WPL 2026 DC Vs MI: ಡಬ್ಲ್ಯೂಪಿಎಲ್ 2026ರ 13ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಭರ್ಜರಿ ಗೆಲುವು ಸಾಧಿಸಿತು. ಡೆಲ್ಲಿ 7 ವಿಕೆಟ್‌ಗಳಿಂದ ಗೆದ್ದು ಬೀಗಿತು. ಹಾಗಾದ್ರೆ, ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ವಡೋದರಾದ ಬಿಸಿಎ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಡೆಲ್ಲಿ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆಯೇ ಮೊದಲು ಬ್ಯಾಟ್ ಬೀಸಿದ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು ಕೇವಲ 154 ರನ್‌ಗಳ ಸಾಧಾರಣ ಮೊತ್ತ ಕಲೆಹಾಕಿ 155 ರನ್‌ಗಳ ಟಾರ್ಗೆಟ್ ನೀಡಿತು. ಈ ಗುರಿ ಬೆನ್ನತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್ 19 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 155 ರನ್ ಕಲೆಹಾಕಿ ಗೆಲುವು ಸಾಧಿಸಿತು.

ಡೆಲ್ಲಿ ಕ್ಯಾಪಿಟಲ್ಸ್ ನಾಯಕಿ ಜೆಮಿಮಾ ರೋಡ್ರಿಗಸ್ ಅವರು ಭರ್ಜರಿ ಅರ್ಧಶತಕ ಸಿಡಿಸಿದರು. ಗೆಲ್ಲಲು 155 ರನ್‌ಗಳ ಗುರಿಯನ್ನು ಪಡೆದ ಡೆಲ್ಲಿ ಇನ್ನು ಒಂದು ಓವರ್ ಬಾಕಿ ಇರುವಂತೆಯೇ 3 ವಿಕೆಟ್ ನಷ್ಟಕ್ಕೆ 155 ರನ್ ಬಾರಿಸಿ ಜನಭೇರಿ ಬಾರಿಸಿತು. ಎರಡು ಪಂದ್ಯಗಳನ್ನು ಗೆದ್ದಿರುವ ಡೆಲ್ಲಿ ಇದೀಗ ಅಂಕಪಟ್ಟಿಯಲ್ಲಿ 4 ಅಂಕಗಳನ್ನು ಗಳಿಸಿದೆ.
ಡೆಲ್ಲಿ ಪರ ಆರಂಭಿಕ ಆಟಗಾರ್ತಿಯರಾದ ಶಫಾಲಿ ವರ್ಮಾ ಮತ್ತು ಲಿಜೆಲ್ ಲೀ ಮೊದಲ ವಿಕೆಟ್‌ಗೆ 63 ಜೊತೆಯಾಟ ಆಡಿದರು. ಈ ಮೂಲಕ ಇವರು ತಂಡಕ್ಕೆ ಉತ್ತಮ ಅಡಿಪಾಯ ಹಾಕಿದರು. ಶಫಾಲಿ 29 ರನ್(24), ಲಿಜೆಲ್ ಲೀ 46 ರನ್ (28) ಸಿಡಿಸಿ ವಿಕೆಟ್ ಒಪ್ಪಿಸಿದರು.
ಇನ್ನೂ ಬಳಿಕ ಬಂದ ನಾಯಕಿ ಜೆಮಿಮಾ ಅಜೇಯ 5 ಬೌಂಡರಿ, 1 ಸಿಕ್ಸರ್ ಬಾರಿಸುವ ಮೂಲಕ 51 ರನ್ ಗಳಿಸಿದರ. ಮರಿಜಾನೆ ಕಪ್ ಅಜೇಯ 10 ರನ್ ಸಿಡಿಸಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು. ಇನ್ನೂ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದ ಡೆಲ್ಲಿ ಈ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ 4 ಅಂಕ ಗಳಿಸಿ 4ನೇ ಸ್ಥಾನಕ್ಕೇರಿದೆ.