ವಡೋದರಾ: ನಾಲ್ಕನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ ರೋಚಕ ಘಟ್ಟದತ್ತ ಮುಖ ಮಾಡಿದೆ. ಭಾನುವಾರ ಲೀಗ್ ಹಂತದ ಕೊನೆಯ ಪಂದ್ಯ ನಡೆಯಲಿದ್ದು, ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಯುಪಿ ವಾರಿಯರ್ಸ್ ತಂಡಗಳು ಕಾದಾಟ ನಡೆಸಲಿವೆ. ಈಗಾಗಲೇ ಗುಜರಾತ್ ಜೈಂಟ್ಸ್ ತಂಡ ಪ್ಲೇ ಆಫ್ ಪ್ರವೇಶ ಪಡೆದಿದ್ದು, ಇನ್ನೊಂದು ಸ್ಥಾನದ ಬಗ್ಗೆ ಇಂದು ಹೋರಾಟ ನಡೆಯಲಿದೆ. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಗೆದ್ದರೆ ಪ್ಲೇ ಆಫ್ ಪ್ರವೇಶಿಸಲಿದೆ. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಸೋತಲ್ಲಿ ರನ್ ರೇಟ್ ಲೆಕ್ಕಾಚಾರ ಆರಂಭವಾಗುತ್ತದೆ.
ಭಾನುವಾರ ನಡೆಯುವ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ಗೆ ಮಹತ್ವದಾಗಿದೆ. ಈ ಪಂದ್ಯದಲ್ಲಿ ಡೆಲ್ಲಿ ಸುಲಭ ಜಯ ಸಾಧಿಸಿದರೂ ಮುಂದಿನ ಹಂತದ ಆಸೆ ಫಲಿಸುತ್ತದೆ. ಹೀಗಾಗಿ ಜೆಮಿಮಾ ಪಡೆ ಸ್ಥಿರ ಪ್ರದರ್ಶನ ನೀಡಿ ಎರಡು ಪೂರ್ಣ ಅಂಕಗಳನ್ನು ಕಲೆ ಹಾಕುವ ಇರಾದೆ ಪ್ಲ್ಯಾನ್ ಮಾಡಿಕೊಂಡಿದೆ. ಇನ್ನು ಯುಪಿ ವಾರಿಯರ್ಸ್ ಈ ಪಂದ್ಯವನ್ನು ದೊಡ್ಡ ಮೊತ್ತದ ಅಂತದಿಂದ ಗೆಲ್ಲುವ ಅನಿವಾರ್ಯತೆ ಇದೆ. ಅಂದಾಗ ಮಾತ್ರ ಮುಂದಿನ ಹಂತದ ಕನಸು ನನಸಾಗುತ್ತದೆ.

ಲೀಗ್ ಹಂತದಲ್ಲಿ ಉಭಯ ತಂಡಗಳು ಈ ಮೊದಲು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲ ಬ್ಯಾಟ್ ಮಾಡಿದ ಯುಪಿ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 154 ರನ್ ಕಲೆ ಹಾಕಿತು. ಗುರಿಯನ್ನು ಬೆನ್ನಟ್ಟಿದ ಡೆಲ್ಲಿ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 158 ರನ್ ಸೇರಿಸಿತು.
ಉಭಯ ತಂಡಗಳಿಗೂ ಈ ಪಂದ್ಯ ಮಹತ್ವದಾಗಿದೆ. ಎರಡೂ ತಂಡಗಳಲ್ಲಿ ಸ್ಟಾರ್ ಆಟಗಾರ್ತಿಯರು ಇದ್ದಾರೆ. ಡೆಲ್ಲಿ ತಂಡದ ಪರ ಶಫಾಲಿ ವರ್ಮಾ ಹಾಗೂ ಲಿಜೆಲ್ ಲೀ ತಂಡದ ಪರ ಭರ್ಜರಿ ಆರಂಭವನ್ನು ನೀಡುವ ಅನಿವಾರ್ಯತೆ ಇದೆ. ಇನ್ನು ಮಧ್ಯಮ ಕ್ರಮಾಂಕದಲ್ಲಿ ನಾಯಕಿ ಜೆಮಿಮಾ ರೋಡಿಗ್ರಸ್ ಅಬ್ಬರದ ಆಟ ನೀಡುವ ಅನಿವಾರ್ಯತೆ ಇದೆ. ಇನ್ನು ಬೌಲರ್‌ಗಳು ಬಿಗುವಿನ ದಾಳಿ ನಡೆಸಿ ತಂಡಕ್ಕೆ ನಾಲ್ಕನೇ ಗೆಲುವಿನ ಮಾಲೆ ತೊಡಿಸಬೇಕಿದೆ. ಇನ್ನು ಯುಪಿ ತಂಡದಲ್ಲಿರುವ ಸ್ಟಾರ್ ಆಟಗಾರ್ತಿಯರಾದ ಮೆಗ್ ಲ್ಯಾನಿಂಗ್, ಶ್ವೇತಾ ಸೆಹ್ರಾವತ್, ಆಲ್‌ರೌಂಡರ್ ದೀಪ್ತಿ ಶರ್ಮಾ ತಮ್ಮ ಜವಾಬ್ದಾರಿಯನ್ನು ಅರಿತು ಆಡಿದರೆ ಪ್ಲೇ ಆಫ್ ಆಸೆ ಕಾಣಬಹುದಾಗಿದೆ.
