WPL 2026: ಪಂದ್ಯ ನಡೆಯುವ ಸಮಯ, ಸ್ಥಳ, ನೇರ ಪ್ರಸಾರದ ಪೂರ್ತಿ ಮಾಹಿತಿ
ಮಹಿಳಾ ಪ್ರೀಮಿಯರ್ ಲೀಗ್ 2026 ಜನವರಿ 9 ರಿಂದ ಫೆಬ್ರವರಿ 5 ರವರೆಗೆ ನಡೆಯಲಿದೆ. ಈ ಆವೃತ್ತಿಯ ಪಂದ್ಯಗಳು ನವಿ ಮುಂಬೈ ಮತ್ತು ವಡೋಧರಾದಲ್ಲಿ ನಡೆಯಲಿವೆ. ಮುಂಬೈ ಇಂಡಿಯನ್ಸ್ ತಂಡ 2 ಬಾರಿ ಪ್ರಶಸ್ತಿಗೆ ಮುತ್ತಿಟ್ಟಿದೆ. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ಸತತ ಮೂರು ಬಾರಿ ಫೈನಲ್‌ಗೆ ಅರ್ಹತೆ ಪಡೆದಿತ್ತು. ಆದರೆ ಪ್ರಶಸ್ತಿ ಗೆಲ್ಲುವಲ್ಲಿ ವಿಫಲವಾಗಿದೆ.
ಈ ಬಾರಿಯ ಲೀಗ್‌ನ್ನು ಎರಡು ಮೈದಾನದಲ್ಲಿ ಆಡಿಸಲು ನಿರ್ಧರಿಸಲಾಗಿದೆ. ಉದ್ಘಾಟನಾ ಪಂದ್ಯ ಸೇರಿದಂತೆ ಒಟ್ಟು 11 ಪಂದ್ಯಗಳಿಗೆ ನವಿ ಮುಂಬೈನಲ್ಲಿ ನಡೆಯಲಿವೆ. ಉಳಿದ 11 ಪಂದ್ಯಗಳಿಗೆ ವಡೋಧರಾ ಅಂಗಳ ಆತಿಥ್ಯ ನೀಡಲಿದೆ. ಉದ್ಘಾಟನಾ ಪಂದ್ಯಕ್ಕೂ ಮುನ್ನ ನಡೆಯುವ ಮನೋರಂಜನಾ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕ ಯೋ ಯೋ ಹನಿಸಿಂಗ್ ಪ್ರದರ್ಶನ ನೀಡಲಿದ್ದಾರೆ. ಈ ಕಾರ್ಯಕ್ರಮ 6.45ಕ್ಕೆ ನಡೆಯಲಿದೆ. ಈ ಕಾರ್ಯಕ್ರಮದ ಬಳಿಕ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಾದಾಟ ನಡೆಸಲಿವೆ.

ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಒಟ್ಟು ಎಷ್ಟು ತಂಡಗಳು ಭಾಗವಹಿಸಲಿವೆ?
ಡೆಲ್ಲಿ ಕ್ಯಾಪಿಟಲ್ಸ್, ಮುಂಬೈ ಇಂಡಿಯನ್ಸ್, ಆರ್‌ಸಿಬಿ, ಗುಜರಾಟ್ ಜೈಂಟ್ಸ್, ಯುಪಿ ವಾರಿಯರ್ಸ್ ತಂಡಗಳು ಪ್ರಶಸ್ತಿಗಾಗಿ ಕಾದಾಟ ನಡೆಸಲಿವೆ.
ಪಂದ್ಯ ನಡೆಯುವ ಸಮಯ ಯಾವಾಗ?
ಮಹಿಳಾ ಪ್ರೀಮಿಯರ್ ಲೀಗ್‌ನ ಉದ್ಘಾಟನಾ ಪಂದ್ಯ ಸಂಜೆ 7.30ಕ್ಕೆ ನಡೆಯಲಿದೆ. ಪಂದ್ಯ ಆರಂಭಕ್ಕೂ ಅರ್ಧಗಂಟೆಗೂ ಮುನ್ನ ಟಾಸ್ ನಡೆಯಲಿದೆ.
ಪಂದ್ಯ ಪ್ರಸಾರವಾಗುವುದು ಎಲ್ಲಿ?
ಮಹಿಳಾ ಪ್ರೀಮಿಯರ್ ಲೀಗ್‌ನ ನಾಲ್ಕನೇ ಆವೃತ್ತಿಯ ಪಂದ್ಯಗಳು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಪ್ರಸಾರವಾಗಲಿದೆ. ಇನ್ನು ಆನ್‌ಲೈನ್‌ನಲ್ಲಿ ಅಭಿಮಾನಿಗಳು ಜಿಯೋ ಹಾಟ್‌ಸ್ಟಾರ್‌ನಲ್ಲಿ ನೋಡಬಹುದಾಗಿದೆ.
ಆರ್‌ಸಿಬಿ ತಂಡವನ್ನು ಮುನ್ನಡೆಸುತ್ತಿರುವ ಆಟಗಾರ್ತಿ ಯಾರು?
ನಾಲ್ಕನೇ ಆವೃತ್ತಿಯ ಡಬ್ಲ್ಯೂಪಿಎಲ್‌ನಲ್ಲಿ ಆರ್‌ಸಿಬಿ ತಂಡವನ್ನು ಸ್ಮೃತಿ ಮಂಧಾನ ಮುನ್ನಡೆಸಲಿದ್ದಾರೆ.
ಮುಂಬೈ ಇಂಡಿಯನ್ಸ್ ತಂಡದ ನಾಯಕಿ ಯಾರು?
ಮುಂಬೈ ಇಂಡಿಯನ್ಸ್ ತಂಡವನ್ನು ಈ ವರ್ಷ ಹರ್ಮನ್ ಪ್ರೀತ್ ಕೌರ್ ಮುನ್ನಡೆಸಲಿದ್ದಾರೆ.
ಮುಂಬೈ ಎಷ್ಟು ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ?
ಮುಂಬೈ ಪಡೆ ಒಟ್ಟು 2 ಬಾರಿ ಪ್ರಶಸ್ತಿಗೆ ಮುತ್ತಿಟಿದೆ.
ಆರ್‌ಸಿಬಿ ತಂಡ ಎಷ್ಟು ಬಾರಿ ಕಪ್ ಗೆದ್ದಿದೆ.
ಸ್ಮೃತಿ ಮಂಧಾನ ಅವರ ಮುಂದಾಳತ್ವದಲ್ಲಿ ಆರ್‌ಸಿಬಿ 2024ರಲ್ಲಿ ಚೊಚ್ಚಲ ಬಾರಿಗೆ ಕಪ್‌ಗೆ ಮುತ್ತಿಟಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications