Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WPL Squads 2023 : ಎಲ್ಲಾ 5 ತಂಡಗಳ ಸಂಪೂರ್ಣ ಸ್ಕ್ವಾಡ್ ಹೀಗಿದೆ: ಯಾವ ತಂಡ ಬಲಿಷ್ಠ?

WPL Auction 2023: List of all five teams complete squads

ವುಮೆನ್ಸ್ ಪ್ರೀಮಿಯರ್ ಲೀಗ್‌ನ ಚೊಚ್ಚಲ ಹರಾಜು ಪ್ರಕ್ರಿಯೆ ಯಶಸ್ವಿಯಾಗಿ ನಡೆದಿದ್ದು ಟೂರ್ನಿಯ ಆರಂಭಕ್ಕೆ ವೇದಿಕೆ ಸಿದ್ದವಾಗಿದೆ. 2023ರ ಡಬ್ಲ್ಯುಪಿಎಲ್ ಆವೃತ್ತಿಯಲ್ಲಿ ಸೆಣೆದಾಡಲು ಎಲ್ಲಾ ಫ್ರಾಂಚೈಸಿಗಳು ತಮ್ಮ ತಂಡವನ್ನು ಬಲಿಷ್ಠಗೊಳಿಸಿದ್ದು ತಂಡಗಳ ಸಮತೋಲನ ಹಾಗೂ ಬಲಾಬಲ ಈಗ ಚರ್ಚೆಯ ಮುಖ್ಯ ವಿಷಯವಾಗಿದೆ.

ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಶನ್ ಸೆಂಟರ್‌ನಲ್ಲಿ ನಡೆದ ಹರಾಜು ಪ್ರಕ್ರಿಯೆಯಲ್ಲಿ 10 ಸುತ್ತಿನಲ್ಲಿ ಹರಾಜು ನಡೆಯಿತು. ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಯುಪಿ ವಾರಿಯರ್ಸ್ ಮತ್ತು ಗುಜರಾತ್ ಜೈಂಟ್ಸ್ ತಂಡಗಳು ಈ ಹರಾಜಿನಲ್ಲಿ ಭಾಗವಹಿಸಿದೆ. ಹರಾಜಿನಲ್ಲಿ ಒಟ್ಟು 448 ಆಟಗಾರ್ತಿಯರು ಅದೃಷ್ಠ ಪರೀಕ್ಷೆಗೆ ಇಳಿದಿದ್ದರೆ 87 ಆಟಗಾರ್ತಿಯರು ಹರಾಜಾಗಿದ್ದಾರೆ. 30 ವಿದೇಶಿ ಆಟಗಾರ್ತಿಯರು ಹಾಗೂ 57 ಭಾರತೀಯ ಆಟಗಾರ್ತಿಯರು ಹರಾಜಾಗಿದ್ದಾರೆ.

ಒಟ್ಟಾರೆಯಾಗಿ ಭಾರತದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ಆರ್‌ಸಿಬಿ ತಂಡಕ್ಕೆ 3.40 ಕೋಟಿ ಮೊತ್ತಕ್ಕೆ ಹರಾಜಾಗುವ ಮೂಲಕ ಅತ್ಯಂತ ದುಬಾರಿ ಆಟಗಾರ್ತಿ ಎನಿಸಿಕೊಂಡಿದ್ದಾರೆ. ಇನ್ನು ಇಂಗ್ಲೆಂಡ್ ಆಟಗಾರ್ತಿ ನ್ಯಾಟ್ ಸೀವರ್ 3.20 ಕೋಟಿ ರೂಪಾಯಿಗೆ ಹರಾಜಾಗಿದ್ದು ದೊಡ್ಡ ಮೊತ್ತಕ್ಕೆ ಹರಾಜಾದ ವಿದೇಶಿ ಆಟಗಾರ್ತಿ ಎನಿಸಿಕೊಂಡಿದ್ದಾರೆ.

ಈ ಐಪಿಎಲ್‌ನಲ್ಲಿ ಹರಾಜಾದ ಎಲ್ಲಾ 5 ತಂಡಗಳ ಸಂಪೂರ್ಣ ಸ್ಕ್ವಾಡ್ ಇಲ್ಲಿದೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು

ರಾಯಲ್ ಚಾಲೆಂಜರ್ಸ್ ಬೆಂಗಳೂರು

ಸ್ಮೃತಿ ಮಂಧಾನ, ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ರೇಣುಕಾ ಸಿಂಗ್, ರಿಚಾ ಘೋಷ್, ಇಂದ್ರಾಣಿ ರಾಯ್, ದಿಶಾ ಕಸತ್, ಶ್ರೇಯಾಂಕಾ ಪಾಟೀಲ್, ಕನಿಕಾ ಅಹುಜಾ, ಆಶಾ ಶೋಭನಾ, ಎರಿನ್ ಬರ್ನ್ಸ್, ಹೀದರ್ ನೈಟ್, ಡೇನ್ ವ್ಯಾನ್ ನೀಕರ್ಕ್, ಪ್ರೀತಿ ಬೋಸ್, ಪೂನಂ ಖೇಮ್ನಾರ್, ಕೋಮಲ್ ಝಂಝಾದ್, ಮೇಗನ್ ಶುಟ್, ಸಹನಾ ಪವಾರ್

ಮುಂಬೈ ಇಂಡಿಯನ್ಸ್

ಮುಂಬೈ ಇಂಡಿಯನ್ಸ್

ಹರ್ಮನ್‌ಪ್ರೀತ್ ಕೌರ್, ನ್ಯಾಟ್ ಸಿವರ್-ಬ್ರಂಟ್, ಅಮೆಲಿಯಾ ಕೆರ್, ಪೂಜಾ ವಸ್ತ್ರಕರ್, ಯಾಸ್ತಿಕಾ ಭಾಟಿಯಾ, ಹೀದರ್ ಗ್ರಹಾಂ, ಇಸ್ಸಿ ವಾಂಗ್, ಅಮನ್ಜೋತ್ ಕೌರ್, ಧಾರಾ ಗುಜ್ಜರ್, ಸೈಕಾ ಇಶಾಕ್, ಹೇಲಿ ಮ್ಯಾಥ್ಯೂಸ್, ಕ್ಲೋಯ್ ಟ್ರಯಾನ್, ಪ್ರಿಯಾಂಕಾ ಬಾಲಾ, ಹುಮೈರಾ ಕಾಜಿ, ನೀಲಂ ಬಿಶ್ತ್, ಜಿಂತಾಮಣಿ ಕಲಿತಾ, ಸೋನಮ್ ಯಾದವ್

ಗುಜರಾತ್ ಜೈಂಟ್ಸ್

ಗುಜರಾತ್ ಜೈಂಟ್ಸ್

ಆಶ್ಲೇ ಗಾರ್ಡ್ನರ್, ಬೆತ್ ಮೂನಿ, ಸೋಫಿಯಾ ಡಂಕ್ಲಿ, ಅನ್ನಾಬೆಲ್ ಸದರ್ಲ್ಯಾಂಡ್, ಹರ್ಲೀನ್ ಡಿಯೋಲ್, ಡಿಯಾಂಡ್ರಾ ಡಾಟಿನ್, ಸ್ನೇಹ ರಾಣಾ, ಎಸ್ ಮೇಘನಾ, ಜಾರ್ಜಿಯಾ ವಾರೆಹಮ್, ಮಾನ್ಸಿ ಜೋಶಿ, ದಯಾಲನ್ ಹೇಮಲತಾ, ಮೋನಿಕಾ ಪಟೇಲ್, ತನುಜಾ ಕನ್ವರ್, ಸುಷ್ಮಾ ವರ್ಮಾ, ಹರ್ಲಿ ಗಾಲಾ, ಅಶ್ವನಿ ಕುಮಾರಿ, ಪರುಣಿಕಾ ಸಿಸೋಡಿಯಾ, ಶಬ್ಮಾನ್ ಶಕಿಲ್

ಯುಪಿ ವಾರಿಯರ್ಸ್

ಯುಪಿ ವಾರಿಯರ್ಸ್

ಸೋಫಿ ಎಕ್ಲೆಸ್ಟೋನ್, ದೀಪ್ತಿ ಶರ್ಮಾ, ತಹ್ಲಿಯಾ ಮೆಗ್ರಾತ್, ಶಬ್ನಿಮ್ ಇಸ್ಮಾಯಿಲ್, ಅಲಿಸ್ಸಾ ಹೀಲಿ, ಅಂಜಲಿ ಸರ್ವಾಣಿ, ರಾಜೇಶ್ವರಿ ಗಾಯಕ್ವಾಡ್, ಪಾರ್ಶವಿ ಚೋಪ್ರಾ, ಶ್ವೇತಾ ಸೆಹ್ರಾವತ್, ಎಸ್ ಯಶಸ್ರಿ, ಕಿರಣ್ ನವಗಿರೆ, ಗ್ರೇಸ್ ಹ್ಯಾರಿಸ್, ದೇವಿಕಾ ವೈದ್ಯ, ಲಾರೆನ್ ಬೆಲ್, ಲಕ್ಷ್ಮಿ ಯಾದವ್, ಸಿಮ್ರಾನ್ ಶೇಖ್

ಡೆಲ್ಲಿ ಕ್ಯಾಪಿಟಲ್ಸ್

ಡೆಲ್ಲಿ ಕ್ಯಾಪಿಟಲ್ಸ್

ಜೆಮಿಮಾ ರೋಡ್ರಿಗಸ್, ಮೆಗ್ ಲ್ಯಾನಿಂಗ್, ಶಫಾಲಿ ವರ್ಮಾ, ರಾಧಾ ಯಾದವ್, ಶಿಖಾ ಪಾಂಡೆ, ಮರಿಜಾನ್ನೆ ಕಪ್, ಟೈಟಾಸ್ ಸಾಧು, ಆಲಿಸ್ ಕ್ಯಾಪ್ಸೆ, ತಾರಾ ನಾರ್ರಿಸ್, ಲಾರಾ ಹ್ಯಾರಿಸ್, ಜಸಿಯಾ ಅಖ್ತರ್, ಮಿನ್ನು ಮಣಿ, ಪೂನಂ ಯಾದವ್, ತಾನಿಯಾ ಭಾಟಿಯಾ. ಜೆಸ್ ಜೋನಾಸ್ಸೆನ್, ಸ್ನೇಹಾ ದೀಪ್ತಿ, ಅರುಂಧತಿ ರೆಡ್ಡಿ, ಅಪರ್ಣಾ ಮೊಂಡಲ್

Story first published: Tuesday, February 14, 2023, 2:30 [IST]
Other articles published on Feb 14, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+