Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WPL 2025: ಮುಂಬೈ ವಿರುದ್ಧದ ಗೆಲುವಿನೊಂದಿಗೆ ಆರ್‌ಸಿಬಿ ಪಯಣ ಅಂತ್ಯ

ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯೂಪಿಎಲ್) 2025ರ 20ನೇ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ವನಿತೆಯರ ತಂಡ 11 ರನ್‌ಗಳ ಜಯ ಸಾಧಿಸಿತು. ಈ ರೋಚಕ ಗೆಲುವಿನೊಂದಿಗೆ ಹಾಲಿ ಚಾಂಪಿಯನ್ ಆರ್‌ಸಿಬಿ ತಂಡ ಡಬ್ಲ್ಯೂಪಿಎಲ್ 2025ರಲ್ಲಿ ತನ್ನ ಪ್ರಯಾಣವನ್ನು ಮುಗಿಸಿದೆ. ಸತತ ಐದು ಸೋಲಿನ ನಂತರ ಆರ್‌ಸಿಬಿ ಕೊನೆಗೂ ಗೆಲುವು ಕಂಡಿದ್ದು, ಟೂರ್ನಿಯಿಂದ ಹೊರಗುಳಿದಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಬೌಲಿಂಗ್ ಮಾಡಲು ನಿರ್ಧರಿಸಿದರು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 199 ರನ್ ಗಳಿಸಿತು. ಆರ್‌ಸಿಬಿ ನೀಡಿದ 200 ರನ್‌ಗಳ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ 9 ವಿಕೆಟ್ ಕಳೆದುಕೊಂಡು 188 ರನ್ ಕಲೆ ಹಾಕಿತು. ಇದರೊಂದಿಗೆ ಆರ್‌ಸಿಬಿ 11 ರನ್‌ಗಳ ಗೆಲುವಿನ ನಗೆ ಬೀರಿತು.

WPL 2025 Royal Challengers Bengaluru bid farewell with win against Mumbai Indians

ಆರ್‌ಸಿಬಿ ವಿರುದ್ಧದ ಸೋಲಿನಿಂದ ಮುಂಬೈ ಇಂಡಿಯನ್ಸ್ ಹಿನ್ನಡೆ ಅನುಭವಿಸಿದೆ. ಆರ್‌ಸಿಬಿ ಮಣಿಸಿ ನೇರವಾಗಿ ಫೈನಲ್‌ ತಲುಪುವ ಮುಂಬೈ ಕನಸು ಭಗ್ನಗೊಂಡಿದೆ. ಆದರೆ ಅಂಕಪಟ್ಟಿಯಲ್ಲಿ ಆಗ್ರ ಸ್ಥಾನದಲ್ಲಿದ್ದ ಡೆಲ್ಲಿ ಕ್ಯಾಪಿಟಲ್ಸ್ ಫೈನಲ್‌ಗೆ ಲಗ್ಗೆ ಇಟ್ಟಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ಪರ ನಾಯಕಿ ಸ್ಮೃತ ಮಂಧಾನ, ಎಲ್ಲಿಸ್ ಪೆರ್ರಿ, ರಿಚಾ ಘೋಷ್ ಮತ್ತು ಜಾರ್ಜಿಯಾ ವೇರ್‌ಹ್ಯಾಮ್ ಬಿರುಸಿನ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಶಬ್ಬನೇನಿ ಮೇಘನಾ 13 ಎಸೆತಗಳಲ್ಲಿ 26 ರನ್ ಗಳಿಸಿ ತಂಡಕ್ಕೆ ಬಲ ತುಂಬಿದರು. ಸ್ಮೃತಿ ಮಂಧಾನ ಕೇವಲ 37 ಎಸೆತಗಳಲ್ಲಿ 6 ಬೌಂಡರಿ ಮತ್ತು 3 ಸಿಕ್ಸರ್ ನೆರವಿನಿದ 53 ರನ್ ಗಳಿಸಿ ಅಮೋಘ ಇನ್ನಿಂಗ್ಸ್ ಆಡಿದರು.

ಎಲ್ಲಿಸ್ ಪೆರ್ರಿ ಕೂಡ 38 ಎಸೆತಗಳಲ್ಲಿ 5 ಬೌಂಡರಿ ಹಾಗು 1 ಸಿಕ್ಸರ್ ಸಹಾಯದಿಂದ ಅಜೇಯ 49 ರನ್ ಗಳಿಸಿದರು. ರಿಚ್ ಘೋಷ್ (36) ಮತ್ತು ಜಾರ್ಜಿಯಾ ವೇರ್‌ಹ್ಯಾಮ್ (31) ಕೂಡ ಸ್ಪೋಟಕ ಬ್ಯಾಟಿಂಗ್ ಮಾಡಿದರು. ಪರಿಣಾಮ ಆರ್‌ಸಿಬಿ 199 ರನ್‌ಗಳ ಬೃಹತ್ ಮೊತ್ತ ಕಲೆ ಹಾಕಿತು.

ಆರ್‌ಸಿಬಿ ಗುರಿ ಬೆನ್ನಟ್ಟಿದ ಮುಂಬೈ ಪರ ನಟಾಲಿ ಸೀವರ್ ಕೇವಲ 35 ಎಸೆತಗಳಲ್ಲಿ 9 ಬೌಂಡರಿ ಮತ್ತು 2 ಸಿಕ್ಸರ್‌ಗಳ ನೆರವಿನಿಂದ 69 ರನ್ ಗಳಿಸಿ ಅದ್ಭುತ ಇನ್ನಿಂಗ್ಸ್ ಆಡಿದರು. ಆದರೆ ನಟಾಲಿ ಸೀವರ್ ಅವರಿಗೆ ಇತರ ಬ್ಯಾಟರ್‌ಗಳಿಂದ ಬೆಂಬಲ ಸಿಗಲಿಲ್ಲ. ಇದರಿಂದಾಗಿ ಮುಂಬೈ ಸೋಲನ್ನು ಎದುರಿಸಬೇಕಾಯಿತು. ನಟಾಲಿ ಸೀವರ್ ತಮ್ಮ ಅದ್ಭುತ ಇನ್ನಿಂಗ್ಸ್ ಮೂಲಕ ದಾಖಲೆ ಮಾಡಿದರು. ಡಬ್ಲ್ಯೂಪಿಎಲ್ ಇತಿಹಾಸದಲ್ಲಿ ಒಂದೇ ಆವೃತ್ತಿಯಲ್ಲಿ 400ಕ್ಕೂ ಹೆಚ್ಚು ರನ್ ಗಳಿಸಿದ ಮೊದಲ ಆಟಗಾರ್ತಿ ಎನಿಸಿಕೊಂಡರು.

Story first published: Tuesday, March 11, 2025, 23:21 [IST]
Other articles published on Mar 11, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+