Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WPl 2025: ಟಾಸ್ ಸೋತ ಸ್ಮೃತಿ ಮಂದಾನ; ಯುಪಿ ವಾರಿಯರ್ಸ್ ಬೌಲಿಂಗ್ ಆಯ್ಕೆ

ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುತ್ತಿರುವ ಮಹಿಳಾ ಪ್ರೀಮಿಯರ್ ಲೀಗ್‌ನ 9ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಮತ್ತು ಯುಪಿ ವಾರಿಯರ್ಸ್ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಯುಪಿ ವಾರಿಯರ್ಸ್ ನಾಯಕಿ ದೀಪ್ತಿ ಶರ್ಮಾ ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಸ್ಮೃತಿ ಮಂದಾನ ನೇತೃತ್ವದ ಆರ್‌ಸಿಬಿ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

ಕಳೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ವಿರುದ್ಧ ಆರ್‌ಸಿಬಿ ವನಿತೆಯರ ತಂಡ ಸೋಲು ಕಂಡಿದರೆ, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಯುಪಿ ವಾರಿಯರ್ಸ್ ಗೆಲುವು ಸಾಧಿಸಿದೆ.

WPL 2025 Royal Challengers Bengaluru and UP Warriors toss playing 11

ಈ ಪಂದ್ಯದಲ್ಲಿ ಯುಪಿ ವಾರಿಯರ್ಸ್ ತಂಡವನ್ನು ಮಣಿಸಿ ಗೆಲುವಿನ ಟ್ರ್ಯಾಕ್‌ಗೆ ಮರಳಲು ಸ್ಮೃತಿ ಮಂದಾನ ಪಡೆ ಸಜ್ಜಾಗಿದೆ. ಈ ಪಂದ್ಯದಲ್ಲಿ ಸ್ಮೃತಿ ಮಂಧಾನ ಮತ್ತು ಎಲಿಸ್ ಪೆರ್ರಿ ಅವರಿಂದ ಆರ್‌ಸಿಬಿ ಅಭಿಮಾನಿಗಳು ದೊಡ್ಡ ಇನ್ನಿಂಗ್ಸ್‌ಗಳನ್ನು ನಿರೀಕ್ಷಿಸುತ್ತಿದ್ದಾರೆ.

ಡಬ್ಲ್ಯೂಪಿಎಲ್ 2025ರಲ್ಲಿ ಆರ್‌ಸಿಬಿ ತಂಡ ಅದ್ಭುತ ಫಾರ್ಮ್‌ನಲ್ಲಿದೆ. ಆರ್‌ಸಿಬಿ ಆಡಿರುವ ಮೂರು ಪಂದ್ಯಗಳಲ್ಲಿ 2 ಜಯ, 1 ಸೋಲು ಕಂಡಿದ್ದು, 4 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಆಗ್ರ ಸ್ಥಾನದಲ್ಲಿದೆ. ಮತ್ತೊಂದೆಡೆ ಯುಪಿ ವಾರಿಯರ್ಸ್‌ 3 ಪಂದ್ಯಗಳಲ್ಲಿ 1 ಗೆಲುವು, 2 ಸೋಲು ಕಂಡಿದ್ದು, 2 ಅಂಕಗಳೊಂದಿಗೆ ನಾಲ್ಕನೇ ಸ್ಥಾನ ಪಡೆದುಕೊಂಡಿದೆ.

ಉಭಯ ತಂಡಗಳ ಪ್ಲೇಯಿಂಗ್-11

ರಾಯಲ್ ಚಾಲೆಂಜರ್ಸ್‌ ಬೆಂಗಳೂರು: ಸ್ಮೃತಿ ಮಂಧಾನ (ನಾಯಕ) , ಡೇನಿಯಲ್ ವ್ಯಾಟ್-ಹಾಡ್ಜ್ , ಎಲ್ಲಿಸ್ ಪೆರ್ರಿ , ರಾಘ್ವಿ ಬಿಸ್ಟ್ , ರಿಚಾ ಘೋಷ್ (ವಿಕೆಟ್ ಕೀಪರ್) , ಕನಿಕಾ ಅಹುಜಾ , ಜಾರ್ಜಿಯಾ ವಾರೆಹಮ್ , ಕಿಮ್ ಗಾರ್ತ್ , ಸ್ನೇಹ ರಾಣಾ , ಏಕ್ತಾ ಬಿಷ್ತ್ , ರೇಣುಕಾ ಸಿಂಗ್ ಠಾಕೂರ್.

ಯುಪಿ ವಾರಿಯರ್ಸ್: ಕಿರಣ್ ನವಗಿರೆ , ವೃಂದಾ ದಿನೇಶ್ , ದೀಪ್ತಿ ಶರ್ಮಾ (ನಾಯಕಿ) , ತಹ್ಲಿಯಾ ಮೆಕ್ಗ್ರಾತ್ , ಶ್ವೇತಾ ಸೆಹ್ರಾವತ್ , ಗ್ರೇಸ್ ಹ್ಯಾರಿಸ್ , ಚಿನೆಲ್ಲೆ ಹೆನ್ರಿ , ಉಮಾ ಚೆಟ್ರಿ (ವಿಕೆಟ್‌ಕೀಪರ್) , ಸೋಫಿ ಎಕ್ಲೆಸ್ಟೋನ್ , ಸೈಮಾ ಠಾಕೋರ್ , ಕ್ರಾಂತಿ ಗೌಡ್

Story first published: Monday, February 24, 2025, 19:09 [IST]
Other articles published on Feb 24, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+