WPL 2026: ಗೆಲುವಿನ ಹುಡುಕಾಟದಲ್ಲಿ ಡೆಲ್ಲಿ, ಮುಂಬೈ; ಪಂದ್ಯದ ನೇರಪ್ರಸಾರ, ಸಮಯದ ಮಾಹಿತಿ
ವಡೋದರಾ: ಮಹಿಳಾ ಪ್ರೀಮಿಯರ್ ಲೀಗ್ 2025ರ ಫೈನಲಿಸ್ಟ್ ಆಗಿದ್ದ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ನಾಲ್ಕನೇ ಆವೃತ್ತಿಯ ಪಂದ್ಯದಲ್ಲಿ ಮುಖಾಮುಖಿ ಆಗಲಿವೆ. ಮುಂಬೈ ಇಂಡಿಯನ್ಸ್ ಮೂರನೇ ಗೆಲುವಿನ ಕನಸು ಕಾಣುತ್ತಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ 2ನೇ ಗೆಲುವಿನ ಹುಡುಕಾಟದಲ್ಲಿದೆ.
ಮುಂಬೈ ತಂಡವನ್ನು ಅನುಭವಿ ನಾಯಕಿ ಹರ್ಮನ್ ಪ್ರೀತ್ ಕೌರ್ ಮುನ್ನಡೆಸುತ್ತಿದ್ದು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಭವಿಷ್ಯದ ನಾಯಕಿ ಜೆಮಿಮಾ ರೊಡ್ರಿಗಸ್ ಮುನ್ನಡೆಸುತ್ತಿದ್ದಾರೆ. ಹೀಗಾಗಿ ಈ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಎರಡೂ ತಂಡಗಳಲ್ಲಿ ಸ್ಟಾರ್ ಆಟಗಾರ್ತಿಯರು ಇದ್ದಾರೆ. ಪಂದ್ಯದ ಗತಿಯನ್ನು ಬದಲಿಸಬಲ್ಲ ಕ್ಷಮತೆಯನ್ನು ಈ ಆಟಗಾರ್ತಿಯರು ಹೊಂದಿದ್ದಾರೆ.

ಲೀಗ್ ಹಂತದಲ್ಲಿ ಉಭಯ ತಂಡಗಳು ನವಿ ಮುಂಬೈನಲ್ಲಿ ಮೊದಲ ಬಾರಿಗೆ ಮುಖಾಮುಖಿ ಆಗಿದ್ದವು. ಈ ವೇಳೆ ಮೊದಲು ಬ್ಯಾಟ್ ಮಾಡಿದ್ದ ಮುಂಬೈ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 195 ರನ್ ಕಲೆ ಹಾಕಿತ್ತು. ಸ್ಪರ್ಧಾತ್ಮಕ ಮೊತ್ತವನ್ನು ಹಿಂಬಾಲಿಸಿದ ಡೆಲ್ಲಿ 19 ಓವರ್‌ಗಳಲ್ಲಿ 145 ರನ್ ಸಿಡಿಸಿ ಆಲೌಟ್ ಆಗಿತ್ತು. ಹೀಗಾಗಿ ಮಂಗಳವಾರ ನಡೆಯಲಿರುವ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.
ಹರ್ಮನ್ ಆಕರ್ಷಣೆ
ಮುಂಬೈ ತಂಡದಲ್ಲಿ ಸ್ಟಾರ್ ಆಟಗಾರ್ತಿಯರು ಇದ್ದಾರೆ. ಮುಂಬೈ ಪರ ಆಡಿದ ಐದು ಪಂದ್ಯಗಳಲ್ಲಿ ಸ್ಥಿರ ಪ್ರದರ್ಶನ ನೀಡಿದ ಆಟಗಾರ್ತಿಯರ ಪಟ್ಟಿಯಲ್ಲಿ ನಾಯಕಿ ಹರ್ಮನ್ ಪ್ರೀತ್ ಕೌರ್ ಮೊದಲ ಸ್ಥಾನದಲ್ಲಿದ್ದಾರೆ. ಇವರು ತಮ್ಮ ಮೇಲೆ ತಂಡ ಇಟ್ಟ ನಂಬಿಕೆಗೆ ಪೂರಕವಾಗಿ ಬ್ಯಾಟ್ ಮಾಡಬೇಕಿದೆ. ಇನ್ನು ನ್ಯಾಟ್ ಸಿವರ್-ಬ್ರಂಟ್, ನಿಕೋಲಾ ಕ್ಯಾರಿ, ಸಜೀವನ್ ಸಜನಾ, ತಂಡ ತಮ್ಮ ಮೇಲೆ ಇಟ್ಟ ನಂಬಿಕೆಗೆ ಪೂರಕವಾಗಿ ಬ್ಯಾಟ್ ಮಾಡಬೇಕಿದೆ. ಅಂದಾಗ ಮೂರನೇ ಗೆಲುವಿನ ಕನಸು ನನಸಾಗುತ್ತದೆ.

