ನವಿ ಮುಂಬೈ: ನಾಲ್ಕನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್‌ನ 7ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಯುಪಿ ವಾರಿಯರ್ಸ್ ತಂಡಗಳು ಕಾದಾಟ ನಡೆಸಲಿವೆ. ಉಭಯ ತಂಡಗಳು ಈಗಾಗಲೇ ಆಡಿರುವ ಎರಡೂ ಪಂದ್ಯಗಳಲ್ಲಿ ಸೋಲು ಕಂಡಿದ್ದು ಮೊದಲ ಗೆಲುವಿನ ನಗೆಯನ್ನು ಯಾರು ಬೀಗುತ್ತಾರೆ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಿದ್ದ ಮೆಗ್ ಲ್ಯಾನಿಂಗ್ ಈ ಬಾರಿ ಯುಪಿ ವಾರಿಯರ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ.
ಉಭಯ ತಂಡಗಳಲ್ಲೂ ಸ್ಟಾರ್ ಆಟಗಾರ್ತಿಯರು ಇದ್ದು ಭರವಸೆ ಮೂಡಿಸಿದ್ದಾರೆ. ಡೆಲ್ಲಿ ತಂಡದ ಆರಂಭಿಕ ಆಟಗಾರ್ತಿ ಶೆಫಾಲಿ ವರ್ಮಾ ಲೀಗ್‌ನಲ್ಲಿ ದೊಡ್ಡ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾಗಿದ್ದು, ಇವರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ವಿಕೆಟ್ ಕೀಪರ್ ಬ್ಯಾಟರ್ ಲಿಜೆಲ್ ಲೀ ಕಳೆದ ಪಂದ್ಯದಲ್ಲಿ ಆಡಿದ ಧಾಟಿಯಲ್ಲಿ ಬ್ಯಾಟ್ ಮಾಡಿದರೆ ಗೆಲುವಿನ ಕನಸು ಕಾಣಬಹುದಾಗಿದೆ.

ಬಿರುಸಿನ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿರುವ ಲಾರಾ ವೊಲ್ವಾರ್ಡ್, ಜೆಮಿಮಾ ರೋಡ್ರಿಗಸ್ ಸಮಯೋಚಿತ ಆಟವನ್ನು ಆಡಬೇಕಿದೆ. ಆಲ್‌ರೌಂಡರ್‌ಗಳು ತಂಡಕ್ಕೆ ಬಲ ನೀಡಬೇಕಿದೆ. ಡೆಲ್ಲಿ ತಂಡದಲ್ಲಿ ಸ್ಟಾರ್ ಬೌಲರ್‌ಗಳು ಇದ್ದಾರೆ. ಕಳೆದ ಪಂದ್ಯದಲ್ಲಿ ಹ್ಯಾಟ್ರಿಕ್ ಸೇರಿದಂತೆ 5 ವಿಕೆಟ್ ಪಡೆದಿರುವ ನಂದಿನಿ ಶರ್ಮಾ ಅವರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.
ದೆಹಲಿ ಕ್ಯಾಪಿಟಲ್ಸ್ ಸಂಭಾವ್ಯ ತಂಡ: ಶಫಾಲಿ ವರ್ಮಾ, ಲಿಜೆಲ್ ಲೀ (ವಿಕೆಟ್ ಕೀಪರ್), ಲಾರಾ ವೊಲ್ವಾರ್ಡ್, ಜೆಮಿಮಾ ರೋಡ್ರಿಗಸ್ (ಕ್ಯಾಪ್ಟನ್), ಮರಿಜಾನ್ನೆ ಕಪ್, ನಿಕಿ ಪ್ರಸಾದ್, ಚಿನೆಲ್ಲೆ ಹೆನ್ರಿ, ಸ್ನೇಹ ರಾಣಾ, ಮಿನ್ನು ಮಣಿ, ಎನ್ ಶ್ರೀ ಚರಣಿ, ನಂದಿನಿ ಶರ್ಮಾ.

ಯುಪಿ ವಾರಿಯರ್ಸ್ ಸಹ ಗುಜರಾತ್ ಜೈಂಟ್ಸ್ ಹಾಗೂ ಆರ್‌ಸಿಬಿ ವಿರುದ್ಧ ಆಡಿದ ಎರಡೂ ಪಂದ್ಯಗಳಲ್ಲಿ ಸೋಲು ಕಂಡಿದೆ. ಖ್ಯಾತನಾಮ ಆಟಗಾರರು ಈ ತಂಡದಲ್ಲಿ ಇದ್ದು ಇವರು ತಮ್ಮ ಕ್ಷಮತೆಗೆ ತಕ್ಕ ಆಟವನ್ನು ಆಡಬೇಕಿದೆ. ನಾಯಕಿ ಮೆಗ್ ಲ್ಯಾನಿಂಗ್ ಅಬ್ಬರಿಸುವ ಅನಿವಾರ್ಯತೆ ಇದೆ. ಆಲ್‌ರೌಂಡರ್‌ಗಳಾದ ದೀಪ್ತಿ ಶರ್ಮಾ, ಡಿಯಾಂಡ್ರಾ ಡಾಟಿನ್, ಸೋಫಿ ಎಕ್ಲೆಸ್ಟೋನ್ ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ.
ಯುಪಿ ತಂಡದ ಬೌಲರ್‌ಗಳು ಕರಾರುವಾಕ್ ದಾಳಿಯನ್ನು ನಡೆಸುವ ಅನಿವಾರ್ಯತೆ ಇದೆ. ಆಶಾ ಶೋಭನಾ, ಶಿಖಾ ಪಾಂಡೆ, ಕ್ರಾಂತಿ ಗೌಡ್ ಸರಿಯಾದ ಸ್ಥಳದಲ್ಲಿ ಬೌಲಿಂಗ್ ಮಾಡಿ ವಿಕೆಟ್ ಬೇಟೆ ನಡೆಸಬೇಕಿದೆ. ದೀಪ್ತಿ ಶರ್ಮಾ ತಮ್ಮ ಸ್ಪಿನ್ ಮ್ಯಾಜಿಕ್ ಮೂಲಕ ಎದುರಾಳಿಗಳಿಗೆ ಕಾಡಬಲ್ಲರು.
ಯುಪಿ ಸಂಭಾವ್ಯ ತಂಡ: ಕಿರಣ್ ನವಗಿರೆ, ಮೆಗ್ ಲ್ಯಾನಿಂಗ್ (ಕ್ಯಾಪ್ಟನ್), ಫೋಬೆ ಲಿಚ್‌ಫೀಲ್ಡ್, ಹರ್ಲೀನ್ ಡಿಯೋಲ್, ಶ್ವೇತಾ ಸೆಹ್ರಾವತ್ (ವಿಕೆಟ್ ಕೀಪರ್), ಡಿಯಾಂಡ್ರಾ ಡಾಟಿನ್, ದೀಪ್ತಿ ಶರ್ಮಾ, ಸೋಫಿ ಎಕ್ಲೆಸ್ಟೋನ್, ಆಶಾ ಶೋಭನಾ, ಶಿಖಾ ಪಾಂಡೆ, ಕ್ರಾಂತಿ ಗೌಡ್.
ಮಹಿಳಾ ಪ್ರೀಮಿಯರ್ ಲೀಗ್‌ನ 7ನೇ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ನಲ್ಲಿ ನೇರವಾಗಿ ವೀಕ್ಷಿಸಬಹುದಾಗಿದೆ. ಅಲ್ಲದೆ ಆನ್‌ಲೈನ್‌ನಲ್ಲಿ ಜಿಯೋ ಹಾಟ್ ಸ್ಟಾರ್‌ನಲ್ಲಿ ನೋಡಬಹುದಾಗಿದೆ.
ಡೆಲ್ಲಿ ಹಾಗೂ ಯುಪಿ ನಡುವಣ ಪಂದ್ಯ ಭಾರತೀಯ ಕಾಲಮನದಂತೆ ಸಂಜೆ 7.30ಕ್ಕೆ ಆರಂಭವಾಗಲಿದೆ. ಪಂದ್ಯಕ್ಕೂ ಅರ್ಧ ಗಂಟೆ ಮುನ್ನ ಟಾಸ್ ನಡೆಯಲಿದೆ.
ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣ ಬ್ಯಾಟರ್‌ಗಳಿಗೆ ಸಹಾಯ ನೀಡಲಿದೆ. ಈ ಮೈದಾನದಲ್ಲಿ ಎರಡು ಬಾರಿ 200ಕ್ಕೂ ಹೆಚ್ಚು ರನ್ ಕಲೆ ಹಾಕಲಾಗಿದೆ. ಟಾಸ್ ಗೆದ್ದ ತಂಡ ಬೌಲಿಂಗ್ ಮಾಡುವ ಸಾಧ್ಯತೆ ಇದೆ.