ಶಫಾಲಿ ವರ್ಮಾ, ಲಿಜೆಲ್ ಲೀ (ವಿಕೆಟ್ ಕೀಪರ್), ಲಾರಾ ವೊಲ್ವಾರ್ಡ್, ಜೆಮಿಮಾ ರೋಡ್ರಿಗಸ್ (ನಾಯಕಿ), ಮರಿಜಾನೆ ಕಪ್, ನಿಕಿ ಪ್ರಸಾದ್, ಸ್ನೇಹ ರಾಣಾ, ಚಿನೆಲ್ ಹೆನ್ರಿ/ಅಲಾನಾ ಕಿಂಗ್, ಮಿನ್ನು ಮಣಿ, ಎನ್ ಶ್ರೀ ಚರಣಿ, ನಂದನಿ ಶರ್ಮಾ.

ಮೆಗ್ ಲ್ಯಾನಿಂಗ್ (ನಾಯಕಿ), ದೀಪ್ತಿ ಶರ್ಮಾ, ಏಮಿ ಜೋನ್ಸ್ (ವಿಕೆಟ್ ಕೀಪರ್), ಹರ್ಲೀನ್ ಡಿಯೋಲ್, ಶ್ವೇತಾ ಸೆಹ್ರಾವತ್, ಚ್ಲೋಯ್ ಟ್ರಯಾನ್/ಡಿಯಾಂಡ್ರಾ ಡಾಟಿನ್, ಸಿಮ್ರಾನ್ ಶೇಖ್, ಸೋಫಿ ಎಕ್ಲೆಸ್ಟೋನ್, ಆಶಾ ಶೋಭನಾ, ಶಿಖಾ ಪಾಂಡೆ, ಕ್ರಾಂತಿ ಗೌಡ್.
ಕೋಟಂಬಿ ಕ್ರೀಡಾಂಗಣವು ಸ್ಪಿನ್ನರ್‌ಗಳಿಗೆ ಹೆಚ್ಚಿನ ನೆರವು ನೀಡುತ್ತಿದೆ. ಈ ಪಂದ್ಯಕ್ಕೆ ಇಬ್ಬನಿ ಕಾಟ ನೀಡಲಿದೆ. ಹೀಗಾಗಿ ಟಾಸ್ ಮಹತ್ವದ ಪಾತ್ರವನ್ನು ವಹಿಸಲಿದೆ.
ಮಹಿಳಾ ಪ್ರೀಮಿಯರ್ ಲೀಗ್‌ನ ಲೀಗ್ ಹಂತದ ಕೊನೆಯ ಪಂದ್ಯ 7.30ಕ್ಕೆ ಆರಂಭವಾಗಲಿದೆ. ಪಂದ್ಯ ಆರಂಭಕ್ಕೂ ಅರ್ಧಗಂಟೆ ಮುನ್ನ ನಡೆಯಲಿದೆ.
ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಯುಪಿ ವಾರಿಯರ್ಸ್ ನಡುವಣ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೋಡಬಹುದು. ಇನ್ನು ಆನ್‌ಲೈನ್‌ನಲ್ಲಿ ಈ ಪಂದ್ಯವನ್ನು ಜಿಯೋ ಹಾಟ್‌ಸ್ಟಾರ್‌ನಲ್ಲಿ ವೀಕ್ಷಿಸಬಹುದು.