WPL 2025 RCB VS GG: ಆರ್‌ಸಿಬಿಗೆ ಗೆಲವೊಂದೆ ಟಾರ್ಗೆಟ್: ಯಾರಾ ಪಾಲಾಗುತ್ತೇ ಹ್ಯಾಟ್ರಿಕ್ ಸೋಲು
ಬೆಂಗಳೂರಿನಲ್ಲಿ ನಡೆಯುತ್ತಿರುವ ಮೂರನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಗುರುವಾರ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾಟ್ ಜೈಂಟ್ಸ್ ತಂಡಗಳು ಕಾದಾಟ ನಡೆಸಲಿವೆ. ತವರಿನಲ್ಲಿ ಆರ್‌ಸಿಬಿ ತಂಡ ಮೊದಲ ಗೆಲುವಿನ ಹುಡುಕಾಟದಲ್ಲಿದೆ. ಉಭಯ ತಂಡಗಳು ಸತತ ಎರಡು ಸೋಲು ಕಂಡಿದ್ದು, ಹ್ಯಾಟ್ರಿಕ್ ಸೋಲಿನ ಭೀತಿಯಲ್ಲಿದೆ. ಆರ್‌ಸಿಬಿ ತಂಡ ಈ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿ ಗೆಲುವಿನ ಟ್ರ್ಯಾಕ್‌ಗೆ ಮರಳುವ ಪ್ಲ್ಯಾನ್ ಮಾಡಿಕೊಂಡಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಿರುವ 4 ಪಂದ್ಯಗಳಲ್ಲಿ 2 ಗೆಲುವು, 2 ಸೋಲು ಕಂಡಿದ್ದು, 4 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿದೆ. ಇನ್ನು ಗುಜರಾತ್ ಜೈಂಟ್ಸ್ ಆಡಿರುವ 4 ಪಂದ್ಯಗಳಲ್ಲಿ 1 ಗೆಲುವು 3 ಸೋಲು ಕಂಡಿದ್ದು, 2 ಅಂಕಗಳೊಂದಿಗೆ ಕೊನೆಯ ಸ್ಥಾನದಲ್ಲಿದೆ.

ಗೆಲುವೊಂದೆ ಟಾರ್ಗೆಟ್
ಬೆಂಗಳುರು ತಂಡ ತವರಿನಲ್ಲಿ ಮೊದಲ ಗೆಲುವಿನ ಕನಸು ಕಾಣುತ್ತಿದೆ. ಈ ಪಂದ್ಯದಲ್ಲಿ ಆರ್‌ಸಿಬಿ ಕಳೆದ ಎರಡು ಪಂದ್ಯಗಳಲ್ಲಿ ಮಾಡಿದ ತಪ್ಪನ್ನು ಮಾಡದಂತೆ ಎಚ್ಚರಿಕೆ ವಹಿಸಬೇಕಿದೆ. ಸ್ಟಾರ್ ಆಟಗಾರ್ತಿ ಎಲ್ಲಿಸಾ ಪೆರ್ರಿ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿದ್ದು, ತಂಡಕ್ಕೆ ಆಧಾರವಾಗಿದ್ದಾರೆ. ಆರಂಭಿಕ ಆಟಗಾರ್ತಿ ಹಾಗೂ ನಾಯಕಿ ಸ್ಮೃತಿ ಮಂಧನಾ ಸ್ಥಿರ ಪ್ರದರ್ಶನ ನೀಡುವಲ್ಲಿ ಎಡವುತ್ತಿದ್ದಾರೆ. ಕಳೆದ ಪಂದ್ಯದಲ್ಲಿ ಅರ್ಧಶತಕ ಬಾರಿಸಿರುವ ಡ್ಯಾನಿ ವೈಟ್ ಅವರ ಮೇಲೆ ಭರವಸೆ ಹೆಚ್ಚಿದೆ. ಮಧ್ಯಮ ಕ್ರಮಾಂಕದಲ್ಲಿ ರಿಚಾ ಘೋಷ್ ಸಮಯೋಚಿತ ಬ್ಯಾಟಿಂಗ್ ನಡೆಸಬೇಕಿದೆ.
ಉಳಿದ ಆಟಗಾರರು ತಂಡ ತಮ್ಮ ಮೇಲೆ ಇಟ್ಟ ನಂಬಿಕೆಗೆ ಪೂರಕವಾಗಿ ಬ್ಯಾಟ್ ಮಾಡಬೇಕಿದೆ. ಆರ್‌ಸಿಬಿ ತಂಡದ ಬೌಲಿಂಗ್ ಶಕ್ತಿ ಆಗಿರುವ ರೇಣುಕಾ ಸಿಂಗ್ ಹಾಗೂ ಜಾರ್ಜಿಯಾ ವೇರ್‌ಹ್ಯಾಮ್ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡಿದ್ದಾರೆ. ಇದೇ ಪ್ರದರ್ಶನವನ್ನು ಅವರು ಮುಂದುವರೆಸಬೇಕಿದೆ. ಆಸ್ಟ್ರೇಲಿಯಾ ತಂಡದ ಆಲ್‌ರೌಂಡರ್ ಕಿಮ್ ಗ್ರಾತ್ ಸಹ ಅವಶ್ಯಕ ವಿಕೆಟ್‌ಗಳನ್ನು ಪಡೆದು, ಎದುರಾಳಿ ಬ್ಯಾಟರ್‌ಗಳಿಗೆ ಕಾಟ ನೀಡಬಲ್ಲರು. ಸ್ಪಿನ್ ಬೌಲರ್‌ಗಳು ಮಿಡ್ಲ್ ಓವರ್‌ನಲ್ಲಿ ಬಿಗುವಿನ ದಾಳಿ ನಡೆಸಬೇಕಿದೆ. ಅಂದಾಗ ಗೆಲುವಿನ ಆಸೆ ಚಿಗುರುತ್ತದೆ.

ನಾಯಕಿಯ ಬಲ
ಗುಜರಾತ್ ಟೈಟಾನ್ಸ್ ತಂಡಕ್ಕೆ ನಾಯಕಿ ಆಶ್ಲೀ ಗಾರ್ಡ್ನರ್ ಪ್ರಸಕ್ತ ಟೂರ್ನಿಯಲ್ಲಿ ಆನೆ ಬಲವನ್ನು ನೀಡಿದ ಆಟಗಾರ್ತಿ. ಇವರು ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿದ್ದು, ಎದುರಾಳಿಗಳನ್ನು ಕಾಡುತ್ತಿದ್ದಾರೆ. ಉಳಿದಂತೆ ವೆಸ್ಟ್ ಇಂಡೀಸ್ ತಂಡದ ಡಿಯಾಂಡ್ರಾ ಡಾಟಿನ್ ಹಾಗೂ ಬೇತ್ ಮೂನಿ ತಮಗೆ ಮ್ಯಾನೇಜ್ಮೆಂಟ್ ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಬೇಕಿದೆ.
ಪವರ್ ಪ್ಲೇ ಹಾಗೂ ಮಿಡ್ಲ್ ಆರ್ಡರ್‌ನಲ್ಲಿ ಬಿಗುವಿನ ದಾಳಿಯನ್ನು ನಡೆಸಬೇಕಿದೆ. ಸರಿಯಾದ ಸ್ಥಳದಲ್ಲಿ ಬೌಲಿಂಗ್ ನಡೆಸಿ ಎದುರಾಳಿಯನ್ನು ಕಟ್ಟಿಹಾಕಬೇಕಿದೆ. ಇನ್ನು ಗುರುವಾರ ಯಾವ ತಂಡ ಹ್ಯಾಟ್ರಿಕ್ ಸೋಲಿನ ಕಹಿಯನ್ನು ಅಪ್ಪಿಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications