WPL 2026: ಹರ್ಮನ್ ಪ್ರೀತ್ ಏಕಾಂಗಿ ಹೋರಾಟ ವ್ಯರ್ಥ: ಗುಜರಾತ್ ಪ್ಲೇ-ಆಫ್‌ಗೆ ಪ್ರವೇಶ
ವಡೋದಾರ: ನಾಯಕಿ ಹರ್ಮನ್ ಪ್ರೀತ್ ಕೌರ್ ಬಾರಿಸಿದ ಅರ್ಧಶತಕ ಮುಂಬೈ ಇಂಡಿಯನ್ಸ್ ಗೆಲುವಿಗೆ ಕಾರಣವಾಗಲಿಲ್ಲ. ನಾಲ್ಕನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಗುಜರಾತ್ ಜೈಂಟ್ಸ್ ಭರ್ಜರಿ ಜಯ ಸಾಧಿಸಿದೆ. ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಅಬ್ಬರಿಸಿದ ಆಶ್ಲೀ ಗಾರ್ಡ್ನರ್ ಪಡೆ ಪ್ಲೇ ಆಫ್ ಪ್ರವೇಶ ಪಡೆದಿದೆ. ಮುಂಬೈ ಇಂಡಿಯನ್ಸ್ 11 ರನ್‌ಗಳಿಂದ ಸೋಲು ಕಂಡಿದೆ. ಇನ್ನು ಗುಜರಾತ್ ಜೈಂಟ್ಸ್ ಡಬ್ಲ್ಯೂಪಿಎಲ್‌ನಲ್ಲಿ ಇದೇ ಮೊದಲ ಬಾರಿಗೆ ಮುಂಬೈ ಇಂಡಿಯನ್ಸ್ ವಿರುದ್ಧ ಜಯ ಸಾಧಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಗುಜರಾತ್ ಜೈಂಟ್ಸ್ ತಂಡದ ಆರಂಭ ಕಳಪೆಯಾಗಿತ್ತು. ಆರಂಭಿಕ ಆಟಗಾರ್ತಿ ಬೆತ್ ಮೂನಿ (5) ಬಿಗ್ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾದರು. ಎರಡನೇ ವಿಕೆಟ್‌ಗೆ ಆರಂಭಿಕ ಆಟಗಾರ್ತಿ ಸೋಫಿ ಡಿವೈನ್ (25) ಹಾಗೂ ಅನುಷ್ಕಾ ಶರ್ಮಾ (33) ಜೋಡಿ ಉತ್ತಮ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿ 48 ರನ್ ಜೊತೆಯಾಟದ ಕಾಣಿಕೆ ನೀಡಿತು.

4ನೇ ವಿಕೆಟ್‌ಗೆ ನಾಯಕಿ ಆಶ್ಲೀ ಗಾರ್ಡ್ನರ್ ಹಾಗೂ ಮಧ್ಯಮ ಕ್ರಮಾಂಕದ ಸ್ಟಾರ್ ಆಟಗಾರ್ತಿ ಜಾರ್ಜಿಯಾ ವೇರ್‌ಹ್ಯಾಮ್ ಜೋಡಿ ಉತ್ತಮ ಜೊತೆಯಾಟವನ್ನು ನೀಡಿತು. ಈ ಜೋಡಿ 43 ಎಸೆತಗಳಲ್ಲಿ 71 ರನ್ ಸೇರಿಸಿತು. ಆಶ್ಲೀ ಗಾರ್ಡ್ನರ್ 4 ಬೌಂಡರಿ, 1 ಸಿಕ್ಸರ್ ಸಹಾಯದಿಂದ 46 ರನ್ ಬಾರಿಸಿದರು. ಜಾರ್ಜಿಯಾ ವೇರ್‌ಹ್ಯಾಮ್ ಅಜೇಯ 44 ರನ್ ಸಿಡಿಸಿದು. ಇವರ ಕ್ಲಾಸಿಕ್ ಇನಿಂಗ್ಸ್‌ನಲ್ಲಿ 4 ಬೌಂಡರಿ, 2 ಸಿಕ್ಸರ್ ಸೇರಿವೆ. ಅಂತಿಮವಾಗಿ ಗುಜರಾತ್ ಜೈಂಟ್ಸ್ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 167 ರನ್ ಸೇರಿಸಿತು. ಮುಂಬೈ ಇಂಡಿಯನ್ಸ್ ಪರ ಅಮೇಲಿಯಾ ಕೆರ್ 2 ವಿಕೆಟ್ ಉರುಳಿಸಿದರು.
ಕಳಪೆ ಆರಂಭ
ಗುರಿಯನ್ನು ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡದ ಆರಂಭ ಕಳಪೆಯಾಗಿತ್ತು. ಆರಂಭಿಕ ಆಟಗಾರ್ತಿ ಹ್ಯಾಲಿ ಮ್ಯಾಥ್ಯೂಸ್ (6),ನ್ಯಾಟ್ ಸಿವರ್-ಬ್ರಂಟ್ (2) ಬಿಗ್ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾದರು. ಸ್ಟಾರ್ ಆಟಗಾರ್ತಿ ಅಮೇಲಿಯಾ ಕೆರ್ 2 ಬೌಂಡರಿ ನೆರವಿನಿಂದ 20 ರನ್ ಬಾರಿಸಿದರು. ಮುಂಬೈ ತಂಡದ ಪರ ಅಮೇಲಿಯಾ ಕೆರ್ ಹಾಗೂ ಹರ್ಮನ್ ಪ್ರೀತ್ ಕೌರ್ 30 ಎಸೆತಗಳಲ್ಲಿ 45 ರನ್ ಸಿಡಿಸಿತು.

5ನೇ ವಿಕೆಟ್‌ಗೆ ಅಮನ್‌ಜೋತ್ ಕೌರ್ ಹಾಗೂ ಹರ್ಮನ್ ಪ್ರೀತ್ ಕೌರ್ ಜೋಡಿ ಸಹ ಅಬ್ಬರಿಸಿತು. ಈ ಜೋಡಿ 31 ಎಸೆತಗಳಲ್ಲಿ 44 ರನ್ ಸೇರಿಸಿತು. ಅಮನ್‌ಜೋತ್ ಕೌರ್ 13 ರನ್ ಬಾರಿಸಿದ್ದಾಗ ಪೆವಿಲಿಯನ್ ಸೇರಿದರು. ಉಳಿದ ಬ್ಯಾಟರ್‌ಗಳು ರನ್ ಕಲೆ ಹಾಕುವಲ್ಲಿ ವಿಫಲರಾದರು. ನಾಯಕಿ ಹರ್ಮನ್ ಪ್ರೀತ್ ಕೌರ್ ಏಕಾಂಗಿ ಹೋರಾಟ ನಡೆಸಿದರು. ಇವರು 48 ಎಸೆತಗಳಲ್ಲಿ ಅಜೇಯ 82 ರನ್ ಸಿಡಿಸಿದರು. ಇವರ ಕ್ಲಾಸಿಕ್ ಆಟದಲ್ಲಿ 8 ಬೌಂಡರಿ, 4 ಸಿಕ್ಸರ್ ಸೇರಿವೆ. ಅಂತಿಮವಾಗಿ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 156 ರನ್ ಸೇರಿಸಿ ಸೋಲು ಕಂಡಿತು.
ಮುಂಬೈ ಪ್ಲೇ ಆಫ್ ಲೆಕ್ಕಾಚಾರ
ಮುಂಬೈ ಇಂಡಿಯನ್ಸ್ ಡಬ್ಲ್ಯೂಪಿಎಲ್ ಅಂಕಪಟ್ಟಿಯಲ್ಲಿ 8 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಫೆಬ್ರವರಿ 1 ರಂದು ನಡೆಯಲಿರುವ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಯುಪಿ ವಾರಿಯರ್ಸ್ ಪಂದ್ಯದ ಮೇಲೆ ಇವರ ಚಿತ್ತ ನೆಟ್ಟಿದೆ. ಈ ಪಂದ್ಯದಲ್ಲಿ ಯುಪಿ ವಾರಿಯರ್ಸ್ ಗೆಲುವು ದಾಖಲಸಬೇಕು. ಹೀಗೆ ಆದಲ್ಲಿ ಮುಂಬೈ, ಡೆಲ್ಲಿ, ಯುಪಿ ತಂಡದ ಅಂಕಗಳು ಸಮನಾಗುತ್ತದೆ. ಆಗ ರನ್ ರೇಟ್ ಮೇಲೆ ಎಲ್ಲರ ಗಮನವಿರುತ್ತದೆ. ಒಂದು ವೇಳೆ ಡೆಲ್ಲಿ ಈ ಪಂದ್ಯದಲ್ಲಿ ಜಯ ಸಾಧಿಸಿದರೆ ಸುಲಭವಾಗಿ ಪ್ಲೇ ಆಫ್‌ಗೆ ಪ್ರವೇಶ ಪಡೆಯುತ್ತದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications