For Quick Alerts
ALLOW NOTIFICATIONS  
For Daily Alerts
 

WPL 2026: RCB ಫೈನಲ್‌ ಪ್ರವೇಶಿಸುತ್ತಾ? 2 ಪ್ಲೇ ಆಫ್‌ ಸ್ಥಾನಗಳಿಗೆ 4 ತಂಡಗಳ ಫೈಟ್‌

ಮಹಿಳಾ ಪ್ರೀಮಿಯರ್ ಲೀಗ್‌ ರೋಚಕ ಘಟ್ಟದತ್ತ ಮುಖ ಮಾಡಿದೆ. ಈಗಾಗಲೇ ಎಲ್ಲಾ ತಂಡಗಳು ಏಳು ಲೀಗ್‌ ಪಂದ್ಯಗಳನ್ನು ಆಡಿವೆ. ಈಗ ಲೀಗ್‌ನಲ್ಲಿ ಪ್ಲೇ ಆಫ್‌ ಲೆಕ್ಕಾಚಾರ ಜೋರಾಗಿದೆ. ಲೀಗ್‌ನಲ್ಲಿ ಭಾಗವಹಿಸಿರುವ 5 ತಂಡಗಳಿಗೂ ಪ್ಲೇ ಆಫ್‌ ಪ್ರವೇಶಿಸುವ ಅವಕಾಶ ಇದೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ಆಡಿರುವ 7 ಪಂದ್ಯಗಳಲ್ಲಿ 5 ಜಯ, 2 ಸೋಲು ಕಂಡಿದ್ದು 10 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಹೀಗಾಗಿ ಆರ್‌ಸಿಬಿ ಪ್ಲೇ ಆಫ್‌ ಪ್ರವೇಶಿಸುವುದು ಖಚಿತ.

ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಒಟ್ಟು ಮೂರು ತಂಡಗಳು ಪ್ಲೇಆಫ್‌ಗೆ ಪ್ರವೇಶ ಪಡೆಯುತ್ತವೆ. ಅದರಲ್ಲಿ ಅಗ್ರಸ್ಥಾನವನ್ನು ಹೊಂದಿರುವ ತಂಡ ನೇರವಾಗಿ ಫೈನಲ್‌ಗೆ ಪ್ರವೇಶ ಪಡೆದರೆ, ಉಳಿದ ಎರಡು ತಂಡಗಳು ಪ್ಲೇ ಆಫ್‌ನಲ್ಲಿ ಕಾದಾಟ ನಡೆಸಲಿವೆ. ಈಗ ಉಳಿದಿರುವ 2 ಸ್ಥಾನಗಳಿಗೆ 4 ತಂಡಗಳ ನಡುವೆ ಜಿದ್ದಾಜಿದ್ದಿನ ಹೋರಾಟ ನಡೆಯುತ್ತಿದೆ.

WPL 2026 Playoff Scenarios

ಮಂಗಳವಾರ ಗುಜರಾತ್‌ ಜೈಂಟ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವೆ ಲೀಗ್‌ ಹಂತದ 17ನೇ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್‌ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 174 ರನ್‌ ಕಲೆ ಹಾಕಿತು. ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್‌ ಕೊನೆಯ ಓವರ್‌ನಲ್ಲಿ 9 ರನ್‌ ಬಾರಿಸುವಲ್ಲಿ ವಿಫಲವಾಗಿ ಸೋಲು ಕಂಡಿತು. ಅಂತಿಮವಾಗಿ ಡೆಲ್ಲಿ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 174 ರನ್‌ ಕಲೆ ಹಾಕಿತು.

ಗುಜರಾತ್ ಜೈಂಟ್ಸ್‌

ಗುಜರಾತ್ ಜೈಂಟ್ಸ್ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಆಡಿದ 7 ಪಂದ್ಯಗಳಲ್ಲಿ 4 ಗೆಲುವು, 3 ಸೋಲು ಕಂಡಿದ್ದು, 8 ಅಂಕಗಳೊಂದಿಗೆ (-0.271 ರ ನಿವ್ವಳ ರನ್ ರೇಟ್‌) ಪಾಯಿಂಟ್‌ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಜನವರಿ 30ರಂದು ಗುಜರಾತ್‌ ತನ್ನ ಲೀಗ್‌ ಹಂತದ ಕೊನೆಯ ಪಂದ್ಯವನ್ನು ಆಡಲಿದೆ. ಈ ಪಂದ್ಯದಲ್ಲಿ ಜೈಂಟ್ಸ್‌ ಮುಂಬೈ ಇಂಡಿಯನ್ಸ್‌ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿದರೆ, ತಂಡವು ನೇರವಾಗಿ ಪ್ಲೇ ಆಫ್‌ಗೆ ಪ್ರವೇಶ ಪಡೆಯಲಿದೆ. ಈ ಪಂದ್ಯದಲ್ಲಿ ಗುಜರಾತ್‌ ಸೋತರೆ, ಪ್ಲೇ ಆಫ್‌ ಪ್ರವೇಶಿಸಲು ಇತರ ಪಂದ್ಯಗಳ ಫಲಿತಾಂಶಗಳನ್ನು ಅವಲಂಬಿಸಬೇಕಾಗುತ್ತದೆ.

ಮುಂಬೈ ಇಂಡಿಯನ್ಸ್‌

ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಈ ಋತುವಿನಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲವಾಗಿದೆ. ಆಡಿದ 7 ಪಂದ್ಯಗಳಲ್ಲಿ ಮುಂಬೈ 3 ಗೆಲುವು, 4 ಸೋಲು ಕಂಡಿದ್ದು, 6 ಅಂಕಗಳೊಂದಿಗೆ ( 0.146 ರ ನಿವ್ವಳ ರನ್ ರೇಟ್‌) ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಇನ್ನು ಮುಂಬೈ ತನ್ನ ಕೊನೆಯ ಲೀಗ್‌ ಪಂದ್ಯದಲ್ಲಿ ಜಯ ಸಾಧಿಸಿದರೆ, ಪ್ಲೇಆಫ್ ಸ್ಥಾನವನ್ನು ಬಹುತೇಕ ಖಚಿತ.

ಡೆಲ್ಲಿ ಕ್ಯಾಪಿಟಲ್ಸ್‌

ಗುಜರಾತ್ ಜೈಂಟ್ಸ್ ವಿರುದ್ಧದ 3 ರನ್‌ ಸೋಲು ಡೆಲ್ಲಿ ಕ್ಯಾಪಿಟಲ್ಸ್‌ನ ಪ್ಲೇಆಫ್ ಹಾದಿಯನ್ನು ಕಷ್ಟವಾಗಿಸಿದೆ. ಫೆಬ್ರವರಿ 1 ರಂದು ಜೆಮಿಮಾ ಪಡೆ ಯುಪಿ ವಾರಿಯರ್ಸ್ ವಿರುದ್ಧ ಕಾದಾಟ ನಡೆಸಲಿದೆ. ಈ ಪಂದ್ಯ ಡೆಲ್ಲಿ ಪಾಲಾಗಿ ಮಹತ್ವದಾಗಿದೆ. ಅಲ್ಲದೆ ಈ ಪಂದ್ಯದಲ್ಲಿ ಡೆಲ್ಲಿ ದೊಡ್ಡ ಅಂತರದ ಗೆಲುವು ದಾಖಲಿಸುವ ಅನಿವಾರ್ಯತೆ ಇದೆ. ಡೆಲ್ಲಿ ಕ್ಯಾಪಿಟಲ್ಸ್ ತಮ್ಮ 7 ಪಂದ್ಯಗಳಲ್ಲಿ 3ರಲ್ಲಿ ಜಯ ಸಾಧಿಸಿದ್ದು, 6 ಅಂಕವನ್ನು ಹೊಂದಿದ್ದು, ಈ ವೇಳೆ ತಂಡದ ರನ್‌ ರೇಟ್‌ -0.164 ಆಗಿದೆ. ಮುಂದಿನ ಪಂದ್ಯಗಳಲ್ಲಿ ಇದನ್ನು ಸುಧಾರಿಸುವ ಅನಿವಾರ್ಯತೆ ಇದೆ.

ಯುಪಿ ವಾರಿಯರ್ಸ್‌

ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಯುಪಿ ವಾರಿಯರ್ಸ್‌ ಸಹ ಪ್ಲೇ ಆಫ್‌ ಪ್ರವೇಶಿಸುವ ಆಸೆಯನ್ನು ಹೊಂದಿದೆ. ಈ ತಂಡ ಲೀಗ್‌ ಹಂತದಲ್ಲಿ ಇನ್ನು 2 ಪಂದ್ಯಗಳನ್ನು ಆಡಬೇಕಿದೆ. ಮೆಗ್‌ ಲ್ಯಾನಿಂಗ್ ಪಡೆ ಆಡಿದ 6 ಪಂದ್ಯಗಳಲ್ಲಿ 2 ಗೆಲುವಿನೊಂದಿಗೆ 4 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಮುಂದಿನ ಎರಡೂ ಪಂದ್ಯಗಳನ್ನು ಯುಪಿ ಗೆದ್ದಲ್ಲಿ ಮುಂದಿನ ಹಂತವನ್ನು ಪ್ರವೇಶಿಸುವ ಕನಸು ನನಸಾಗುತ್ತದೆ. ಯುಪಿ ಜ.29 ರಂದು ಆರ್‌ಸಿಬಿ ವಿರುದ್ಧ, ಫೆ.1 ರಂದು ಡೆಲ್ಲಿ ವಿರುದ್ಧ ಹೋರಾಟ ನಡೆಸಲಿದೆ.

Story first published: Wednesday, January 28, 2026, 10:00 [IST]
Other articles published on Jan 28, 2026
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+