ನವಿ ಮುಂಬೈ: ಎರಡನೇ ಬಾರಿ ಚಾಂಪಿಯನ್ ಪಟ್ಟದ ಮೇಲೆ ಕಣ್ಣು ನೆಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಶುಕ್ರವಾರ ಗುಜರಾತ್ ಜೈಂಟ್ಸ್ ವಿರುದ್ಧ ಕಾದಾಟವನ್ನು ನಡೆಸಲಿದೆ. ಈ ಪಂದ್ಯದಲ್ಲಿ ಗೆಲುವು ದಾಖಲಿಸಿ ಹ್ಯಾಟ್ರಿಕ್ ಜಯ ಸಾಧಿಸುವ ಕನಸು ಸ್ಮೃತಿ ಪಡೆಯದ್ದಾಗಿದೆ. ಗುಜರಾತ್ ಜೈಂಟ್ಸ್ ಸಹ ಭರ್ಜರಿ ಫಾರ್ಮ್‌ನಲ್ಲಿದ್ದು, ಲೀಗ್‌ನಲ್ಲಿ ಮೂರನೇ ಗೆಲುವಿನ ಹುಡುಕಾಟದಲ್ಲಿದೆ.
ಸ್ಮೃತಿ ಪಡೆಯ ಸಂಘಟಿತ ಆಟದ ಪ್ರದರ್ಶನದ ಮೇಲೆ ವಿಶ್ವಾಸವನ್ನು ಇಟ್ಟಿದೆ. ಉಭಯ ತಂಡದಲ್ಲೂ ಪಂದ್ಯದ ಗತಿಯನ್ನು ಬದಲಿಸಬಲ್ಲ ಸ್ಟಾರ್ ಆಟಗಾರ್ತಿಯರು ಇದ್ದಾರೆ. ಲಯಕ್ಕಾಗಿ ಪರದಾಡುತ್ತಿದ್ದ ಸ್ಮೃತಿ ಈಗ ಮತ್ತೆ ಫಾರ್ಮ್‌ಗೆ ಮರಳಿದ್ದು, ತಂಡಕ್ಕೆ ಆನೆ ಬಲ ತುಂಬಿದಂತೆ ಆಗಿದೆ. ಗುಜರಾತ್ ತಂಡದ ಬ್ಯಾಟಿಂಗ್ ವಿಭಾಗಕ್ಕೆ ಆಶ್ಲೀ ಗಾರ್ಡ್ನರ್ ಆಧಾರ. ಇವರು ಈ ಲೀಗ್‌ನಲ್ಲೂ ಸ್ಥಿರ ಪ್ರದರ್ಶನ ನೀಡುತ್ತಿರುವುದು ತಂಡಕ್ಕೆ ಶಕ್ತಿ ತುಂಬಿದೆ.

ಸಾಮಾನ್ಯವಾಗಿ ನವಿ ಮುಂಬೈ ಪಿಚ್ ಬ್ಯಾಟರ್‌ಗಳಿಗೆ ಅನುಕೂಲ ನೀಡುತ್ತದೆ. ಈ ಪಂದ್ಯದಲ್ಲೂ ಟಾಸ್ ಗೆದ್ದ ತಂಡ ಮೊದಲು ಫೀಲ್ಡಿಂಗ್ ಮಾಡುವ ನಿರ್ಧಾರವನ್ನು ಮಾಡುವ ಸಾಧ್ಯತೆ ಇದೆ. ಎರಡನೇ ಇನಿಂಗ್ಸ್‌ನಲ್ಲಿ ಇಬ್ಬನಿ ಬೀಳುವ ಸಾಧ್ಯತೆ ಇದೆ.
ಆರ್‌ಸಿಬಿ ತಂಡದ ಪರ ಇನಿಂಗ್ಸ್ ಆರಂಭಿಸುವ ಗ್ರೇಸ್ ಹ್ಯಾರಿಸ್ ಹಾಗೂ ಸ್ಮೃತಿ ಮಂಧಾನ ಜೋಡಿ ಭರ್ಜರಿ ಜೊತೆಯಾಟವನ್ನು ನೀಡುವ ಅವಶ್ಯಕತೆ ಇದೆ. ಗ್ರೇಸ್ ಹ್ಯಾರಿಸ್ ಯುಪಿ ವಿರುದ್ಧದ ಪಂದ್ಯದಲ್ಲಿ ಮನಮೋಹಕ ಬ್ಯಾಟಿಂಗ್ ನಡೆಸಿ ಗಮನ ಸೆಳೆದಿದ್ದರು. ಹೀಗಾಗಿ ಹ್ಯಾರಿಸ್ ಹಾಗೂ ಸ್ಮೃತಿ ಮೇಲೆ ಭರವಸೆ ಹೆಚ್ಚಿದೆ. ಮಧ್ಯಮ ಕ್ರಮಾಂಕದಲ್ಲಿ ರಿಚಾ ಘೋಷ್, ದಯಾಳನ್ ಹೇಮಲತಾ ತಮ್ಮ ಶಿಸ್ತು ಬದ್ಧ ಆಟದಿಂದ ತಂಡಕ್ಕೆ ನೆರವಾಗಬೇಕಿದೆ.
ಆಲ್‌ರೌಂಡರ್‌ಗಳಾದ ರಾಧಾ ಯಾದವ್, ನಾಡಿನ್ ಡಿ ಕ್ಲರ್ಕ್, ಅರುಂಧತಿ ರೆಡ್ಡಿ ತಂಡ ತಮ್ಮ ಮೇಲೆ ಇಟ್ಟ ನಂಬಿಕೆಗೆ ಪೂರಕವಾಗಿ ಆಡಬೇಕಿದೆ. ಸ್ಪಿನ್ ಬೌಲರ್ ಶ್ರೇಯಾಂಕಾ ಪಾಟೀಲ್, ವೇಗಿ ಲಿನ್ಸೆ ಸ್ಮಿತ್ ಹಾಗೂ ಲಾರೆನ್ ಬೆಲ್ ಈ ಹಿಂದೆ ನಡೆಸಿದಂತೆ ಬೌಲಿಂಗ್ ದಾಳಿ ನಡೆಸುವ ಅನಿವಾರ್ಯತೆ ಇದೆ.

ಆರ್‌ಸಿಬಿ ಸಂಭಾವ್ಯ ತಂಡ: ಸ್ಮೃತಿ ಮಂಧಾನ, ಗ್ರೇಸ್ ಹ್ಯಾರಿಸ್, ರಿಚಾ ಘೋಷ್, ದಯಾಳನ್ ಹೇಮಲತಾ, ರಾಧಾ ಯಾದವ್, ನಾಡಿನ್ ಡಿ ಕ್ಲರ್ಕ್, ಅರುಂಧತಿ ರೆಡ್ಡಿ, ಶ್ರೇಯಾಂಕಾ ಪಾಟೀಲ್, ಗೌತಮಿ ನಾಯ್ಕ್, ಲಿನ್ಸೆ ಸ್ಮಿತ್, ಲಾರೆನ್ ಬೆಲ್
ಗುಜರಾತ್ ಜೈಂಟ್ಸ್ ತಂಡದಲ್ಲೂ ಸ್ಟಾರ್ ಆಟಗಾರ್ತಿಯರು ಇದ್ದಾರೆ. ಇವರು ಪಂದ್ಯದ ಗತಿಯನ್ನೇ ಬದಲಿಸಬಲ್ಲ ಆಟಗಾರರು ಇದ್ದಾರೆ. ಬೆತ್ ಮೂನಿ, ಸೋಫಿ ಡಿವೈನ್, ಕನಿಕಾ ಆಹುಜಾ, ಗಾರ್ಡ್ನರ್ ತಂಡದ ಪರ ಮಿಂಚಿನ ಆಟವನ್ನು ಪ್ರದರ್ಶಿಸಬೇಕಿದೆ. ಇನ್ನು ವೇಗದ ಬೌಲರ್‌ಗಳು ಹಾಗೂ ಸ್ಪಿನ್ ಬೌಲರ್‌ಗಳು ಬಿಗುವಿನ ದಾಳಿ ಆರ್‌ಸಿಬಿ ಬ್ಯಾಟರ್‌ಗಳನ್ನು ಕಾಡಬೇಕಿದೆ.
ಗುಜರಾತ್ ಸಂಭಾವ್ಯ ತಂಡ: ಬೆತ್ ಮೂನಿ , ಸೋಫಿ ಡಿವೈನ್, ಯಾಸ್ತಿಕಾ ಭಾಟಿಯಾ, ಡ್ಯಾನಿಯಲ್ ವ್ಯಾಟ್-ಹೋಡ್ಜ್, ಆಶ್ಲೀ ಗಾರ್ಡ್ನರ್ (ನಾಯಕಿ), ಜಾರ್ಜಿಯಾ ವೇರ್ಹ್ಯಾಮ್, ಭಾರ್ತಿ ಫುಲ್ಮಾಲಿ, ಕಾಶ್ವಿ ಗೌತಮ್, ತನುಜಾ ಕನ್ವರ್, ರೇಣುಕಾ ಸಿಂಗ್ ಠಾಕೂರ್ ಮತ್ತು ಪ್ರಿಯಾ ಮಿಶ್ರಾ.
ಗುಜರಾತ್ ಜೈಂಟ್ಸ್ ಹಾಗೂ ಆರ್‌ಸಿಬಿ ನಡುವಣ ಪಂದ್ಯ ಸಂಜೆ 7.30ಕ್ಕೆ ಆರಂಭವಾಗಲಿದ್ದು, ಪಂದ್ಯಕ್ಕೂ ಅರ್ಧಗಂಟೆಗೂ ಮುನ್ನ ಟಾಸ್ ನಡೆಯಲಿದೆ.
ಗುಜರಾತ್, ಆರ್‌ಸಿಬಿ ಪಂದ್ಯ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರವಾಗಲಿದೆ. ಇನ್ನು ಜಿಯೋ ಹಾಟ್ ಸ್ಟಾರ್‌ನಲ್ಲಿ ಆನ್‌ಲೈನ್‌ನಲ್ಲಿ ನೋಡಬಹುದಾಗಿದೆ.