RCB vs DC WPL 2025: ಆರ್‌ಸಿಬಿ ವನಿತೆಯರ ಕೈ ಹಿಡಿಯುತ್ತಾ ಗೆಲುವಿನ ಅದೃಷ್ಟ?
ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ತಂಡಗಳು ನಡೆಯಲಿರುವ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯೂಪಿಎಲ್)ನ 14ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಉಭಯ ಬಲಿಷ್ಠ ತಂಡಗಳಿಗೆ ಇದು ಮಹತ್ವದ ಪಂದ್ಯಯಾಗಿದೆ.
ತವರಿನಲ್ಲಿ ಹ್ಯಾಟ್ರಿಕ್ ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಆರ್‌ಸಿಬಿ ಗೆಲುವಿನ ಹುಡುಕಾಟದಲ್ಲಿದೆ. ಇತ್ತ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಡೆಲ್ಲಿ ತಂಡ ಮತ್ತೊಂದು ಗೆಲುವಿನೊಂದಿಗೆ ಮುನ್ನಡೆಯುವ ನಿರೀಕ್ಷೆಯಲ್ಲಿದೆ.

ಆರ್‌ಸಿಬಿ ತನ್ನ ಮೊದಲ ಎರಡು ಪಂದ್ಯಗಳಲ್ಲಿ ಗೆದ್ದು ಚಾಂಪಿಯನ್ ಆಟ ಪ್ರದರ್ಶಿಸಿತ್ತು. ಆದರೆ, ಆರ್‌ಸಿಬಿ ತಮ್ಮ ಗೆಲುವಿನ ವೇಗವನ್ನು ಮುಂದುವರಿಸುವಲ್ಲಿ ವಿಫಲವಾಯಿತು. ಆರ್‌ಸಿಬಿ ತವರಿನಲ್ಲಿ ಮೂರು ಪಂದ್ಯಗಳಲ್ಲಿ ಸೋಲು ಕಂಡಿದೆ. ಈಗ ಆರ್‌ಸಿಬಿ ಕೈಯಲ್ಲಿ ಮೂರು ಲೀಗ್ ಪಂದ್ಯಗಳು ಮಾತ್ರ ಉಳಿದಿವೆ. ಇಂತಹ ಪರಿಸ್ಥಿತಿಯಲ್ಲಿ ಗೆಲುವಿನ ಹಾದಿಗೆ ಮರಳುವುದು ಮುಖ್ಯವಾಗಿದೆ.
ಡೆಲ್ಲಿ ಕ್ಯಾಪಿಟಲ್ಸ್ ತನ್ನ ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿದ ಆತ್ಮವಿಶ್ವಾಸದಲ್ಲಿದೆ. ಡೆಲ್ಲಿ ಪ್ರಸ್ತುತ 4 ಗೆಲುವುಗಳು ಮತ್ತು2 ಸೋಲುಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಡಬ್ಲ್ಯೂಪಿಎಲ್ 2025ರಲ್ಲಿ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಕೊನೆಯ ಪಂದ್ಯಕ್ಕೂ ಮುನ್ನ ಮೆಗ್ ಲ್ಯಾನಿಂಗ್ ನೇತೃತ್ವದ ಡೆಲ್ಲಿ ಮತ್ತೊಂದು ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ತನ್ನ ಸ್ಥಾನವನ್ನು ಉಳಿಸಿಕೊಳ್ಳುವ ಭರವಸೆಯಲ್ಲಿದೆ.
ಹೆಡ್ ಟು ಹೆಡ್
ಡಬ್ಲ್ಯೂಪಿಎಲ್ ಇತಿಹಾಸದಲ್ಲಿ ಆರ್‌ಸಿಬಿ ಮತ್ತು ಡೆಲ್ಲಿ ತಂಡಗಳು ಒಟ್ಟು ಆರು ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಆರ್‌ಸಿಬಿ ಎದುರು ಡೆಲ್ಲಿ ಪ್ರಾಬಲ್ಯ ಸಾಧಿಸಿದೆ. ಡೆಲ್ಲಿ 4 ರಲ್ಲಿ ಗೆದ್ದರೆ, ಆರ್‌ಸಿಬಿ 2ರಲ್ಲಿ ಗೆದ್ದಿದೆ.
ಉಭಯ ತಂಡಗಳ ಪ್ಲೇಯಿಂಗ್-11
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಸ್ಮೃತಿ ಮಂಧಾನ (ನಾಯಕ), ಡ್ಯಾನಿ ವ್ಯಾಟ್-ಹಾಡ್ಜ್, ಎಲ್ಲಿಸ್ ಪೆರ್ರಿ, ರಿಚಾ ಘೋಷ್ (ವಿಕೆಟ್‌ಕೀಪರ್), ಕನಿಕಾ ಅಹುಜಾ, ಜಾರ್ಜಿಯಾ ವಾರೆಹಮ್, ರಾಘ್ವಿ ಆನಂದ್ ಬಿಸ್ಟ್, ಕಿಮ್ ಗಾರ್ತ್, ಸ್ನೇಹ ರಾಣಾ, ಪ್ರೇಮಾ ಮತ್ತು ರೇಣುಕಾ ಸಿಂಗ್ ಠಾಕೂರ್.
ಡೆಲ್ಲಿ ಕ್ಯಾಪಿಟಲ್ಸ್: ಶಫಾಲಿ ವರ್ಮಾ, ಮೆಗ್ ಲ್ಯಾನಿಂಗ್ (ನಾಯಕ), ಜೆಮಿಮಾ ರಾಡ್ರಿಗಸ್, ಮರಿಜಾನ್ನೆ ಕಪ್, ಅನ್ನಾಬೆಲ್ ಸದರ್ಲ್ಯಾಂಡ್, ಜೆಸ್ ಜೊನಾಸೆನ್, ಸಾರಾ ಬ್ರೈಸ್ (ವಿಕೆಟ್‌ಕೀಪರ್), ನಿಕಿ ಪ್ರಸಾದ್, ಶಿಖಾ ಪಾಂಡೆ, ಮಿನ್ನು ಮಣಿ ಮತ್ತು ಟಿಟಾಸ್ ಸಾಧು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications