ, ಯುಪಿ ಎರಡು ಪಂದ್ಯಗಳಲ್ಲಿ ಮಾತ್ರ ಗೆದ್ದಿದೆ.
ಮಾಡು ಇಲ್ಲವೆ ಮಡಿ
ಶುಕ್ರವಾರ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಜೈಂಟ್ಸ್ ಗೆದ್ದಿರುವ ಕಾರಣ, ಉಭಯ ತಂಡಗಳು ಇದೀಗ ಪಾಯಿಂಟ್ ಪಟ್ಟಿಯಲ್ಲಿ ಮೊದಲೆರಡು ಸ್ಥಾನದಲ್ಲಿವೆ. ಉಳಿದಂತೆ ಮುಂಬೈ ಇಂಡಿಯನ್ಸ್ ಮೂರನೇ ಸ್ಥಾನದಲ್ಲಿದ್ದರೆ, ಆರ್‌ಸಿಬಿ ನಾಲ್ಕನೇ ಸ್ಥಾನದಲ್ಲಿದೆ.
ಡೆಲ್ಲಿ ಹೊರತುಪಡಿಸಿ ಯಾವ ತಂಡವೂ ಪ್ಲೇಆಫ್‌ಗೆ ಅರ್ಹತೆ ಪಡೆದಿಲ್ಲ. ಇದೀಗ ಉಳಿದಿರುವ ಎರಡು ಪಂದ್ಯಗಳಲ್ಲಿ ಆರ್‌ಸಿಬಿ ಗೆಲ್ಲಲೇಬೇಕಾಗಿದೆ. ಅದರಲ್ಲೂ ಆರ್‌ಸಿಬಿ ಉತ್ತಮ ರನ್ ರೇಟ್ ಮೂಲಕ ಗೆಲ್ಲಬೇಕಾಗಿದೆ. ಏಕೆಂದರೆ ಆರ್‌ಸಿಬಿಗೆ ಹೋಲಿಸಿದರೆ, ಮುಂಬೈ ಹಾಗೂ ಗುಜರಾತ್ ತಂಡದ ನೆಟ್ ರನ್ ರೇಟ್ ಉತ್ತಮವಾಗಿದೆ. ಹೀಗಾಗಿ ಆರ್‌ಸಿಬಿ ಎರಡು ಪಂದ್ಯಗಳಲ್ಲಿ ಭಾರಿ ಅಂತರದ ಗೆಲುವನ್ನು ಸಾಧಿಸಬೇಕಿದೆ. ಇದರಲ್ಲಿ ಒಂದು ಪಂದ್ಯ ಸೋತರೂ ಆರ್‌ಸಿಬಿ ಪ್ಲೇ ಆಫ್ ರೇಸ್‌ನಿಂದ ಹೊರಗುಳಿಯಲಿದೆ. ಹೀಗಾಗಿ ಯುಪಿ ವಿರುದ್ಧದ ಪಂದ್ಯ ಆರ್‌ಸಿಬಿಗೆ ಮಾಡು ಇಲ್ಲವೆ ಮಡಿ ಆಗಿದೆ.
ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್-11
ಯುಪಿ ವಾರಿಯರ್ಸ್: ಅಲಿಸಾ ಹೀಲಿ (ನಾಯಕಿ/ವಿಕೆಟ್ ಕೀಪರ್), ಶ್ವೇತಾ ಸೆಹ್ರಾವತ್, ಕಿರಣ್ ನವಗಿರೆ, ತಹ್ಲಿಯಾ ಮೆಕ್‌ಗ್ರಾತ್, ದೀಪ್ತಿ ಶರ್ಮಾ, ಗ್ರೇಸ್ ಹ್ಯಾರಿಸ್, ದೇವಿಕಾ ವೈದ್ಯ, ಸಿಮ್ರಾನ್ ಶೇಖ್, ಸೋಫಿ ಎಕ್ಲೆಸ್ಟೋನ್, ಅಂಜಲಿ ಸರ್ವಾನಿ, ರಾಜೇಶ್ವರಿ ಗಾಯಕ್ವಾಡ್.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಎಲಿಸ್ ಪೆರ್ರಿ, ಹೀದರ್ ನೈಟ್, ರಿಚಾ ಘೋಷ್ (ವಿಕೆಟ್ ಕೀಪರ್), ಎರಿನ್ ಬರ್ನ್ಸ್, ಶ್ರೇಯಾಂಕ ಪಾಟೀಲ್, ಕನಿಕಾ ಅಹುಜಾ, ಸಹನಾ ಪವಾರ್, ಕೋಮಲ್ ಜಂಜಾದ್, ರೇಣುಕಾ ಠಾಕೂರ್ ಸಿಂಗ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications