ಮಹಿಳಾ ಪ್ರೀಮಿಯರ್ ಲೀಗ್‌ನ ರೀಟೈನ್ ಹಾಗೂ ಆಟಗಾರರು ರಿಲೀಸ್ ಮಾಡಲು ಇಂದು (ನವೆಂಬರ್ 5) ಕೊನೆಯ ದಿನವಾಗಿತ್ತು. ಫ್ರಾಂಚೈಸಿಗಳು ಅಳೆದು ತೂಗಿ ಆಟಗಾರರನ್ನು ತಂಡಗಳಲ್ಲಿ ಉಳಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ. ಹಾಗಿದ್ದರೆ ಯಾವೆಲ್ಲಾ ಫ್ರಾಂಚೈಸಿ ಯಾವೆಲ್ಲಾ ಆಟಗಾರರನ್ನು ಉಳಿಸಿಕೊಂಡಿದೆ. ಯಾವೆಲ್ಲಾ ಆಟಗಾರರನ್ನು ರಿಲೀಸ್ ಮಾಡಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
ಮಹಿಳಾ ಪ್ರೀಮಿಯರ್ ಲೀಗ್ 2026ರಂದು ಈ ಬಾರಿ ಮೆಗಾ ಹರಾಜು ನಡೆಯಲಿದೆ. ಹೀಗಾಗಿ ತಂಡಗಳು ಅಳೆದು ತೂಗಿ ಆಟಗಾರ್ತಿಯರನ್ನು ಉಳಿಸಿಕೊಳ್ಳಬೇಕಾಗುತ್ತದೆ. ಐದು ತಂಡಗಳು ತಾವು ಉಳಿಸಿಕೊಂಡ ಆಟಗಾರ್ತಿಯರು ಹಾಗೂ ರಿಲೀಸ್ ಮಾಡಿದ ಆಟಗಾರ್ತಿಯರ ಪಟ್ಟಿಯನ್ನು ಬಿಸಿಸಿಐಗೆ ನೀಡಿದೆ. ಮೆಗಾ ಹರಾಜು ನವೆಂಬರ್ 27 ರಂದು ನವದೆಹಲಿಯಲ್ಲಿ ನಡೆಯಲಿದೆ. ಗುಜರಾತ್ ಜೈಂಟ್ಸ್, ಮುಂಬೈ ಇಂಡಿಯನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳು ಈ ಹಾರಿಜಿನಲ್ಲಿ ಭಾಗವಹಿಸಲಿವೆ. ಫ್ರಾಂಚೈಸಿ ಉಳಿಸಿಕೊಂಡ ಹಾಗೂ ಕೈ ಬಿಟ್ಟ ಆಟಗಾರ್ತಿಯರ ಪಟ್ಟಿ ಇಲ್ಲಿದೆ.

ಆರ್‍ಸಿಬಿ ತಂಡ ಅಳೆದು ತೂಗಿ ಆಟಗಾರರಿಗೆ ಮಣೆ ಹಾಕಿದೆ. ತಂಡದ ನಾಯಕಿ ಸ್ಮೃತಿ ಮಂಧಾನ ಅವರನ್ನು ಆರ್‌ಸಿಬಿ ಉಳಿಸಿಕೊಂಡಿದ್ದು, ಆಸ್ಟ್ರೇಲಿಯಾದ ಸ್ಟಾರ್ ಆಟಗಾರ್ತಿ ಎಲ್ಲಿಸ್ ಪೆರ್ರಿ ಅವರಿಗೂ ತಂಡ ರೆಡ್ ಕಾರ್ಪೆಟ್ ಹಾಕಿದೆ. ಇನ್ನು ಏಕದಿನ ವಿಶ್ವಕಪ್‌ನಲ್ಲಿ ತಮ್ಮ ಬಿರುಸಿನ ಬ್ಯಾಟಿಂಗ್‌ನಿಂದ ಸದ್ದು ಮಾಡಿದ್ದ ವಿಕೆಟ್ ಕೀಪರ್ ಬ್ಯಾಟರ್ ರಿಚಾ ಘೋಷ್, ಕನ್ನಡತಿ ಶ್ರೇಯಾಂಕಾ ಪಾಟೀಲ್ ಅವರನ್ನು ತಂಡ ಉಳಿಸಿಕೊಂಡಿದೆ.
ಯುಪಿ ವಾರಿಯರ್ಸ್ ತಂಡವು 2026 ರ WPL ಋತುವಿಗಾಗಿ ಒಬ್ಬ ಆಟಗಾರ್ತಿಯನ್ನು ಮಾತ್ರ ಉಳಿಸಿಕೊಂಡಿದೆ. ಯುಪಿ ತಂಡ ಶ್ವೇತಾ ಸೆಹ್ರಾವತ್ ಅವರನ್ನು ಮಾತ್ ಉಳಿಸಿಕೊಂಡಿದ್ದಾರೆ. ಏಕದಿನ ವಿಶ್ವಕಪ್‌ನ ಸರಣಿ ಶ್ರೇಷ್ಠ ಆಟಗಾರ್ತಿ ದೀಪ್ತಿ ಶರ್ಮಾ ಅವರನ್ನು ಕೈ ಬಿಟ್ಟಿದೆ.
ಮುಂಬೈ ಇಂಡಿಯನ್ಸ್ ವಿಶ್ವಕಪ್ ವಿಜೇತ ತಂಡದ ನಾಯಕ ಹರ್ಮನ್ಪ್ರೀತ್ ಕೌರ್ ಅವರನ್ನು ಉಳಿಸಿಕೊಂಡಿದೆ. ಇಂಗ್ಲೆಂಡ್ ತಂಡದ ನ್ಯಾಟ್ ಸೀವರ್ ಬ್ರಂಟ್, ಸ್ಟಾರ್ ಆಟಗಾರ್ತಿ ಅಮನ್‌ಜೋತ್ ಕೌರ್, ಜಿ ಕಮಲಿನಿ ಮತ್ತು ಹೇಲಿ ಮ್ಯಾಥ್ಯೂಸ್ ಅವರನ್ನು ಉಳಿಸಿಕೊಂಡಿದೆ. ಇನ್ನುಗುಜಾರತ್ ತಂಡ ಕೇವಲ ಇಬ್ಬರು ಆಟಗಾರ್ತಿಯರನ್ನು ಮಾತ್ರ ಉಳಿಸಿಕೊಂಡಿದೆ ಆಶ್ಲೀ ಗಾರ್ಡ್ನರ್ ಮತ್ತು ಬೆತ್ ಮೂನಿ ತಂಡದ ಪರ ಮುಂದಿನ ಆವೃತ್ತಿಗಳಲ್ಲಿ ಆಡಲಿದ್ದಾರೆ.
ದೆಹಲಿ ಕ್ಯಾಪಿಟಲ್ಸ್ ತಂಡ ಮುಂದಿನ ಆವೃತ್ತಿಗಾಗಿ ಅನ್ನಾಬೆಲ್ ಸದರ್ಲ್ಯಾಂಡ್, ಮರಿಜಾನ್ನೆ ಕಪ್, ಜೆಮಿಮಾ ರೊಡ್ರಿಗಸ್, ಶಫಾಲಿ ವರ್ಮಾ ಮತ್ತು ನಿಕಿ ಪ್ರಸಾದ್ ಅವರನ್ನು ಉಳಿಸಿಕೊಂಡಿದ್ದು, ಉಳಿದ ಆಟಗಾರ್ತಿಯರನ್ನು ಹರಾಜಿನಲ್ಲಿ ಕೊಳ್ಳಲು ಪ್ಲ್ಯಾನ್ ಮಾಡಿಕೊಂಡಿದೆ.