ಮುಂಬೈ ತಂಡದ ಸ್ಟಾರ್ ಆಟಗಾರ್ತಿಯರು ಸರಿಯಾದ ಸ್ಥಳದಲ್ಲಿ ಬೌಲಿಂಗ್ ನಡೆಸಿ ಎದುರಾಳಿ ಬ್ಯಾಟರ್‌ಗಳನ್ನು ಕಾಡುವ ಅನಿವಾರ್ಯತೆ ಇದೆ. ಲೀಗ್‌ನಲ್ಲಿ ಅಮೆಲಿಯಾ ಕೆರ್ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರ್ತಿಯರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು ಅವರ ಮೇಲೆ ಭರವಸೆ ಹೆಚ್ಚಿದೆ.
ಮುಂಬೈ ಇಂಡಿಯನ್ಸ್ ಸಂಭಾವ್ಯ ತಂಡ: ಜಿ ಕಮಲಿನಿ, ಹೈಲಿ ಮ್ಯಾಥ್ಯೂಸ್, ನ್ಯಾಟ್ ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್, ಅಮೆಲಿಯಾ ಕೆರ್, ಅಮನ್ಜೋತ್ ಕೌರ್, ನಿಕೋಲಾ ಕ್ಯಾರಿ, ಸಜೀವನ್ ಸಜನಾ, ಸಂಸ್ಕೃತಿ ಗುಪ್ತಾ, ಕ್ರಾಂತಿ ರೆಡ್ಡಿ, ತ್ರಿವೇಣಿ ವಸಿಷ್ಠ.
ಡೆಲ್ಲಿ ತಂಡದ ಬ್ಯಾಟಿಂಗ್ ವಿಭಾಗದಲ್ಲೂ ಸ್ಫೋಟಕ ಆಟಗಾರ್ತಿಯರು ಇದ್ದಾರೆ. ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ ಮತ್ತು ಲಿಜೆಲ್ ಲೀ ಭರ್ಜರಿ ಫಾರ್ಮ್‌ನಲ್ಲಿದ್ದು ಭರವಸೆ ಮೂಡಿಸಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಲಾರಾ ವೊಲ್ವಾರ್ಡ್ ನಾಯಕಿ ಜೆಮಿಮಾ ರೋಡ್ರಿಗಸ್ ಮತ್ತು ಆಲ್‌ರೌಂಡರ್ ಮರಿಜಾನ್ ಕಪ್ ತಂಡದ ಅಗತ್ಯಕ್ಕೆ ತಕ್ಕಂತೆ ಆಟವನ್ನು ಆಡಬೇಕಿದೆ. ಬೌಲಿಂಗ್‌ನಲ್ಲಿ ಸ್ನೇಹ ರಾಣಾ ಮತ್ತು ಮಿನ್ನು ಮಣಿ ಸ್ಪಿನ್ ಜಾದು ನಡೆಸಲು ಸಿದ್ಧರಾಗಿದ್ದಾರೆ. ನಂದಿನಿ ಶರ್ಮಾ ಮೇಲೆ ಎಲ್ಲರ ಕಣ್ಣು ನೆಟ್ಟಿರಲಿದೆ.
ಡೆಲ್ಲಿ ಕ್ಯಾಪಿಟಲ್ಸ್ ಸಂಭಾವ್ಯ ತಂಡ: ಲಿಜೆಲ್ ಲೀ, ಶಫಾಲಿ ವರ್ಮಾ, ಲಾರಾ ವೊಲ್ವಾರ್ಡ್, ಜೆಮಿಮಾ ರೋಡ್ರಿಗಸ್, ಮರಿಜಾನ್ ಕಪ್, ನಿಕಿ ಪ್ರಸಾದ್, ಚಿನೆಲ್ಲೆ ಹೆನ್ರಿ, ಸ್ನೇಹ ರಾಣಾ, ಮಿನ್ನು ಮಣಿ, ಎನ್ ಶ್ರೀ ಚರಣಿ, ನಂದನಿ ಶರ್ಮಾ.
ಪಂದ್ಯ ಆರಂಭವಾಗುವುದು ಯಾವಾಗ?
ಡೆಲ್ಲಿ ಕ್ಯಾಪಿಟಲ್ಸ್, ಮುಂಬೈ ಇಂಡಿಯನ್ಸ್ ನಡುವಣ ಪಂದ್ಯ ಸಂಜೆ 7.30ಕ್ಕೆ ಆರಂಭವಾಗಲಿದ್ದು, ಟಾಸ್ ಪಂದ್ಯಕ್ಕೂ ಅರ್ಧಗಂಟೆ ಮುನ್ನ ನಡೆಯಲಿದೆ.
ಡೆಲ್ಲಿ, ಮುಂಬೈ ಪಂದ್ಯವನ್ನು ವೀಕ್ಷಿಸುವುದು ಎಲ್ಲಿ?
ನಾಲ್ಕನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್‌ನ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದು. ಇನ್ನು ಆನ್‌ಲೈನ್‌ನಲ್ಲಿ ಈ ಪಂದ್ಯವನ್ನು ಜಿಯೋ ಹಾಟ್ ಸ್ಟಾರ್‌ನಲ್ಲಿ ನೋಡಬಹುದು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications